ಚಿಕ್ಕಮಗಳೂರು: 9ನೇ ತರಗತಿಯಲ್ಲಿ ಫೇಲ್ ಆಗುವ ಭಯದಿಂದ 15 ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಕಡೂರು ತಾಲೂಕಿನ ಡಿ. ಕಾರೇಹಳ್ಳಿಯಲ್ಲಿ ನಡೆದಿದೆ.
ವರ್ಷಿಣಿ(15) ಮೃತಪಟ್ಟ ವಿದ್ಯಾರ್ಥಿನಿಯಾಗಿದ್ದಾಳೆ.ಬಾಣಾವರದ ಖಾಸಗಿ ಶಾಲೆಯಲ್ಲಿ ಓದುತ್ತಿದ್ದ ವರ್ಷಿಣಿ, ವಿದ್ಯಾರ್ಥಿನಿ ವರ್ಷಿಣಿ ಪಾಠದಲ್ಲಿ ಉತ್ತಮ ವಿದ್ಯಾರ್ಥಿನಿಯಾಗಿದ್ದರೂ, ಪರೀಕ್ಷೆಯಲ್ಲಿ ಫೇಲ್ ಆಗುವ ಆತಂಕದಿಂದ ಮನನೊಂದಿದ್ದಳು.
ಶುಂಠಿಗೆ ತಂದಿದ್ದ ಕಳೆನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಘಟನೆಯ ಮಾಹಿತಿ ಪಡೆದ ಕಡೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4