ಕಾರವಾರ: ಉತ್ತರಕನ್ನಡ ಜಿಲ್ಲೆಯ ಭಟ್ಕಳದ ಬೆಳಕೆಯ ಕಟಗೇರಿಯಲ್ಲಿ ಯುವತಿಯೊಬ್ಬಳು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ದೀಕ್ಷಾ ನಾಯ್ಕ(22) ಆತ್ಮಹತ್ಯೆಗೆ ಶರಣಾದವರಾಗಿದ್ದಾರೆ.
ದೀಕ್ಷಾ ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿಯಾಗಿದ್ದು, ಎಂದಿನಂತೆ ಬೆಳಗ್ಗೆ ಕಾಲೇಜಿಗೆ ಹೋಗಿ ಮನೆಗೆ ಬಂದಿದ್ದಳು. ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮಗಳು ಕಾಣದಿದ್ದಾಗ ಪೋಷಕರು ಹುಡುಕಾಟ ನಡೆಸಿದ್ದು, ಕೊನೆಗೆ ಅನುಮಾನಗೊಂಡು ಬಾವಿಯಲ್ಲಿ ನೋಡಿದಾಗ ಮೃತದೇಹವು ಪತ್ತೆಯಾಗಿದೆ.
ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296