ಪ್ರಾರ್ಥನೆ ಮಾಡುವ ಸಂದರ್ಭದಲ್ಲಿ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಗುಂಡ್ಲುಪೇಟೆ ಪಟ್ಟಣದ ಸಿಎಂಐ ಕ್ರಿಶ್ಚಿಯನ್ ಹಾಸ್ಟೆಲ್ ನಲ್ಲಿ ನಡೆದಿದೆ. ಬೆಂಗಳೂರು ಮೂಲದ ಫೆಲಿಶಾ(17) ಮೃತ ಬಾಲಕಿ.
ಸಿಎಂಐ ಹಾಸ್ಟೆಲ್ ನಲ್ಲಿದ್ದುಕೊಂಡು ನಿರ್ಮಲಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಫೆಲಿಶಾ 10 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಈ ನಡುವೆ ಚರ್ಚ್ ನಲ್ಲಿ ಪ್ರಾರ್ಥನೆ ಸಮಯದಲ್ಲಿ ಫೆಲಿಶಾ ಕುಸಿದು ಬಿದ್ದಿದ್ದು ತಕ್ಷಣ ಗುಂಡ್ಲುಪೇಟೆ ಸಾರ್ವಜನಿಕ ಆಸ್ಪತ್ರೆ ದಾಖಲು ಮಾಡಲಾಗಿತ್ತು.
ಆದರೆ ವಿದ್ಯಾರ್ಥಿನಿ ಫೆಲಿಶಾ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾಳೆ. ವಿದ್ಯಾರ್ಥಿನಿ ಶವ ಗುಂಡ್ಲುಪೇಟೆ ಸಾರ್ವಜನಿಕ ಆಸ್ಪತ್ರೆಯಲ್ಲಿಡಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


