nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹೊಳವನಹಳ್ಳಿಗೆ ಬಸ್ ಬಾರದೆ ವಿದ್ಯಾರ್ಥಿಗಳ ಪರದಾಟ : ಸರ್ಕಾರಿ ಬಸ್ ಗಾಗಿ ವಿದ್ಯಾರ್ಥಿಗಳ ಆಗ್ರಹ

    September 9, 2026

    ಅಬಕಾರಿ ಅಕ್ರಮ ಕೇಸ್‌: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮನೆ ಮೇಲೆ ಇಡಿ (ED) ದಾಳಿ!

    September 9, 2026

    ಅಕ್ಟೋಬರ್ ಅಂತ್ಯದೊಳಗೆ ತುಮಕೂರು ಜಿಲ್ಲೆಗೆ ಎತ್ತಿನಹೊಳೆ ನೀರು ಹರಿಸಲು ಡಿಸಿಎಂ ಸೂಚನೆ

    September 8, 2026
    Facebook Twitter Instagram
    ಟ್ರೆಂಡಿಂಗ್
    • ಹೊಳವನಹಳ್ಳಿಗೆ ಬಸ್ ಬಾರದೆ ವಿದ್ಯಾರ್ಥಿಗಳ ಪರದಾಟ : ಸರ್ಕಾರಿ ಬಸ್ ಗಾಗಿ ವಿದ್ಯಾರ್ಥಿಗಳ ಆಗ್ರಹ
    • ಅಬಕಾರಿ ಅಕ್ರಮ ಕೇಸ್‌: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮನೆ ಮೇಲೆ ಇಡಿ (ED) ದಾಳಿ!
    • ಅಕ್ಟೋಬರ್ ಅಂತ್ಯದೊಳಗೆ ತುಮಕೂರು ಜಿಲ್ಲೆಗೆ ಎತ್ತಿನಹೊಳೆ ನೀರು ಹರಿಸಲು ಡಿಸಿಎಂ ಸೂಚನೆ
    • ತುಮಕೂರು ದಸರಾ ಉತ್ಸವ ಅದ್ಧೂರಿಯಾಗಿ ಆಚರಿಸಲು ಡಿಸಿಎಂ ಸೂಚನೆ
    • ನಿಡಗಲ್ಲು ಉತ್ಸವಕ್ಕೆ ಅದ್ದೂರಿ ಚಾಲನೆ: ದುರ್ಗವನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲು ಒತ್ತಾಯ
    • 15 ಲಕ್ಷ ಬಡವರಿಗೆ ಶೀಘ್ರ ಉಚಿತ ನಿವೇಶನ: ಡಿಸಿಎಂ ಪರಮೇಶ್ವರ್
    • ಮೂಢನಂಬಿಕೆ ತೊರೆದು ವೈಚಾರಿಕತೆಯೊಂದಿಗೆ ಬಾಳಿ: ಶ್ರೀ ಬಸವಮೂರ್ತಿ ಮಾದರ ಚೆನ್ನಯ್ಯ ಸ್ವಾಮೀಜಿ
    • ಅಹಿಂದ ವರ್ಗದ ಸಮಾಜದಲ್ಲಿ ಶೈಕ್ಷಣಿಕ ಕ್ರಾಂತಿ: ಶಾಸಕ ಎಸ್.ಆರ್.ಶ್ರೀನಿವಾಸ್ ಮೆಚ್ಚುಗೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹೊಳವನಹಳ್ಳಿಗೆ ಬಸ್ ಬಾರದೆ ವಿದ್ಯಾರ್ಥಿಗಳ ಪರದಾಟ : ಸರ್ಕಾರಿ ಬಸ್ ಗಾಗಿ ವಿದ್ಯಾರ್ಥಿಗಳ ಆಗ್ರಹ
    ಕೊರಟಗೆರೆ September 9, 2026

    ಹೊಳವನಹಳ್ಳಿಗೆ ಬಸ್ ಬಾರದೆ ವಿದ್ಯಾರ್ಥಿಗಳ ಪರದಾಟ : ಸರ್ಕಾರಿ ಬಸ್ ಗಾಗಿ ವಿದ್ಯಾರ್ಥಿಗಳ ಆಗ್ರಹ

    By Ganesh TumkuruSeptember 9, 2026No Comments2 Mins Read
    holavanahalli

    ಕೊರಟಗೆರೆ : ತಾಲ್ಲೂಕಿನ ಹೊಳವನಹಳ್ಳಿ ಹೋಬಳಿ ಕೇಂದ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳು ಪ್ರಗತಿಯಲ್ಲಿದ್ದರೂ, ಸಾರಿಗೆ ಸಂಪರ್ಕದ ಕೊರತೆಯಿಂದ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.

    ಹೊಳವನಹಳ್ಳಿ ಹೋಬಳಿ ವ್ಯಾಪ್ತಿಯ ಅರಸಾಪುರ, ಬೈರೇನಹಳ್ಳಿ, ಅಕ್ಕಿರಾಂಪುರ, ಸೊಂಪುರ ಸೇರಿದಂತೆ ಹತ್ತಾರು ಹಳ್ಳಿಗಳಿಂದ ಪ್ರತಿದಿನ ನೂರಾರು ವಿದ್ಯಾರ್ಥಿಗಳು ಹೊಳವನಹಳ್ಳಿಗೆ ಶಾಲಾ-ಕಾಲೇಜಿಗೆ ಬರುತ್ತಾರೆ. ಆದರೆ ಗೌರಿಬಿದನೂರು ಮತ್ತು ತುಮಕೂರು ಕಡೆಯಿಂದ ಬರುವ ಬಸ್ ಗಳು ಹೊಳವನಹಳ್ಳಿಗೆ ಬಾರದೆ ಗೌರಗಾನಹಳ್ಳಿ ಕ್ರಾಸ್ ನಲ್ಲಿಯೇ ಹಾದು ಹೋಗುತ್ತಿವೆ.

    ಇದರಿಂದ ವಿದ್ಯಾರ್ಥಿಗಳು ಗೌರಗಾನಹಳ್ಳಿ ಕ್ರಾಸ್ ನಿಂದ ಹೊಳವನಹಳ್ಳಿವರೆಗೆ ಸುಮಾರು 5 ಕಿ.ಮೀ ಹಾಗೂ ಸೋಂಪುರ ಗ್ರಾಮದಿಂದ 3 ಕಿ.ಮೀ ದೂರ ನಡೆದುಕೊಂಡು ಬರುವ ಪರಿಸ್ಥಿತಿ ನಿರ್ಮಾಣವಾಗಿದೆ. ಮಳೆಗಾಲದಲ್ಲಿ ಈ ಸಮಸ್ಯೆ ಮತ್ತಷ್ಟು ಹೆಚ್ಚಾಗಿದೆ.

    ಬೆಳಗ್ಗೆ ಶಾಲಾ–ಕಾಲೇಜು ಸಮಯದಲ್ಲಿ ಮತ್ತು ಸಂಜೆ ತಿರುಗಿ ಹೋಗುವ ಸಮಯದಲ್ಲಿ ಹೊಳವನಹಳ್ಳಿ ಮಾರ್ಗವಾಗಿ ಬಂದು ವಾಪಸ್ ಹೋಗುವ  ವ್ಯವಸ್ಥೆ ಕಲ್ಪಿಸಬೇಕು ಎಂದು ವಿದ್ಯಾರ್ಥಿಗಳು ಮತ್ತು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೂಡಲೇ ಸಾರಿಗೆ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ವಿದ್ಯಾರ್ಥಿಗಳ ಸಮಸ್ಯೆಗೆ ಪರಿಹಾರ ಒದಗಿಸಬೇಕು ಎಂದು ಒತ್ತಾಯಿಸಿದ್ದಾರೆ.

    ಹೊಳವನಹಳ್ಳಿಯಲ್ಲಿ ರಸ್ತೆ ಕೆಲಸ ನಡೆಯುತ್ತಿರುವುದರಿಂದ ಬಸ್ ಗಳು ಬರದೇ  ಸುಮಾರು ಹದಿನೈದು ದಿನಗಳಿಂದ ಗೌರಗಾನಹಳ್ಳಿ ಕ್ರಾಸ್ ನಿಂದ ಹೊಳವನಹಳ್ಳಿ ಗೆ ನಾವು ನಡೆದುಕೊಂಡೇ ಶಾಲೆಗೆ ತೆರಳುತ್ತಿದ್ದೇವೆ. ಸಂಬಂಧ ಪಟ್ಟ ಅಧಿಕಾರಿಗಳು ಬಸ್ ವ್ಯವಸ್ಥೆ ಮಾಡಿದರೆ ವಿದ್ಯಾರ್ಥಿಗಳಿಗೆ ಅನುಕೂಲ ಆಗಲಿದೆ.

    — ಭಾರ್ಗವಿ. ಹೊಳವನಹಳ್ಳಿ ಶಾಲೆಯ ವಿದ್ಯಾರ್ಥಿನಿ


    ರಸ್ತೆ ಕಾಮಗಾರಿ ತಡವಾಗಿ ಮಾಡುತ್ತಿರುವುದರಿಂದ ಹೊಳವನಹಳ್ಳಿಗೆ ಬಸ್ ಗಳು ಬರದೇ ಶಾಲಾ ಮಕ್ಕಳಿಗೆ ಬಸ್ ಸಿಗದೇ ಶಾಲೆಗೆ ತಡವಾಗಿ ಬರುತ್ತಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಅಧಿಕಾರಿಯ ಜೊತೆಗೆ ಮಾತನಾಡಿದ್ದೇನೆ ಇದಕ್ಕೆ ಯಾವುದೇ ರೀತಿಯ ಸ್ಪಂದನೆ ಸಿಕ್ಕಿಲ್ಲ. ದೂರವಾಣಿ ಮೂಲಕ ಸಂಬಂದ ಪಟ್ಟ ಇಂಜಿನಿಯರ್ ಜೊತೆ ಮಾತನಾಡಿದೆ ಆದರೆ ಅವರು ಬೇಜವಾಬ್ದಾರಿಯಾಗಿ ಮಾತನಾಡುತ್ತಿದ್ದಾರೆ.

    —  ಲಾಲಾನಾಯ್ಕ್. ಮುಖ್ಯ ಶಿಕ್ಷಕ ಹೊಳವನಹಳ್ಳಿ ಪ್ರೌಢಶಾಲೆ.


    ಹೊಳವನಹಳ್ಳಿಯಲ್ಲಿ ನಿರ್ಮಾಣವಾಗುತ್ತಿರುವ ರಸ್ತೆ ಕಾಮಗಾರಿ ವಿಳಂಬ ಆಗುತ್ತಿರುವ ಹಿನ್ನೆಲೆ ಹೊಳವನಹಳ್ಳಿ ಗೆ ಬಸ್ ಗಳು ಬಾರದಿರುವುದರಿಂದ ವಿದ್ಯಾರ್ಥಿಗಳಿಗೆ ಸಾಕಷ್ಟು ತೊಂದರೆ ಆಗುತ್ತಿದೆ.

    ಕೊರಟಗೆರೆಯ ಗೌರಗಾನಹಳ್ಳಿ ಕ್ರಾಸ್ ಮಾರ್ಗವಾಗಿ ಹೊಳವನಹಳ್ಳಿ ಗೆ ಬರುತ್ತಿದ್ದ ಬಸ್ ಗಳು ಮಾರ್ಗ ಬದಲಿಸಿ ಗೌರಗಾನಹಳ್ಳಿ, ಕತ್ತಿನಾಗೇನಹಳ್ಳಿ, ಅಕ್ಕಿರಾಂಪುರದ ಮೂಲಕ ಸಂಚರಿಸುತ್ತಿವೆ.. ಇದರಿಂದ ಸಾರ್ವಜನಿಕರಿಗೆ, ವೃದ್ಧರಿಗೆ  ಶಾಲಾ ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ಸಮಯಕ್ಕೆ ಸರಿಯಾಗಿ ಬಸ್ ಸಿಗದೇ ಮತ್ತು ಹೊಳವನಹಳ್ಳಿಗೆ ಬಸ್ ಬಾರದೇ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ಮೂಢನಂಬಿಕೆ ತೊರೆದು ವೈಚಾರಿಕತೆಯೊಂದಿಗೆ ಬಾಳಿ: ಶ್ರೀ ಬಸವಮೂರ್ತಿ ಮಾದರ ಚೆನ್ನಯ್ಯ ಸ್ವಾಮೀಜಿ

    September 8, 2026

    ಕೊರಟಗೆರೆ: ಮಳೆಗಾಲದಲ್ಲೇ ಕುಡಿಯುವ ನೀರಿಗೆ ತೀವ್ರ ಹಾಹಾಕಾರ; ಪುರಸಭೆಗೆ ಮುತ್ತಿಗೆ ಹಾಕಿ ಗ್ರಾಮಸ್ಥರ ಆಕ್ರೋಶ

    September 7, 2026

    ಬುದ್ಧ, ಬಸವ, ಅಂಬೇಡ್ಕರ್ ವಿರುದ್ಧ ಅವಹೇಳನ: ಕಿಡಿಗೇಡಿಯ ಗಡಿಪಾರಿಗೆ ದಲಿತ ಪರ ಸಂಘಟನೆಗಳಿಂದ ಒತ್ತಾಯ

    September 7, 2026

    Leave A Reply Cancel Reply

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಹೊಳವನಹಳ್ಳಿಗೆ ಬಸ್ ಬಾರದೆ ವಿದ್ಯಾರ್ಥಿಗಳ ಪರದಾಟ : ಸರ್ಕಾರಿ ಬಸ್ ಗಾಗಿ ವಿದ್ಯಾರ್ಥಿಗಳ ಆಗ್ರಹ

    September 9, 2026

    ಕೊರಟಗೆರೆ : ತಾಲ್ಲೂಕಿನ ಹೊಳವನಹಳ್ಳಿ ಹೋಬಳಿ ಕೇಂದ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳು ಪ್ರಗತಿಯಲ್ಲಿದ್ದರೂ, ಸಾರಿಗೆ ಸಂಪರ್ಕದ ಕೊರತೆಯಿಂದ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು…

    ಅಬಕಾರಿ ಅಕ್ರಮ ಕೇಸ್‌: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮನೆ ಮೇಲೆ ಇಡಿ (ED) ದಾಳಿ!

    September 9, 2026

    ಅಕ್ಟೋಬರ್ ಅಂತ್ಯದೊಳಗೆ ತುಮಕೂರು ಜಿಲ್ಲೆಗೆ ಎತ್ತಿನಹೊಳೆ ನೀರು ಹರಿಸಲು ಡಿಸಿಎಂ ಸೂಚನೆ

    September 8, 2026

    ತುಮಕೂರು ದಸರಾ ಉತ್ಸವ ಅದ್ಧೂರಿಯಾಗಿ ಆಚರಿಸಲು ಡಿಸಿಎಂ ಸೂಚನೆ

    September 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.