ಬೆಂಗಳೂರು: ಬೆಂಗಳೂರು ನಗರ ವಿಶ್ವವಿದ್ಯಾಲಯದಲ್ಲಿ ಮೂಲಭೂತ ಸಮಸ್ಯೆಗಳ ವಿರುದ್ಧ ವಿದ್ಯಾರ್ಥಿಗಳು ಕ್ಯಾಂಪಸ್ ನಲ್ಲೇ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಕಾಲೇಜಿನಲ್ಲಿ ಮೂಲಭೂತ ಸಮಸ್ಯೆಗಳು ಸೇರಿದಂತೆ ಹಲವು ಸಮಸ್ಯೆಗಳು ತಾಂಡವವಾಡುತ್ತಿದ್ದು, ಈ ಬಗ್ಗೆ ವಿದ್ಯಾರ್ಥಿ ಸಂಘಟನೆಯ ಮುಖಂಡರು ಪ್ರಶ್ನಿಸಿದರೆ, ವಿದ್ಯಾರ್ಥಿಗಳ ಸಮಸ್ಯೆಯ ಬಗ್ಗೆ ನೀವೇಕೆ ಮಾತನಾಡುತ್ತಿದ್ದೀರಿ? ಎಂದು ಹೇಳಿ, ನಿಮ್ಮ ಮೇಲೆ ಲೈಂಗಿಕ ಕಿರುಕುಳದ ಕೇಸ್ ಹಾಕಿಸುತ್ತೇವೆ ಎಂದು ಬೆದರಿಕೆ ಹಾಕಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಬೆಂಗಳೂರು ನಗರ ವಿಶ್ವವಿದ್ಯಾಲಯದ ಕುಲಸಚಿವರಾದ ಶ್ರೀಧರ್, ಮತ್ತು ಕುಲಪತಿಗಳಾದ ಪ್ರೊ.ಲಿಂಗರಾಜು ಗಾಂಧಿ ಹಾಗೂ ಕನ್ನಡ ವಿಭಾಗದ ಮುಖ್ಯಸ್ಥರಾದ ತಾಂಡವ ಗೌಡ ಇವರನ್ನು ತಕ್ಷಣವೇ ವಜಾಗೊಳಿಸುವಂತೆ ಇದೇ ವೇಳೆ ವಿದ್ಯಾರ್ಥಿಗಳು ಒತ್ತಾಯಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1


