ಮತ್ತೊಮ್ಮೆ ಹಿಜಾಬ್ ಜಗಳ ಆರಂಭಗೊಂಡಿದೆ. ಮುಂಬೈನ ಚೆಂಬೂರ್ ನಲ್ಲಿರುವ ಆಚಾರ್ಯ ಕಾಲೇಜಿನಲ್ಲಿ ಹಿಜಾಬ್ ಗೆ ನಿಷೇಧ ಹೇರಲಾಗಿದ್ದು, ಇದರ ವಿರುದ್ಧ ಒಂಬತ್ತು ವಿದ್ಯಾರ್ಥಿನಿಯರು ಬಾಂಬೆ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ಹಿಜಾಬ್ ಮೇಲಿನ ನಿಷೇಧವನ್ನು ತೆಗೆದುಹಾಕುವಂತೆ ವಿದ್ಯಾರ್ಥಿನಿಯರು ನ್ಯಾಯಾಲಯದಲ್ಲಿ ಮನವಿ ಮಾಡಿದ್ದು, ಇದರೊಂದಿಗೆ ಕಾಲೇಜು ಆಡಳಿತವು ಧರ್ಮದ ಆಧಾರದಲ್ಲಿ ಪಕ್ಷಪಾತ ಮಾಡುತ್ತಿದೆ ಎಂಬ ಆರೋಪವನ್ನೂ ವಿದ್ಯಾರ್ಥಿಗಳು ಮಾಡಿದ್ದಾರೆ.
ಮುಂಬೈನ ಎನ್.ಜಿ.ಆಚಾರ್ಯ ಮತ್ತು ಡಿ.ಕೆ.ಮರಾಠೆ ಕಾಲೇಜ್ ಆಫ್ ಆರ್ಟ್ಸ್, ಸೈನ್ಸ್ ಮತ್ತು ಕಾಮರ್ಸ್‌ನ 9 ವಿದ್ಯಾರ್ಥಿನಿಯರು, ಕಾಲೇಜು ಆಡಳಿತವು ಇತ್ತೀಚೆಗೆ ಜಾರಿಗೆ ತಂದಿರುವ ಡ್ರೆಸ್ ಕೋಡ್ ಅನ್ನು ಪ್ರಶ್ನಿಸಿ ಬಾಂಬೆ ಹೈಕೋರ್ಟ್‌ನ ಮೊರೆ ಹೋಗಿದ್ದಾರೆ. ಕಾಲೇಜು ನಿಷೇಧ ಹೇರಿರುವುದು ಸ್ವೇಚ್ಛಾಚಾರ’ ಎಂದು ವಿದ್ಯಾರ್ಥಿಗಳು ಮನವಿಯಲ್ಲಿ ತಿಳಿಸಿದ್ದಾರೆ.
ಈ ಡ್ರೆಸ್ ಕೋಡ್ ಅಡಿಯಲ್ಲಿ, ವಿದ್ಯಾರ್ಥಿನಿಯರು ಕ್ಯಾಂಪಸ್ ನಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸಲಾಗಿದೆ. ಅರ್ಜಿದಾರ ವಿದ್ಯಾರ್ಥಿನಿಯರು ಹೊಸ ಡ್ರೆಸ್ ಕೋಡ್ ತಮ್ಮ ಖಾಸಗಿತನ, ಘನತೆ ಮತ್ತು ಧಾರ್ಮಿಕ ಸ್ವಾತಂತ್ರ್ಯದ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎಂದು ಪ್ರತಿಪಾದಿಸಿದ್ದಾರೆ.
ಕಾಲೇಜಿನಲ್ಲಿ ಯಾರೂ ನಮಗೆ ಸಹಾಯ ಮಾಡಲಾರರು, ಹೀಗಾಗಿ ನಮಗೆ ಕಂಡಿದ್ದು ನ್ಯಾಯಾಲಯದ ದಾರಿ ಮಾತ್ರ ಎಂದು ಕಾಲೇಜು ವಿದ್ಯಾರ್ಥಿನಿ ಝೈನಾಬ್ ಚೌಧರಿ ಹೇಳಿದ್ದಾರೆ. ಜೊತೆಗೆ ನ್ಯಾಯಾಲಯದ ತೀರ್ಪು ನಮ್ಮ ಪರವಾಗಿ ಬರುತ್ತದೆ ಎಂದು ನಾವು ಭಾವಿಸುತ್ತೇವೆ ಎಂದು ಹೇಳಿದ್ದಾರೆ.
ಡ್ರೆಸ್ ಕೋಡ್ ವಿಚಾರಕ್ಕೆ ಸಂಬಂಧಿಸಿದಂತೆ ನಾವು ಪ್ರಾಂಶುಪಾಲರ ಜೊತೆ ಮಾತನಾಡಲು ಯೋಚಿಸಿದ್ದೆವು, ಆದರೆ ಆ ಸಮಯದಲ್ಲಿ ನಾನು ಅಲ್ಲಿ ಇರಲಿಲ್ಲ, ನನ್ನ ಸ್ನೇಹಿತ ಪ್ರಾಂಶುಪಾಲರನ್ನು ಮಾತನಾಡಿಸಲು ಹೋದನು. ನಾವು ಡ್ರೆಸ್ ಕೋಡ್ ಅನ್ನು ಅನುಸರಿಸಲು ಸಾಧ್ಯವಿಲ್ಲ ಎಂದು ನಾವು ಅವರಿಗೆ ತಿಳಿಸಿದ್ದೇವೆ.
ಆದರೆ ನೀವು ಡ್ರೆಸ್ ಕೋಡ್ ಅನ್ನು ಪಾಲಿಸಲೇಬೇಕು ಎಂದು ಅವರು ನಮಗೆ ಹೇಳಿದ್ದಾರೆ ಎಂದು ಕಾಲೇಜಿನ ಮತ್ತೊಬ್ಬ ವಿದ್ಯಾರ್ಥಿ ಉಮ್ಮುಲ್ ವರ ಹೇಳಿದ್ದಾರೆ. ಬಳಿಕ ಕಾಲೇಜು ಆಡಳಿತ ಮಂಡಳಿಯೊಂದಿಗೆ ಮಾತುಕತೆ ನಡೆಸಲಾಗಿದ್ದು, ಅಲ್ಲಿಂದ ನಮ್ಮ ಪರವಾಗಿ ಏನೂ ಮಾತು ಬರಲಿಲ್ಲ. ಈಗ ತರಗತಿಗಳೂ ಶುರುವಾಗಿವೆ. ನಮ್ಮ ಮೇಲೆ ಒತ್ತಡವಿದೆ.
ಬುರ್ಖಾ ಧರಿಸಿ ತರಗತಿಯಲ್ಲಿ ಕುಳಿತುಕೊಳ್ಳಲು ನಿರಾಕರಿಸಲಾಗಿದೆ ಎಂದು ಹೇಳಿದ್ದಾರೆ. ನಮಗೆ ಹುಜಾಬ್ ತೆಗೆಯುವುದು ಮಾಮೂಲಿ ವಿಷಯವಲ್ಲ. ಹೀಗಾಗಿ ಈ ವಿಚಾರವನ್ನು ನ್ಯಾಯಾಲಯದ ಮೊರೆ ಹೋಗುತ್ತಿದ್ದೇವೆ ಎಂದು ಹೇಳುತ್ತಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA