ಕೊಡಗು: SSLC ಪರೀಕ್ಷೆ ಫಲಿತಾಂಶದಲ್ಲಿ ನಾಲ್ಕನೇ ಸ್ಥಾನ ಗಳಿಸಿದ್ದ ವಿದ್ಯಾರ್ಥಿ ಮರು ಮೌಲ್ಯಮಾಪನ ಬಳಿಕ ಕರ್ನಾಟಕಕ್ಕೆ ಪ್ರಥಮ ಸ್ಥಾನ ಬಂದಿದ್ದಾರೆ.
ಮಡಿಕೇರಿಯ ತನ್ಮಯಿ ಎಂ. ಎನ್. ರಾಜ್ಯಕ್ಕೆ ಪ್ರಥಮ ಬಂದ ವಿದ್ಯಾರ್ಥಿ. ಮೈಸೂರಿನ ಶ್ರೀ ರಾಮಕೃಷ್ಣ ವಿದ್ಯಾಲಯದಲ್ಲಿ ವ್ಯಾಸಂಗ ಮಾಡಿರುವ ತನ್ಮಯಿ, ಮಡಿಕೇರಿ ವಕೀಲರ ಸಂಘದ ಅಧ್ಯಕ್ಷ ಎಂ. ಎ. ನಿರಂಜನ್ ಮತ್ತು ಸೌಮ್ಯ ದಂಪತಿ ಪುತ್ರ. ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದು ಕೀರ್ತಿಗೆ ಪಾತ್ರನಾಗಿದ್ದಾನೆ.
ಕರ್ನಾಟಕ ಶಿಕ್ಷಣ ಪರೀಕ್ಷಾ ಮಂಡಳಿ ಈ ಮುಂಚೆ ಪ್ರಕಟಿಸಿದ್ದ ಫಲಿತಾಂಶದಲ್ಲಿ ವಿದ್ಯಾರ್ಥಿ ತನ್ಮಯಿಗೆ 625ಕ್ಕೆ 622 ಅಂಕ ಪಡೆದುಕೊಂಡಿದ್ದ. ಆದರೆ ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ್ದ ತನ್ಮಯಿ, ಬಳಿಕ 625ಕ್ಕೆ 625 ಅಂಕ ಗಳಿಸಿದ್ದಾನೆ. ಆ ಮೂಲಕ ಮೊದಲನೇ ಸ್ಥಾನ ಗಿಟ್ಟಿಸಿಕೊಂಡಿದ್ದಾನೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW