nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಣ್ಣೇನಹಳ್ಳಿ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸರ್ಕಾರಿ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮ

    June 5, 2026

    ಜಾಗತಿಕ ಸಮಸ್ಯೆಗಳ ಬಗ್ಗೆ ಸಿದ್ದರಬೆಟ್ಟ ಶ್ರೀಗಳ ಕಳಕಳಿ; ಸಮಾಜದ ಏಳಿಗೆಗೆ ಮೌಲ್ಯಗಳು ಮುಖ್ಯ ಎಂದ ಎಲಿಜಬೆತ್ ಚೆರಿಯನ್

    June 5, 2026

    ಕೊರಟಗೆರೆ: ಡಾ.ಜಿ. ಪರಮೇಶ್ವರ್ 2ನೇ ಬಾರಿಗೆ ಡಿಸಿಎಂ; ಅಭಿಮಾನಿಗಳಿಂದ ಭರ್ಜರಿ ಸಂಭ್ರಮಾಚರಣೆ

    June 5, 2026
    Facebook Twitter Instagram
    ಟ್ರೆಂಡಿಂಗ್
    • ತಣ್ಣೇನಹಳ್ಳಿ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸರ್ಕಾರಿ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮ
    • ಜಾಗತಿಕ ಸಮಸ್ಯೆಗಳ ಬಗ್ಗೆ ಸಿದ್ದರಬೆಟ್ಟ ಶ್ರೀಗಳ ಕಳಕಳಿ; ಸಮಾಜದ ಏಳಿಗೆಗೆ ಮೌಲ್ಯಗಳು ಮುಖ್ಯ ಎಂದ ಎಲಿಜಬೆತ್ ಚೆರಿಯನ್
    • ಕೊರಟಗೆರೆ: ಡಾ.ಜಿ. ಪರಮೇಶ್ವರ್ 2ನೇ ಬಾರಿಗೆ ಡಿಸಿಎಂ; ಅಭಿಮಾನಿಗಳಿಂದ ಭರ್ಜರಿ ಸಂಭ್ರಮಾಚರಣೆ
    • ಭಾರತದ ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು
    • ಸರಗೂರು: ಸರ್ಕಾರಿ ಶಾಲೆಗಳಿಗೆ ಮಕ್ಕಳ ದಾಖಲಾತಿ ಆಂದೋಲನ ಚಾಲನೆ
    • ಆಮ್ಲಜನಕವನ್ನು ಹಣಕೊಟ್ಟು ಕೊಂಡುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಬಹುದು: ಅರಣ್ಯಾಧಿಕಾರಿ ಡಾ.ಲೋಕೇಶ್ ಎಚ್ಚರಿಕೆ
    • ಸಹನಾ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ: ವಿವಿಧ ಸ್ಪರ್ಧೆಗಳು, ಬಹುಮಾನ ವಿತರಣೆ
    • ಕುಣಿಹಳ್ಳಿ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ: ಗಿಡ ನೆಡುವ ಮೂಲಕ ಜಾಗೃತಿ ಕಾರ್ಯಕ್ರಮ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಸ್ ಸೌಲಭ್ಯಕ್ಕಾಗಿ ವಿದ್ಯಾರ್ಥಿಗಳ ಆಕ್ರೋಶ: ತುರುವೇಕೆರೆಯಲ್ಲಿ ಕೆಎಸ್ ಆರ್‌ ಟಿಸಿ ಬಸ್ ತಡೆದು ಪ್ರತಿಭಟನೆ
    ತುರುವೇಕೆರೆ December 30, 2025

    ಬಸ್ ಸೌಲಭ್ಯಕ್ಕಾಗಿ ವಿದ್ಯಾರ್ಥಿಗಳ ಆಕ್ರೋಶ: ತುರುವೇಕೆರೆಯಲ್ಲಿ ಕೆಎಸ್ ಆರ್‌ ಟಿಸಿ ಬಸ್ ತಡೆದು ಪ್ರತಿಭಟನೆ

    By adminDecember 30, 2025No Comments2 Mins Read
    ksrtc

    ತುರುವೇಕೆರೆ: ತಾಲೂಕಿನ ದಬ್ಬೆಘಟ್ಟ ರಸ್ತೆಯ ಸಾರಿಗೆ ಬಸ್ ನಿಲ್ದಾಣದಲ್ಲಿ ಸೋಮವಾರ ಬೆಳಿಗ್ಗೆ ನೂರಾರು ವಿದ್ಯಾರ್ಥಿಗಳು ಕೆಎಸ್ ಆರ್‌ ಟಿಸಿ ಬಸ್ಸುಗಳನ್ನು ತಡೆದು ಬೃಹತ್ ಪ್ರತಿಭಟನೆ ನಡೆಸಿದರು. ಶಾಲಾ-ಕಾಲೇಜುಗಳಿಗೆ ತೆರಳಲು ಸಕಾಲಕ್ಕೆ ಬಸ್ ಸೌಲಭ್ಯ ಇಲ್ಲದಿರುವುದನ್ನು ಖಂಡಿಸಿ, ಜೆಡಿಎಸ್ ವಿದ್ಯಾರ್ಥಿ ಘಟಕದ ತಾಲೂಕು ಅಧ್ಯಕ್ಷ ಹೃತ್ವಿಕ್ ಗೌಡ ಅವರ ನೇತೃತ್ವದಲ್ಲಿ ಈ ಹೋರಾಟ ನಡೆಯಿತು.

    ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿಗಳ ಕಿಡಿ:


    Provided by
    Provided by

    ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಹೃತ್ವಿಕ್ ಗೌಡ, “ಕಳೆದ ಒಂದು ವರ್ಷದಿಂದ ವಿದ್ಯಾರ್ಥಿಗಳು ಬಸ್ ಸಮಸ್ಯೆ ಎದುರಿಸುತ್ತಿದ್ದಾರೆ. ಬೆಳಿಗ್ಗೆ ಕಾಲೇಜಿಗೆ ಬರಲು ಮತ್ತು ಸಂಜೆ ಗ್ರಾಮಗಳಿಗೆ ಮರಳಲು ಸರಿಯಾದ ಸಮಯಕ್ಕೆ ಬಸ್ಸುಗಳಿಲ್ಲ. ಈ ಬಗ್ಗೆ ಡಿಪೋ ಮ್ಯಾನೇಜರ್‌ಗೆ ಹಲವಾರು ಬಾರಿ ಮನವಿ ನೀಡಿದರೂ ಪ್ರಯೋಜನವಾಗಿಲ್ಲ. ಮನವಿ ನೀಡಿದ ಎರಡು ದಿನ ಮಾತ್ರ ಸರಿಯಾಗಿ ಬಸ್ ಬಿಟ್ಟು, ನಂತರ ಮತ್ತೆ ಹಳೆ ಚಾಳಿ ಮುಂದುವರಿಸುತ್ತಾರೆ. ಅಧಿಕಾರಿಗಳ ಈ ಉದಾಸೀನತೆಯಿಂದ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡಲಾಗುತ್ತಿದೆ,” ಎಂದು ಆಕ್ರೋಶ ಹೊರಹಾಕಿದರು.

    ಸ್ಥಳಕ್ಕೆ ಧಾವಿಸಿದ ತಹಶೀಲ್ದಾರ್ ಮತ್ತು ಶಾಸಕರು:

    ಪ್ರತಿಭಟನಾ ಸ್ಥಳಕ್ಕೆ ತಾಲೂಕು ದಂಡಾಧಿಕಾರಿ ಕುಂಹಿ ಅಹಮದ್ ಭೇಟಿ ನೀಡಿ ವಿದ್ಯಾರ್ಥಿಗಳ ಅಹವಾಲು ಸ್ವೀಕರಿಸಿದರು. ನಂತರ ಬಂದ ಡಿಪೋ ಮ್ಯಾನೇಜರ್, ಸಿಬ್ಬಂದಿ ಮತ್ತು ಬಸ್ಸುಗಳ ಕೊರತೆಯಿಂದ ಈ ಸಮಸ್ಯೆಯಾಗಿದೆ ಎಂದು ಸಮರ್ಥಿಸಿಕೊಳ್ಳಲು ಯತ್ನಿಸಿದಾಗ ವಿದ್ಯಾರ್ಥಿಗಳು ಮತ್ತು ಅಧಿಕಾರಿಗಳ ನಡುವೆ ತೀವ್ರ ವಾಗ್ವಾದ ನಡೆಯಿತು.

    “ನಿಮ್ಮಿಂದ ಬಸ್ ಬಿಡಲು ಸಾಧ್ಯವಾಗದಿದ್ದರೆ ಹೇಳಿ, ನಾವು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳುತ್ತೇವೆ,” ಎಂದು ವಿದ್ಯಾರ್ಥಿಗಳು ಸವಾಲು ಹಾಕಿದರು. ಬಳಿಕ ಸ್ಥಳಕ್ಕೆ ಆಗಮಿಸಿದ ತಾಲೂಕಿನ ಶಾಸಕರು, ತಕ್ಷಣವೇ ಸಕಾಲಕ್ಕೆ ಬಸ್ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.

    ಇದೇ ವೇಳೆ ಸಿಎಸ್ ಪುರ ಜೆಡಿಎಸ್ ಯುವ ಮುಖಂಡರಾದ ಪಾಂಡುಗೌಡ, ಬೆಂಗಳೂರು ಯುವ ಮುಖಂಡರಾದ ಸುಗಮ್ ಗೌಡ, ಯುವ ಮುಖಂಡರುಗಳಾದ, ರಾಮ್ ಕುಮಾರ್, ಪ್ರಸಾದ್ ಗೌಡ, ಸುಮಂತ್, ಪವನ್, ಪೃಥ್ವಿ, ಕುಶಾಲ್, ಹೇಮಂತ್, ಹರ್ಷ, ಮನು, ಧನುಷ್, ಆನಂದ್, ಯದು ಗುಬ್ಬಿ, ಕುಮಾರ್, ಭರತ್ ಗೌಡ, ದರ್ಶನ್, ಹಾಗೂ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

    ವರದಿ: ಮಂಜುನಾಥ್ ಕೆ.ಎ, ತುರುವೇಕೆರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ತುರುವೇಕೆರೆ: ಜೂ. 4ರಂದು ಉಚಿತ ಯೋಗ,  ಪ್ರಾಣಾಯಾಮ ತರಗತಿಗಳ ಉದ್ಘಾಟನೆ

    May 30, 2026

    ಅಕ್ರಮ ಸಂಬಂಧಕ್ಕೆ ಬಲಿಯಾದ ವಿವಾಹಿತೆ; 4 ತಿಂಗಳ ಬಳಿಕ ಸುಟ್ಟ ಶವದ ನಿಗೂಢತೆ ಭೇದಿಸಿದ ತುರುವೇಕೆರೆ ಪೊಲೀಸ್!

    May 27, 2026

    ತುರುವೇಕೆರೆ: ಹೆಗ್ಗೆರೆಯಲ್ಲಿ ಆರೋಗ್ಯ ತಪಾಸಣಾ ಶಿಬಿರ

    May 9, 2026

    Leave A Reply Cancel Reply

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ತಣ್ಣೇನಹಳ್ಳಿ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸರ್ಕಾರಿ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮ

    June 5, 2026

    ಕೊರಟಗೆರೆ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ತಾಲ್ಲೂಕಿನ ತಣ್ಣೇನಹಳ್ಳಿ ಸರ್ಕಾರಿ ಶಾಲೆಯ ಆವರಣದಲ್ಲಿ ಗಿಡಗಳನ್ನು ನೆಡುವ ಮೂಲಕ ಪರಿಸರ ಜಾಗೃತಿ…

    ಜಾಗತಿಕ ಸಮಸ್ಯೆಗಳ ಬಗ್ಗೆ ಸಿದ್ದರಬೆಟ್ಟ ಶ್ರೀಗಳ ಕಳಕಳಿ; ಸಮಾಜದ ಏಳಿಗೆಗೆ ಮೌಲ್ಯಗಳು ಮುಖ್ಯ ಎಂದ ಎಲಿಜಬೆತ್ ಚೆರಿಯನ್

    June 5, 2026

    ಕೊರಟಗೆರೆ: ಡಾ.ಜಿ. ಪರಮೇಶ್ವರ್ 2ನೇ ಬಾರಿಗೆ ಡಿಸಿಎಂ; ಅಭಿಮಾನಿಗಳಿಂದ ಭರ್ಜರಿ ಸಂಭ್ರಮಾಚರಣೆ

    June 5, 2026

    ಭಾರತದ ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು

    June 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.