ಬೀದರ್: ಜಿಲ್ಲೆಯ ಔರಾದ್ ತಾಲ್ಲೂಕಿನ ಜೀರ್ಗಾ(ಬಿ) ಗ್ರಾಮದ ರಾಷ್ಟ್ರೀಯ ಹೆದ್ದಾರಿ 161ಎ ಯಲ್ಲಿ ಮಂಗಳವಾರ ಬೆಳಗ್ಗೆ 9 ಸುಮಾರಿಗೆ ವಿದ್ಯಾರ್ಥಿ ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ ಹೊಡೆದು ಪರಿಣಾಮ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ತಾಲೂಕಿನ ಜೀರ್ಗಾ(ಬಿ) ಗ್ರಾಮದ ವಿಕಾಸ ಸೋಪಾನ (14) ಗಂಭೀರವಾಗಿ ಗಾಯಗೊಂಡ ವಿದ್ಯಾರ್ಥಿಯನ್ನು ಬೀದರ್ ನಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
ಔರಾದ ಕಡೆಯಿಂದ ವೇಗವಾಗಿ ಚಲಿಸುತ್ತಿದ್ದ ಕಾರು ರಸ್ತೆ ದಾಟುತ್ತಿದ್ದ ವಿದ್ಯಾರ್ಥಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ವಿದ್ಯಾರ್ಥಿ 10 ಅಡಿ ಹಾರಿ ಬಿದ್ದ ಸಿಸಿ ಕ್ಯಾಮೆರಾ ವಿಡಿಯೋ ತುಣುಕು ಇದೀಗ ವೈರಲ್ ಆಗುತ್ತಿದೆ.
ಗ್ರಾಮಸ್ಥರ ಪ್ರತಿಭಟನೆ:
ಅಪಘಾತ ಸಂಭವಿಸಿದನ್ನು ಖಂಡಿಸಿ ಗ್ರಾಮಸ್ಥರು ದಿಢೀರನೇ ಹೆದ್ದಾರಿ ರಸ್ತೆ ತಡೆದು ಪ್ರತಿಭಟನೆ ನಡೆಸಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ದಾಖಲಾದ ವಿದ್ಯಾರ್ಥಿಗೆ ಪರಿಹಾರ ಒದಗಿಸಬೇಕು. ರಾಷ್ಟ್ರೀಯ ಹೆದ್ದಾರಿಯಲ್ಲಿ ಹಂಪ್ಸ್ ಹಾಕಿರುವುದು , ರಸ್ತೆ ಕಾಮಗಾರಿ ನನೆಗುದಿಗೆ ಬಿದ್ದಿರುವದನ್ನು ಖಂಡಿಸಿ ಗ್ರಾಮಸ್ಥರು ಸುಮಾರು 2 ಗಂಟೆಗಳಿಂದ ಪ್ರತಿಭಟನೆ ನಡೆಸುತ್ತಿರುವ ಪೋಷಕರು, ಗ್ರಾಮಸ್ಥರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಸ್ಥಳಕ್ಕೆ ಔರಾದ್ ತಹಸೀಲ್ದಾರ್ ಮಲ್ಲಶೆಟ್ಟಿ ಚಿದ್ರೆ, ಸಿಪಿಐ ಆರ್.ಕೆ.ಠಾಕೂರ್, ಸಂತಪೂರ ಠಾಣೆ ಪಿಎಸ್ ಐ ನಂದಕುಮಾರ್ ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿಗಳು ಭೇಟಿ ನೀಡಿದ್ದಾರೆ.
ಪ್ರತಿಭಟನೆಯಿಂದ ಶಾಲಾ–ಕಾಲೇಜು ತೆರಳುವ ವಿದ್ಯಾರ್ಥಿಗಳು, ನೌಕರರಿಗೆ, ಪ್ರಯಾಣಿಕರು ಪರದಾಡಬೇಕಾಯಿತು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q