ತುಮಕೂರು: ಜಿಲ್ಲೆಯ ತಿಪಟೂರು ಟೌನ್ ವ್ಯಾಪ್ತಿಯ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಪುಟ್ಟ ಮಕ್ಕಳನ್ನು ಕೂಲಿ ಕಾರ್ಮಿಕರಂತೆ ಬಳಸಿಕೊಂಡು ಕೆಲಸ ಮಾಡಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಹಾರೆ ಗುದ್ದಲಿಯಂತಹ ಉಪಕರಣಗಳಲ್ಲಿ ಹಿಡಿದುಕೊಂಡು ಮಕ್ಕಳು ಕೂಲಿ ಕಾರ್ಮಿಕರಂತೆ ಕೆಲಸ ಮಾಡುತ್ತಿರುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ.
ಪುಟ್ಟ ಮಕ್ಕಳನ್ನು ಬಳಸಿಕೊಂಡು ವಸತಿ ನಿಲಯದ ಆವರಣದಲ್ಲಿ ಕೆಲಸ ಮಾಡಿಸುತ್ತಿರುವವರು ಯಾರು ಎನ್ನು ಪ್ರಶ್ನೆಗಳು ಕೇಳಿ ಬಂದಿವೆ. ಜೊತೆಗೆ ತಾಲೂಕು ಮತ್ತು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಈ ಬಗ್ಗೆ ಯಾಕೆ ಗಮನ ಹರಿಸಿಲ್ಲ ಎನ್ನುವ ಪ್ರಶ್ನೆಗಳು ಕೂಡ ಕೇಳಿ ಬಂದಿವೆ.
ಘಟನೆಯ ಮಾಹಿತಿ ತಿಳಿದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ತಿಪ್ಪೇಸ್ವಾಮಿಯವರು ತಕ್ಷಣವೇ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದಿದ್ದಾರೆ ಎನ್ನಲಾಗಿದೆ.
ಸದ್ಯ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಸ್ವಯಂ ಪ್ರೇರಿತ ದೂರನ್ನು ದಾಖಲಿಸಿಕೊಂಡು ತಪ್ಪಿತಸ್ಥರ ಮೇಲೆ ಸುಮೊಟೊ ಕೇಸ್ ದಾಖಲಿಸಿ ತನಿಖೆ ಮಾಡಲಾಗುವುದು ಎಂದು ತಿಪ್ಪೇಸ್ವಾಮಿ ದೂರವಾಣಿ ಮೂಲಕ ತಿಳಿಸಿದ್ದಾರೆ.
ಪುಟ್ಟ ಮಕ್ಕಳನ್ನು ಕೂಲಿ ಕಾರ್ಮಿಕರಂತೆ ಬಳಸಿಕೊಂಡ ಅಮಾನವೀಯ ಘಟನೆ ತಿಪಟೂರಿನ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ನಡೆದಿದೆ. ಈ ಸಂಬಂಧ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದ ವಾರ್ಡನ್ ಮತ್ತು ಸಿಬ್ಬಂದಿ ವರ್ಗವನ್ನು ಕೂಡಲೇ ಅಮಾನತ್ತು ಮಾಡಬೇಕೆಂದು ಕಾಳಜಿ ಫೌಂಡೇಶನ್ ತುಮಕೂರು ಮತ್ತು ಕರ್ನಾಟಕ ರಣಧೀರರ ವೇದಿಕೆ ಸಂಘಟನೆಗಳು ಆಗ್ರಹಿಸಿದೆ.
ವರದಿ : ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA