ತುರುವೇಕೆರೆ: ಪಟ್ಟಣ ಬಸವೇಶ್ವರ ನಗರದಲ್ಲಿರುವ ಶ್ರೀ ಸ್ವಾಮಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಚದುರಂಗ ಕ್ರೀಡೆಯಲ್ಲಿ ಪ್ರಥಮ ಸ್ಥಾನ ಖೋ ಖೋ, ಕಬಡ್ಡಿ, ಈಜು ಸ್ಪರ್ಧೆಯಲ್ಲಿ ಪ್ರಥಮ ಹಾಗೂ ಷಟಲ್ ನಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ರಾಜ್ಯಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳನ್ನು ಸಂಸ್ಥೆಯ ನೋಡಲ್ ಅಧಿಕಾರಿಗಳು ಪ್ರಕಾಶ್, ಪ್ರಾಂಶುಪಾಲರು ಕಾಂತರಾಜು, ಹಿರಿಯ ಶ್ರೇಣಿ ಉಪನ್ಯಾಸಕರಾದ ಮಹದೇವ್, ಕ್ರೀಡಾ ಕಾರ್ಯದರ್ಶಿ ಡಾ .ಚಂದ್ರಯ್ಯ ಟಿ ಆರ್, ಹರ್ಷ ದೈಹಿಕ ಶಿಕ್ಷಣ ಉಪನ್ಯಾಸಕ, ಲಕ್ಷ್ಮೀಕಾಂತ್ ಹಾಗೂ ಉಪನ್ಯಾಸಕ ವರ್ಗದವರು ವಿದ್ಯಾರ್ಥಿಗಳನ್ನು ಅಭಿನಂದಿಸಿದರು.
ವರದಿ: ಸುರೇಶ್ ಬಾಬು ಎಂ. ತುರುವೇಕೆರೆ


