nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಂಗನವಾಡಿ ಕೇಂದ್ರದ ತಾಯಂದಿರಿಗೆ ಪೋಷಕತ್ವ ಯೋಜನೆಯ ಕುರಿತು ಮಾಹಿತಿ

    September 15, 2025

    ಸಂತಪೂರ ಮರಿಯ ಕೃಪಾ ದವಾಖಾನೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ

    September 15, 2025

    ಸತ್ವಯುತ ಆಹಾರ ಸೇವನೆ, ನಿಯಮಿತ ವ್ಯಾಯಾಮದಿಂದ ಉತ್ತಮ ಆರೋಗ್ಯ: ಹಾದನೂರು ಪ್ರಕಾಶ್ 

    September 15, 2025
    Facebook Twitter Instagram
    ಟ್ರೆಂಡಿಂಗ್
    • ಅಂಗನವಾಡಿ ಕೇಂದ್ರದ ತಾಯಂದಿರಿಗೆ ಪೋಷಕತ್ವ ಯೋಜನೆಯ ಕುರಿತು ಮಾಹಿತಿ
    • ಸಂತಪೂರ ಮರಿಯ ಕೃಪಾ ದವಾಖಾನೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ
    • ಸತ್ವಯುತ ಆಹಾರ ಸೇವನೆ, ನಿಯಮಿತ ವ್ಯಾಯಾಮದಿಂದ ಉತ್ತಮ ಆರೋಗ್ಯ: ಹಾದನೂರು ಪ್ರಕಾಶ್ 
    • ಅಧಿಕಾರಿಗಳನ್ನು ಬೋನಿನಲ್ಲಿ ಕೂಡಿ ಹಾಕಿದ ಪ್ರಕರಣ: 15 ಮಂದಿ ಅಧಿಕಾರಿಗಳ ವಿರುದ್ಧವೂ ದೂರು!
    • ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆರ್ಥಿಕ ವ್ಯವಹಾರ ಮಾದರಿ ಮತ್ತು ಪಾರದರ್ಶಕ: ನಿರಂಜನ್
    • ಔರಾದ್ | ನಮ್ಮತುಮಕೂರು ವರದಿಯಿಂದ ಎಚ್ಚೆತ್ತ ಅಧಿಕಾರಿಗಳು: ಶೀಘ್ರವೇ ರಸ್ತೆ ನಿರ್ಮಾಣದ ಭರವಸೆ
    • ಹೃದಯಾಘಾತದಿಂದ ಭಾರತದಲ್ಲಿ ಸುಮಾರು 30 ಲಕ್ಷ ಜನ ಸಾವಿಗೀಡಾಗುತ್ತಿದ್ದಾರೆ: ಸಂಸದ ಸಿ.ಎನ್​.ಮಂಜುನಾಥ್
    • ಮುಸ್ಲಿಮ್ ಮಹಿಳೆಗೆ ಸೀಮಂತ ಮಾಡಿದ ಹಿಂದೂ ಮಹಿಳೆಯರು: ಹೀಗೊಂದು ಸೌಹಾರ್ದ ಆಚರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಾದಕ ದ್ರವ್ಯ ವ್ಯಸನಿಗಳಲ್ಲಿ ವಿದ್ಯಾರ್ಥಿಗಳೇ ಹೆಚ್ಚು:  ಜಿಲ್ಲಾಧಿಕಾರಿ ಆತಂಕ
    ತುಮಕೂರು March 22, 2025

    ಮಾದಕ ದ್ರವ್ಯ ವ್ಯಸನಿಗಳಲ್ಲಿ ವಿದ್ಯಾರ್ಥಿಗಳೇ ಹೆಚ್ಚು:  ಜಿಲ್ಲಾಧಿಕಾರಿ ಆತಂಕ

    By adminMarch 22, 2025No Comments3 Mins Read
    madaka vyasana

    ತುಮಕೂರು:  ಮಾದಕ ದ್ರವ್ಯ ವ್ಯಸನಕ್ಕೆ ವಿದ್ಯಾರ್ಥಿಗಳೇ ಹೆಚ್ಚು ದಾಸರಾಗುತ್ತಿರುವುದು ಸಮಾಜಕ್ಕೆ ಮಾರಕವಾಗಿ ಪರಿಣಮಿಸುತ್ತಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಆತಂಕ ವ್ಯಕ್ತಪಡಿಸಿದರು.

    ನಗರದ ಜಿಲ್ಲಾ ಬಾಲಭವನದಲ್ಲಿ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪೊಲೀಸ್ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಹಾನಗರಪಾಲಿಕೆ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಯುವಜನ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಸಹಯೋಗದಲ್ಲಿ ಮದ್ಯ ಹಾಗೂ ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಆಯೋಜಿಸಲಾಗಿದ್ದ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಹವಾಸದಿಂದ ಕಾಲೇಜು ವಿದ್ಯಾರ್ಥಿಗಳು ಮದ್ಯ ಹಾಗೂ ಮಾದಕ ದ್ರವ್ಯಗಳ ಚಟಕ್ಕೆ ಮಾರುಹೋಗುತ್ತಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು.


    Provided by
    Provided by
    Provided by

    ಮಾದಕ ವಸ್ತುಗಳ ಸೇವನೆಯಿಂದ ಮಾನಸಿಕ ಹಾಗೂ ದೈಹಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುವುದಲ್ಲದೆ ವೈಯಕ್ತಿಕ ಬದುಕೂ ಸಹ ಹಾಳಾಗುತ್ತದೆ. ಒಮ್ಮೆ ಮದ್ಯ ಹಾಗೂ ಮಾದಕ ಸೇವನೆಯ ಚಟವನ್ನು ಅಂಟಿಸಿಕೊಂಡರೆ ಅದರಿಂದ ಹೊರ ಬರುವುದು ಕಷ್ಟಸಾಧ್ಯ. ಕುತೂಹಲ, ಮೋಜಿಗಾಗಿ ಮಾದಕ ದ್ರವ್ಯಗಳ ಸೇವನೆಗೆ ತೊಡಗಿಸಿಕೊಂಡ ವ್ಯಕ್ತಿ ಸಮಾಜಕ್ಕೆ ಬಾಧಕನಾಗುತ್ತಾನೆ. ಈ ನಿಟ್ಟಿನಲ್ಲಿ ಮಾದಕ ವಸ್ತುಗಳಿಂದಾಗುವ ದುಷ್ಪರಿಣಾಮಗಳ ಬಗ್ಗೆ ಶಾಲಾ–ಕಾಲೇಜುಗಳಲ್ಲಿ ಹೆಚ್ಚಿನ ಅರಿವು ಮೂಡಿಸಬೇಕು ಎಂದು ತಿಳಿಸಿದರು.

    ಗುಟ್ಕಾ, ಗಾಂಜಾ, ಹೆರಾಯಿನ್ ನಂತಹ ಮಾದಕ ದ್ರವ್ಯಗಳಲ್ಲಿ ನಶೆ ಉಂಟು ಮಾಡುವ ವಸ್ತುಗಳು ಮತ್ತೆ ಮತ್ತೆ ಸೇವಿಸಲು ಪ್ರೇರೇಪಿಸುತ್ತದೆ. ಮದ್ಯ ಹಾಗೂ ಮಾದಕ ವ್ಯಸನಿಗಳಿಂದ ಬೇಡಿಕೆ ಹೆಚ್ಚಿದಂತೆ ಮಾದಕ ದ್ರವ್ಯಗಳ ಪೂರೈಕೆಯೂ ಹೆಚ್ಚುತ್ತದೆ. ಬೇಡಿಕೆಯ ಕೊಂಡಿಯನ್ನು ನಿರ್ಮೂಲನೆ ಮಾಡಿದಾಗ ಮಾತ್ರ ಮಾದಕ ವಸ್ತುಗಳ ಮುಕ್ತ ದೇಶವನ್ನಾಗಿ ರೂಪಿಸಲು ಸಾಧ್ಯವೆಂದು ತಿಳಿಸಿದರು.

    ಮಾದಕ ವ್ಯಸನಿಗಳಲ್ಲಿ ಶೇ.75ರಷ್ಟು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುವ ಸಾಧ್ಯತೆ ಹೆಚ್ಚಾಗಿರುತ್ತದೆ. ಮಾದಕ ವ್ಯಸನದ ಪರಿಣಾಮವಾಗಿ ಪ್ರತೀ ವರ್ಷ ದೇಶದಲ್ಲಿ 15 ಲಕ್ಷ ಮಂದಿ ಮಾದಕ ವಸ್ತುಗಳ ದಾಸರಾಗುತ್ತಿದ್ದಾರೆ. ಇದರಿಂದ ಅಪಘಾತಗಳು, ಆತ್ಯಹತ್ಯೆ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿವೆ. ಜಿಲ್ಲೆಯಲ್ಲಿ ಮಾದಕ ದ್ರವ್ಯಗಳ ಪೂರೈಕೆ ಜಾಲವನ್ನು ನಿಯಂತ್ರಿಸಲು ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಶ್ರಮಿಸುತ್ತಿದೆ ಎಂದರು.

    ಇತ್ತೀಚಿನ ದಿನಗಳಲ್ಲಿ ಸಾಮಾನ್ಯ ಖಾಯಿಲೆಗಳಾದ ರಕ್ತದೊತ್ತಡ, ಮಧುಮೇಹದಂತೆ ಮಾದಕ ಸೇವನೆಯೂ ಒಂದು ಖಾಯಿಲೆಯಾಗಿ ಕಾಣಿಸಿಕೊಳ್ಳುತ್ತಿದೆ. ಮಾದಕ ಸೇವನೆ ಬಗ್ಗೆ ಗ್ರಾಮೀಣ ಪ್ರದೇಶಗಳಲ್ಲಿ ಯಾವುದೇ ಪ್ರಕರಣಗಳು ಕಂಡು ಬಂದರೆ ಸ್ಥಳೀಯ ಆಶಾ/ಅಂಗನವಾಡಿ ಕಾರ್ಯಕರ್ತೆಯರು ತಮಗೆ ಮಾಹಿತಿ ನೀಡುವ ಮೂಲಕ ಮಾದಕ ದ್ರವ್ಯಗಳ ನಿರ್ಮೂಲನೆಗೆ ಕೈಜೋಡಿಸಬೇಕೆಂದು ಕರೆ ನೀಡಿದರು.

    ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್ ಮಾತನಾಡಿ, ಕಾರ್ಮಿಕರಲ್ಲಿಯೂ ಮದ್ಯ ಹಾಗೂ ಮಾದಕ ಸೇವನೆ ಹೆಚ್ಚಾಗಿ ವರದಿಯಾಗುತ್ತಿದೆ. ಮಾದಕ ವಸ್ತುಗಳು ಹಾಗೂ ಅದರ ಪದಾರ್ಥಗಳ ನಿಯಂತ್ರಣ(Narcotics Drugs and Psychotropic Substances Rules) ಕಾಯ್ದೆಯನ್ವಯ ಯಾವುದೇ ನಶೆ ಬರಿಸುವ ವಸ್ತುಗಳಿಂದ ಮಾನಸಿಕ ಹಾಗೂ ಶಾರೀರಿಕ ಸ್ಥಿತಿ ಹಾಳಾಗುವುದಲ್ಲದೆ ಮನೆ, ಸಮಾಜದ ಮೇಲೂ ಗಂಭೀರ ಪರಿಣಾಮ ಬೀರುತ್ತದೆ. ಮಾದಕ ವಸ್ತು ಸೇವನೆ ಪುರುಷರಲ್ಲಿ ಹೆಚ್ಚಾಗಿ ಕಂಡು ಬಂದರೂ ಮಹಿಳೆಯರೂ ಸಹ ವ್ಯಸನಿಗಳಾಗುತ್ತಿದ್ದಾರೆ. ಮಾದಕ ದ್ರವ್ಯ ಸೇವನೆಯಿಂದ ಎಷ್ಟೋ ಕುಟುಂಬಗಳು ಆರ್ಥಿಕ ಸಂಕಷ್ಟದಿಂದ ಬೀದಿ ಪಾಲಾಗಿವೆ. ಮಾದಕ ದ್ರವ್ಯ ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಅರಿತು ಅದರ ಸೇವನೆಯಿಂದ ಹೊರಬರಬೇಕು ಎಂದು ತಿಳಿಸಿದರು.

    ಮಾದಕ ದ್ರವ್ಯವಾದ ಗಾಂಜಾ ಬೆಳೆಯುವ ಪ್ರದೇಶದಲ್ಲಿ 3000 ರೂ.ಗಳಿಗೆ ದೊರೆಯುವ 1 ಕೆ.ಜಿ. ಗಾಂಜಾ, ವ್ಯಸನಿಗಳ ಕೈ ತಲುಪುವ ವೇಳೆಗೆ 1 ಗ್ರಾಂ.ಗೆ 500 ರೂ. ಭರಿಸಬೇಕಾಗುತ್ತದೆ. ಇದರಿಂದ ಆರ್ಥಿಕ ಸಮಸ್ಯೆಯುಂಟಾಗುವದಲ್ಲದೆ ಕಳ್ಳತನ, ಸುಳ್ಳು ಹೇಳುವ ಪ್ರವೃತ್ತಿಗಳು ಬೆಳೆಯುತ್ತವೆ. ಈ ನಿಟ್ಟಿನಲ್ಲಿ ಪಂಚಾಯತಿ ವ್ಯಾಪ್ತಿಯಲ್ಲಿ ಮದ್ಯಪಾನ ಹಾಗೂ ಮಾದಕ ಸೇವನೆಯಿಂದ ಹೊರ ಬರುವ ಬಗ್ಗೆ ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಮಾದಕ ಸೇವನೆ ಪ್ರಕರಣಗಳು ಕಂಡುಬಂದರೆ ಸ್ಥಳೀಯ ಬೀಟ್ ಪೋಲೀಸರಿಗೆ ಮಾಹಿತಿ ನೀಡುವ ಮೂಲಕ ಇಲಾಖೆಯೊಂದಿಗೆ ಕೈಜೋಡಿಸಬೇಕೆಂದು ತಿಳಿಸಿದರಲ್ಲದೆ, ಕಾಲೇಜು ವಿದ್ಯಾರ್ಥಿಗಳು ಎಚ್ಚರಿಕೆಯಿಂದ ಇರಬೇಕು. ಉತ್ತಮ ಹವ್ಯಾಸ, ಉತ್ತಮರ ಸಹವಾಸ ಮಾಡಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕೆಂದು ಹೇಳಿದರು.

    ಕಾರ್ಯಕ್ರಮದಲ್ಲಿ ಸಿದ್ಧಾರ್ಥ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ರಂಗಸ್ವಾಮಿ ಎಂ.ಆರ್. ಉಪನ್ಯಾಸ ನೀಡುತ್ತಾ, ಮಾದಕ ವಸ್ತುಗಳ ದುರುಪಯೋಗವು ಇತ್ತೀಚಿನ ವರ್ಷಗಳಲ್ಲಿ ಗಂಭೀರ ಸಮಸ್ಯೆಯಾಗಿ ಪರಿಣಮಿಸಿದೆ. ಮಾದಕ ವಸ್ತುಗಳ ಸೇವನೆಯು ಮೆದುಳಿನ ಕಾರ್ಯಕ್ಷಮತೆಯನ್ನು ಹಾನಿಗೊಳಿಸುತ್ತದೆ. ದೈಹಿಕ ಹಾಗೂ ಮಾನಸಿಕ ನಿಯಂತ್ರಣ ಕಳೆದುಕೊಳ್ಳುವ ಪರಿಸ್ಥಿತಿ ಉಂಟಾಗುತ್ತದೆ ಎಂದು ತಿಳಿಸಿದರು.

    ಆಯುರ್ವೇದ ಪಂಚಕರ್ಮ ತಜ್ಞವೈದ್ಯ ಪ್ರಕಾಶ ಪಾಲ್ತೆö್ಯ ತಮ್ಮ ಉಪನ್ಯಾಸದಲ್ಲಿ ಮಾದಕ ವಸ್ತುಗಳ ಸೇವನೆಯು ದೀರ್ಘಕಾಲದಲ್ಲಿ ಅಂಗಾಂಗಗಳ ಹಾನಿ, ಮಾನಸಿಕ ಅಸಹಾಯಕತೆ ಮತ್ತು ಸಮಾಜದಲ್ಲಿ ವ್ಯಕ್ತಿತ್ವದ ಕುಸಿತಕ್ಕೆ ಕಾರಣವಾಗುತ್ತದೆ ಎಂದು ಹೇಳಿದರು.

    ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಹಿಮಂತರಾಜು ಜಿ. ಸ್ವಾಗತಿಸಿದರು.

    ಡಾ.ಬಿ.ಆರ್. ಅಂಬೇಡ್ಕರ್ ಯುವಜನ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಕಾರ್ಯಕ್ರಮ ಸಂಯೋಜಕ ಕೆ. ರಾಜಶೇಖರ್ ಪ್ರಾಸ್ತಾವಿಕ ನುಡಿಗಳನ್ನಾಡಿದರು.

    ಕಾರ್ಯಕ್ರಮದಲ್ಲಿ ವಾರ್ತಾಸಹಾಯಕ ಆರ್. ರೂಪಕಲಾ, ಪೌರಕಾರ್ಮಿಕರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಜೈನ್ ಪಿಯು ಕಾಲೇಜು: ವಿಶೇಷ ಶಿಕ್ಷಣ ಮೇಳ, ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

    September 13, 2025

    ನೀರು ಮೂಲಭೂತ ಸೌಕರ್ಯ ಕೇಳಿದ್ದಕ್ಕೆ ದಲಿತ ವ್ಯಕ್ತಿಯ ಬರ್ಬರ ಹತ್ಯೆ: ಗೃಹ ಸಚಿವರ ತವರಿನಲ್ಲಿ ಭೀಕರ ಘಟನೆ

    September 11, 2025

    ಮಹಿಳಾ ದೌರ್ಜನ್ಯ ಸಹಾಯವಾಣಿ ಸಂಖ್ಯೆ 181 ಸ್ಥಾಪನೆ

    September 11, 2025
    Our Picks

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025

    ರಾಜಕೀಯ, ಆರ್ಥಿಕ ಸ್ಥಿರತೆ ಭಾರತ 3ನೇ ಅತೀ ದೊಡ್ಡ ರಾಷ್ಟ್ರವಾಗಿ ಹೊರಹೊಮ್ಮಲಿದೆ: ಪ್ರಧಾನಿ ಮೋದಿ

    August 29, 2025

    ದರ್ಗಾದ ಮೇಲ್ಛಾವಣಿ ಕುಸಿದು 5 ಮಂದಿ ಸಾವು

    August 16, 2025

    ಹಿಂದೂ ಎಂದು ನಂಬಿಸಿ ಅನೇಕ ಯುವತಿಯರನ್ನು ವಿವಾಹವಾಗಿದ್ದ ವ್ಯಕ್ತಿಯ ಬಂಧನ

    August 16, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಅಂಗನವಾಡಿ ಕೇಂದ್ರದ ತಾಯಂದಿರಿಗೆ ಪೋಷಕತ್ವ ಯೋಜನೆಯ ಕುರಿತು ಮಾಹಿತಿ

    September 15, 2025

    ಬೀದರ್: ಜಿಲ್ಲಾ ಮಕ್ಕಳ ಕಲ್ಯಾಣ ಇಲಾಖೆ ಬೀದರ್ ಹಾಗೂ ಬೋಸ್ಕೋ ಬೆಂಗಳೂರು ಮತ್ತು ಡಾನ್ ಬಾಸ್ಕೋ ಬೀದರ್ ಇವರ ಸಂಯುಕ್ತ…

    ಸಂತಪೂರ ಮರಿಯ ಕೃಪಾ ದವಾಖಾನೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ

    September 15, 2025

    ಸತ್ವಯುತ ಆಹಾರ ಸೇವನೆ, ನಿಯಮಿತ ವ್ಯಾಯಾಮದಿಂದ ಉತ್ತಮ ಆರೋಗ್ಯ: ಹಾದನೂರು ಪ್ರಕಾಶ್ 

    September 15, 2025

    ಅಧಿಕಾರಿಗಳನ್ನು ಬೋನಿನಲ್ಲಿ ಕೂಡಿ ಹಾಕಿದ ಪ್ರಕರಣ: 15 ಮಂದಿ ಅಧಿಕಾರಿಗಳ ವಿರುದ್ಧವೂ ದೂರು!

    September 15, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.