nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹಾಸ್ಟೇಲ್ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಆಹಾರವನ್ನು ನೀಡಿ: ಶಾಸಕ ಸಿ.ಬಿ.ಸುರೇಶ್‌ ಬಾಬು

    June 10, 2026

    ಕೊಟ್ಟೂರು: ಪ್ರೊ.ಬಿ.ಕೃಷ್ಣಪ್ಪನವರ 89ನೇ ಜನ್ಮದಿನಾಚರಣೆ; ದಸಂಸ ವತಿಯಿಂದ ಅರ್ಥಪೂರ್ಣ ಆಚರಣೆ

    June 10, 2026

    ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ

    June 10, 2026
    Facebook Twitter Instagram
    ಟ್ರೆಂಡಿಂಗ್
    • ಹಾಸ್ಟೇಲ್ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಆಹಾರವನ್ನು ನೀಡಿ: ಶಾಸಕ ಸಿ.ಬಿ.ಸುರೇಶ್‌ ಬಾಬು
    • ಕೊಟ್ಟೂರು: ಪ್ರೊ.ಬಿ.ಕೃಷ್ಣಪ್ಪನವರ 89ನೇ ಜನ್ಮದಿನಾಚರಣೆ; ದಸಂಸ ವತಿಯಿಂದ ಅರ್ಥಪೂರ್ಣ ಆಚರಣೆ
    • ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ
    • ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ವೃದ್ಧೆಯ ಕೊಲೆ: ಮುಖ್ಯ ಆರೋಪಿಗೆ ಜೀವಾವಧಿ, ಮತ್ತೊಬ್ಬಳಿಗೆ 3 ವರ್ಷ ಜೈಲು
    • ಜಿಲ್ಲಾ ಮಿಷನ್ ಟಾಸ್ಕ್ ಫೋರ್ಸ್ ಸಭೆ:  ಕಾಮಗಾರಿಗಳ ಪ್ರಗತಿ ಪರಿಶೀಲನೆಗೆ ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ
    • ಗ್ರಾಮೀಣ, ಪಾರಂಪರಿಕ ಕ್ರೀಡೆಗಳಿಗೆ ಆದ್ಯತೆ ನೀಡಿ: ಕ್ರೀಡಾ, ಮುಜರಾಯಿ ಇಲಾಖೆ ಪ್ರಗತಿ ಪರಿಶೀಲಿಸಿ ಡಿಸಿಎಂ  ಪರಮೇಶ್ವರ್ ಸೂಚನೆ
    • ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ
    • ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೆಪಿಎಸ್ ಮ್ಯಾಗ್ನೆಟ್ ನೀತಿಯ ವಿರುದ್ಧ ಎಐಡಿಎಸ್ ಓ ನೇತೃತ್ವದಲ್ಲಿ ವಿದ್ಯಾರ್ಥಿ, ಪೋಷಕರ ಪ್ರತಿಭಟನೆ
    ತುಮಕೂರು January 20, 2026

    ಕೆಪಿಎಸ್ ಮ್ಯಾಗ್ನೆಟ್ ನೀತಿಯ ವಿರುದ್ಧ ಎಐಡಿಎಸ್ ಓ ನೇತೃತ್ವದಲ್ಲಿ ವಿದ್ಯಾರ್ಥಿ, ಪೋಷಕರ ಪ್ರತಿಭಟನೆ

    By adminJanuary 20, 2026No Comments2 Mins Read

    ತುಮಕೂರು: ರಾಜ್ಯದಲ್ಲಿ ಕೆಪಿಎಸ್ — ಮ್ಯಾಗ್ನೆಟ್ ಹೆಸರಿನಲ್ಲಿ  ಸಿರಾ ತಾಲೂಕಿನ ಸೀಬಿಅಗ್ರಹಾರ ಗ್ರಾಮ ಪಂಚಾಯಿತಿ ಮತ್ತು ಕುಂಟೇಗೌಡನಹಳ್ಳಿಯ ಸರ್ಕಾರಿ ಶಾಲೆ ಉಳಿಸಲು ಊರಿನ ವಿದ್ಯಾರ್ಥಿಗಳು , ಪೋಷಕರು ಎಐಡಿಎಸ್ ಓ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.


    Provided by
    Provided by

    ಪ್ರತಿಭಟನೆಯನ್ನ ಉದ್ದೇಶಿಸಿ ಜಿಲ್ಲಾ ಕಾರ್ಯದರ್ಶಿ ಲಕ್ಕಪ್ಪ ಮಾತನಾಡಿ, ಊರಿನ ಶಾಲೆ ಮುಚ್ಚಲು ಮುಂದಾಗಿರುವ ರಾಜ್ಯ ಸರ್ಕಾರ ಹಂತ ಹಂತವಾಗಿ ಶಿಕ್ಷಣವನ್ನ ಸಂಪೂರ್ಣ ರೈತ ಕಾರ್ಮಿಕರಿಂದ ಕಿತ್ತುಕೊಂಡು ಶ್ರೀಮಂತರ ಸ್ವತ್ತಾಗಿಸುತ್ತಿದೆ. ಈ ಊರಿನ ಎಲ್ಲಾ ಜನರು ಕೂಡ ಸರ್ಕಾರಿ ಶಾಲೆಗಳ ಮೇಲೆ ಸಂಪೂರ್ಣವಾಗಿ ಅವಲಂಬಿತರಾಗಿದ್ದಾರೆ. ಏಶಿಯನ್ ಡೆವಲಪ್ಮೆಂಟ್ ಬ್ಯಾಂಕ್ ಇಂದ 2,500 ಕೋಟಿ ಸಾಲವನ್ನು ತೆಗೆದುಕೊಳ್ಳುವ ಮೂಲಕ ಸರ್ಕಾರಿ ಶಿಕ್ಷಣ ಸಂಸ್ಥೆಗಳ ಸಂಖ್ಯೆಯನ್ನು ಇಳಿಮುಖಗೊಳಿಸುತ್ತಾ, ಬಡ ಜನಗಳ ಹೊರೆಯನ್ನು ಇನ್ನು ಹೆಚ್ಚು ಮಾಡಲು ಮುಂದಾಗಿದೆ ಎಂದು ಆರೋಪಿಸಿದರು.

    ಮುಂದುವರೆಯುತ್ತಾ, ಇತ್ತೀಚಿಗೆ ಹೊರಡಿಸಲಾದ ಸರ್ಕಾರದ ಹೊಸ ಆದೇಶವು ಕೌಶಲ್ಯಾಧಾರಿತ ಶಿಕ್ಷಣವನ್ನು ನೀಡುವ ಮೂಲಕ ಸರ್ಕಾರಿ ಶಾಲೆಯಲ್ಲಿ ಓದುವ ಮಕ್ಕಳಿಗೆ ದೀಪ ಮತ್ತು ಹಣತೆ ಮಾಡಲು, ಅಡಿಕೆ ಕಾಯಿ ಬಿಡಿಸಲು, ಇತ್ಯಾದಿ..ತರಬೇತಿ ನೀಡುತ್ತಾ ಸರ್ಕಾರಿ ಶಾಲೆ ಮಕ್ಕಳನ್ನು ಉನ್ನತ ಶಿಕ್ಷಣದಿಂದ ದೂರ ಉಳಿಯುವಂತೆ ಹಾಗೂ ಬಡ ಕುಟುಂಬದ ಮಕ್ಕಳನ್ನು ಬಾಲ ಕಾರ್ಮಿಕರಾಗಿಸುವ ಸಂಚನ್ನು ಕಾನೂನಾತ್ಮಕವಾಗಿ ಕೆಪಿಎಸ್ ಮ್ಯಾಗ್ನೆಟ್ ಯೋಜನೆಯ ಮೂಲಕ ಅನುಷ್ಠಾನಕ್ಕೆ ತರುತ್ತಿರುವುದು ಬಹಳ ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರಿ ಶಾಲೆಯಲ್ಲಿ ಓದುವ ಮಕ್ಕಳು ವೈದ್ಯರಾಗಲು, ಇಂಜಿನಿಯರಿಂಗ್ಸ್, ಟೀಚರ್ ಆಗಲು ಕನಸು ಕಾಣಬಾರದೇ? ಎಂದು ಪ್ರಶ್ನಿಸಿದರು.

    ನಾವೆಲ್ಲ ರೈತರು ಕಾರ್ಮಿಕರು ನಮ್ಮ ಮಕ್ಕಳನ್ನ ಧೈರ್ಯದಿಂದ ಊರಲ್ಲೇ ಇರುವ ಶಾಲೆಗೆ ಕಳಿಸಿ ನಾವು ಕೆಲಸ ಕಾರ್ಯಗಳಿಗೆ ಹೋಗುತ್ತೇವೆ. ಇನ್ನು ಮುಂದೆ ಊರಿನಲ್ಲಿ ಶಾಲೆ ಇಲ್ಲ ಎಂದರೆ ನಾವು ಯಾವ ಧೈರ್ಯದ ಮೇಲೆ ದೂರದಲ್ಲಿರುವ ಶಾಲೆಗೆ ಕಳಿಸುವುದು. ಅದರಲ್ಲೂ ಹೆಣ್ಣು ಮಕ್ಕಳನ್ನು ಅಷ್ಟು ದೂರ ಕಳಿಸುವುದು ಕಷ್ಟ. ಹಾಗಾಗಿ ನಮ್ಮ ಊರಿನ ಶಾಲೆ ಮುಚ್ಚಿದರೆ ನಮಗೆ ಬಹಳ ತೊಂದರೆ ಆಗುತ್ತೆ ಅಂತ  ಗ್ರಾಮಸ್ಥರು ತಮ್ಮ ಕಳವಳವನ್ನ ವ್ಯಕ್ತಪಡಿಸಿದರು.

    ನಂತರ ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿ ರಚಿಸಲಾಯಿತು.   ಪ್ರತಿಭಟನೆಯಲ್ಲಿ ಎಐಡಿಎಸ್ಓನ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರು ಭರತ್ ಹಾಗೂ ಊರಿನ ವಿದ್ಯಾರ್ಥಿಗಳು ಹಾಗೂ ಪೋಷಕರು ಭಾಗವಹಿಸಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ

    June 10, 2026

    ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ವೃದ್ಧೆಯ ಕೊಲೆ: ಮುಖ್ಯ ಆರೋಪಿಗೆ ಜೀವಾವಧಿ, ಮತ್ತೊಬ್ಬಳಿಗೆ 3 ವರ್ಷ ಜೈಲು

    June 10, 2026

    ಜಿಲ್ಲಾ ಮಿಷನ್ ಟಾಸ್ಕ್ ಫೋರ್ಸ್ ಸಭೆ:  ಕಾಮಗಾರಿಗಳ ಪ್ರಗತಿ ಪರಿಶೀಲನೆಗೆ ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ

    June 10, 2026

    Leave A Reply Cancel Reply

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಚಿಕ್ಕನಾಯಕನಹಳ್ಳಿ

    ಹಾಸ್ಟೇಲ್ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಆಹಾರವನ್ನು ನೀಡಿ: ಶಾಸಕ ಸಿ.ಬಿ.ಸುರೇಶ್‌ ಬಾಬು

    June 10, 2026

    ಚಿಕ್ಕನಾಯಕನಹಳ್ಳಿ : ಭವಿಷ್ಯದ ಕನಸನ್ನು ಹೊತ್ತು ವಿದ್ಯಾಬ್ಯಾಸಕ್ಕಾಗಿ ಹಾಸ್ಟೇಲ್‌ ನಲ್ಲಿರುವ ವಿದ್ಯಾರ್ಥಿಗಳಿಗೆ ಗುಣಮಟ್ಟದ ಉತ್ತಮ ಆಹಾರವನ್ನು ನೀಡುವ ಮೂಲಕ ಅದ್ಯಯನಕ್ಕೆ…

    ಕೊಟ್ಟೂರು: ಪ್ರೊ.ಬಿ.ಕೃಷ್ಣಪ್ಪನವರ 89ನೇ ಜನ್ಮದಿನಾಚರಣೆ; ದಸಂಸ ವತಿಯಿಂದ ಅರ್ಥಪೂರ್ಣ ಆಚರಣೆ

    June 10, 2026

    ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ

    June 10, 2026

    ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ವೃದ್ಧೆಯ ಕೊಲೆ: ಮುಖ್ಯ ಆರೋಪಿಗೆ ಜೀವಾವಧಿ, ಮತ್ತೊಬ್ಬಳಿಗೆ 3 ವರ್ಷ ಜೈಲು

    June 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.