nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹೊಳೆನರಸೀಪುರ ಪುರಸಭೆ: ಶಾಸಕರ ಅಸಮಾಧಾನಕ್ಕೆ ಬಲಿಯಾಯಿತೇ ಅಧಿಕಾರಿಯ ದಕ್ಷತೆ? ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ!

    August 25, 2026

    ಕೊರಟಗೆರೆ: ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

    August 25, 2026

    ಕೊರಟಗೆರೆ: ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ; ಚುನಾವಣಾ ನೋಂದಣಾಧಿಕಾರಿ ಸೋಮಪ್ಪ ಕಡಕೋಳ ಸೂಚನೆ

    August 25, 2026
    Facebook Twitter Instagram
    ಟ್ರೆಂಡಿಂಗ್
    • ಹೊಳೆನರಸೀಪುರ ಪುರಸಭೆ: ಶಾಸಕರ ಅಸಮಾಧಾನಕ್ಕೆ ಬಲಿಯಾಯಿತೇ ಅಧಿಕಾರಿಯ ದಕ್ಷತೆ? ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ!
    • ಕೊರಟಗೆರೆ: ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ
    • ಕೊರಟಗೆರೆ: ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ; ಚುನಾವಣಾ ನೋಂದಣಾಧಿಕಾರಿ ಸೋಮಪ್ಪ ಕಡಕೋಳ ಸೂಚನೆ
    • ಹೊಳೆನರಸೀಪುರ: ತಾತನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ: ವೈದ್ಯರ ನೇಮಕಕ್ಕೆ ಗುರುವಾರದವರೆಗೆ ಗಡುವು ನೀಡಿದ ಗ್ರಾಮಸ್ಥರು
    • ತುಮಕೂರು: ಪೆಟ್ರೋಲ್ ಸುರಿದು ಮಹಿಳೆ ಕೊಲೆಗೈದಿದ್ದ ಆರೋಪಿ ಸೆರೆ
    • ಮತದಾರರ ಕರಡು ಪಟ್ಟಿ ಪ್ರಕಟ: 2.37 ಲಕ್ಷ ಮತದಾರರು ಕರಡಿನಿಂದ ಡಿಲೀಟ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ 23 ಕೊನೆಯ ದಿನ
    • “ನೀವು ಹೇಳಿದಂತೆ ಕೇಳದಿದ್ರೆ ದ್ವೇಷಿಸ್ತೀರಾ?”: ಶಾಸಕ ಎಚ್.ಡಿ. ರೇವಣ್ಣಗೆ ಹಾಸನ ಜಿಲ್ಲಾಧಿಕಾರಿ ತಿರುಗೇಟು
    • ಕರ್ನಾಟಕ ಸರ್ಕಾರಕ್ಕೆ ಅದಾನಿ ಕೇವಲ ಒಬ್ಬ ಗುತ್ತಿಗೆದಾರ ಅಷ್ಟೇ: ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊರಟಗೆರೆ: ಬುಗುರಿ ಆಟವಾಡುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿ ಸಾವು
    ಕೊರಟಗೆರೆ July 11, 2026

    ಕೊರಟಗೆರೆ: ಬುಗುರಿ ಆಟವಾಡುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿ ಸಾವು

    By adminJuly 11, 2026No Comments2 Mins Read
    puneeth.jpg

    ಕೊರಟಗೆರೆ: ಶಾಲಾ ಆವರಣದಲ್ಲಿ ಬುಗುರಿ ಆಟವಾಡುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ಪ್ರಥಮ ಪಿಯುಸಿ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ತಾಲೂಕಿನ ಸಿ.ಎನ್.ದುರ್ಗಾ ಹೋಬಳಿ, ತೋವಿನಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೋರಪ್ಪನಹಟ್ಟಿ ಗ್ರಾಮದಲ್ಲಿ ಶುಕ್ರವಾರ ಸಂಜೆ ನಡೆದಿದೆ.
    ಮೃತ ವಿದ್ಯಾರ್ಥಿಯನ್ನು ಪುನೀತ್ ಎಂದು ಗುರುತಿಸಲಾಗಿದೆ. ಆತ ತುಮಕೂರಿನ ಊರುಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಎನ್ನಲಾಗಿದೆ.

    ಸಂಜೆ ಸುಮಾರು 5.30 ಗಂಟೆ ವೇಳೆಗೆ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಇತರ ವಿದ್ಯಾರ್ಥಿಗಳೊಂದಿಗೆ ಬುಗುರಿ ಆಟವಾಡುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಇತ್ತೀಚೆಗೆ ಸುರಿದ ಮಳೆಯಿಂದ ವಿದ್ಯುತ್ ತಂತಿಯಲ್ಲಿದ್ದ ಸ್ಕಿನ್ ಕಳಚಿ, ಗೋಡೆಗೆ ವಿದ್ಯುತ್ ಹರಿದಿರುವ ಶಂಕೆ ವ್ಯಕ್ತವಾಗಿದೆ. ಗೋಡೆಯನ್ನು ಸ್ಪರ್ಶಿಸಿದ ಕ್ಷಣವೇ ಪುನೀತ್ಗೆ ತೀವ್ರ ವಿದ್ಯುತ್ ಶಾಕ್ ತಗುಲಿ ಪ್ರಜ್ಞೆ ತಪ್ಪಿ ಕುಸಿದು ಬಿದ್ದಿದ್ದಾನೆ ಎನ್ನಲಾಗಿದೆ.ಸ್ಥಳೀಯರು ಕೂಡಲೇ ವಿದ್ಯಾರ್ಥಿಯನ್ನು ರಕ್ಷಿಸಿ ತುಮಕೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಆತ ಕೊನೆಯುಸಿರೆಳೆದಿದ್ದಾನೆ.

    ಘಟನೆ ಬಳಿಕ ಆಸ್ಪತ್ರೆ ಮುಂಭಾಗ ಪೋಷಕರು ಹಾಗೂ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು. ಗ್ರಾಮಸ್ಥರು ಮತ್ತು ಸಾರ್ವಜನಿಕರು ಶಾಲಾ ಆಡಳಿತ ಹಾಗೂ ಬೆಸ್ಕಾಂ ಇಲಾಖೆಯ ನಿರ್ಲಕ್ಷ್ಯವೇ ಈ ದುರಂತಕ್ಕೆ ಕಾರಣ ಎಂದು ಆರೋಪಿಸಿದ್ದಾರೆ.

    ಗ್ರಾಮಸ್ಥರ ಪ್ರಕಾರ, ಶಾಲಾ ಆವರಣದಲ್ಲಿ ಜೋತುಬಿದ್ದಿದ್ದ ವಿದ್ಯುತ್ ತಂತಿ ಮತ್ತು ಸ್ಕಿನ್ ಕಳಚಿದ್ದ ವೈರ್ ಕುರಿತು ಹಲವು ಬಾರಿ ಸಂಬಂಧಪಟ್ಟವರಿಗೆ ಮಾಹಿತಿ ನೀಡಲಾಗಿದ್ದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ. ನಿರ್ಲಕ್ಷ್ಯದಿಂದ ಅಮಾಯಕ ವಿದ್ಯಾರ್ಥಿಯ ಜೀವ ಬಲಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ವಿದ್ಯಾರ್ಥಿಯ ಸಾವಿಗೆ ಕಾರಣರಾದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು, ಮೃತ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಹಾಗೂ ಶಾಲಾ ಆವರಣದ ವಿದ್ಯುತ್ ವ್ಯವಸ್ಥೆಯನ್ನು ತಕ್ಷಣ ಸುರಕ್ಷಿತಗೊಳಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

    ಈ ಸಂಬಂಧ ಕೊರಟಗೆರೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು ಸಿಪಿಐ ಮಂಜುನಾಥ್ ಹಾಗೂ ಪಿಎಸ್ಐ ತೀರ್ಥೇಶ್ ಸ್ಥಳ ಪರಿಶೀಲನೆ ನಡೆಸಿ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಕೊರಟಗೆರೆ: ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

    August 25, 2026

    ಕೊರಟಗೆರೆ: ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ; ಚುನಾವಣಾ ನೋಂದಣಾಧಿಕಾರಿ ಸೋಮಪ್ಪ ಕಡಕೋಳ ಸೂಚನೆ

    August 25, 2026

    ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಗೊರವನಹಳ್ಳಿ ಮಹಾಲಕ್ಷ್ಮಿ ಅಮ್ಮನ ದರ್ಶನಕ್ಕೆ ಆಗಮಿಸಿದ ಭಕ್ತಸಾಗರ

    August 22, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಹೊಳೆನರಸೀಪುರ ಪುರಸಭೆ: ಶಾಸಕರ ಅಸಮಾಧಾನಕ್ಕೆ ಬಲಿಯಾಯಿತೇ ಅಧಿಕಾರಿಯ ದಕ್ಷತೆ? ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ!

    August 25, 2026

    ​ಹೊಳೆನರಸೀಪುರ:  ಸ್ಥಳೀಯ ಪುರಸಭೆಯಲ್ಲಿ ಶಾಸಕರ ಅಣತಿಯಂತೆ ಕೆಲಸ ಕಾರ್ಯಗಳು ನಡೆಯುವುದು ಹಾಗೂ ಅವರೇ ಸಭೆಯ ಅಜೆಂಡಾಗಳನ್ನು ನಿರ್ಧರಿಸುವುದು ಹೊಳೆನರಸೀಪುರ ಸಾರ್ವಜನಿಕರಿಗೆ…

    ಕೊರಟಗೆರೆ: ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

    August 25, 2026

    ಕೊರಟಗೆರೆ: ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ; ಚುನಾವಣಾ ನೋಂದಣಾಧಿಕಾರಿ ಸೋಮಪ್ಪ ಕಡಕೋಳ ಸೂಚನೆ

    August 25, 2026

    ಹೊಳೆನರಸೀಪುರ: ತಾತನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ: ವೈದ್ಯರ ನೇಮಕಕ್ಕೆ ಗುರುವಾರದವರೆಗೆ ಗಡುವು ನೀಡಿದ ಗ್ರಾಮಸ್ಥರು

    August 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.