ತುಮಕೂರು: ಅತಿಯಾದ ಮೊಬೈಲ್ ಬಳಕೆಯಿಂದ ಅಪರಾಧ ಚಟುವಟಿಕೆಗಳಲ್ಲಿ ಸಿಲುಕುವುದು ಹೆಚ್ಚಾಗುತ್ತಿದೆ ಎಂದು ಮನೋವೈದ್ಯ ಲೋಕೇಶ್ ಬಾಬು ಆತಂಕ ವ್ಯಕ್ತಪಡಿಸಿದರು.
ನಗರದ ಕಲಾ ಕಾಲೇಜಿನ ಮಹಿಳಾ ವಿದ್ಯಾರ್ಥಿ ನಿಲಯದಲ್ಲಿ ಶುಕ್ರವಾರ ವರದಕ್ಷಿಣೆ ವಿರೋಧಿ ವೇದಿಕೆ, ಸಾಂತ್ವನ ಕೇಂದ್ರದಿಂದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ಮಾನಸಿಕ ಅರಿವು ಕುರಿತ ಸಂವಾದದಲ್ಲಿ ಮಾತನಾಡಿದರು.
ಮೊಬೈಲ್ ನ ಅತಿಯಾದ ಬಳಕೆ ಅನಾಹುತ, ಅಪರಾಧ ಚಟುವಟಿಕೆಗಳಿಗೆ ಆಹ್ವಾನಿಸುತ್ತದೆ. ವಿದ್ಯಾರ್ಥಿ ಸಮೂಹ ಎಚ್ಚರಿಕೆ ವಹಿಸಬೇಕು. ಮೊಬೈಲ್ ಬಳಕೆ ಮನುಷ್ಯರನ್ನು ದಡ್ಡರನ್ನಾಗಿಸುತ್ತಿದೆ. ಎಲ್ಲವನ್ನು ಮೊಬೈಲ್ ನಲ್ಲಿ ನೋಡುತ್ತಾ ವ್ಯಸನಿಗಳಾಗುತ್ತಿದ್ದಾರೆ. ಇದೊಂದು ಮಾನಸಿಕ ಅನಾರೋಗ್ಯ ಎಂದರು.
ಕಲಾ ಕಾಲೇಜು ಪ್ರಾಂಶುಪಾಲರಾದ ಜಿ.ದಾಕ್ಷಾಯಿಣಿ, ಪ್ರಾಧ್ಯಾಪಕ ಬಿ.ಕರಿಯಣ್ಯ, ಲೇಖಕಿ ಬಾ.ಹ.ರಮಾಕುಮಾರಿ, ವರದಕ್ಷಿಣೆ ವಿರೋಧಿ ವೇದಿಕೆ ಅಧ್ಯಕ್ಷೆ ಎಂ.ಸಿ.ಲಲಿತಾ, ಪ್ರಧಾನ ಕಾರ್ಯದರ್ಶಿ ಸಾ.ಚ.ರಾಜಕುಮಾರ್, ಸಾಂತ್ವನ ಕೇಂದ್ರದ ಪಾರ್ವತಮ್ಮ ಇತರರು ಪಾಲ್ಗೊಂಡಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC