ಆಗ್ರಾದ ಕೋಚಿಂಗ್ ಸೆಂಟರ್ ನ ಶಿಕ್ಷಕರೊಬ್ಬರ ಮೇಲೆ ಇಬ್ಬರು ವಿದ್ಯಾರ್ಥಿಗಳು ಗುಂಡು ಹಾರಿಸಿರುವ ಘಟನೆ ನಡೆದಿದೆ. ಅಲ್ಲೇ ಇದ್ದ ಜನರು ಶಿಕ್ಷಕರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಇದಾದ ನಂತರ ಆರೋಪಿ ವಿದ್ಯಾರ್ಥಿಗಳು ಶಿಕ್ಷಕರಿಗೆ ಬೆದರಿಕೆ ಹಾಕುವ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಒಂದು ಗುಂಡು ಹಾರಿಸಿದ್ದೇವೆ ಅಷ್ಟೆ, ಇನ್ನೂ 39 ಬಾಕಿ ಇದೆ ಎಂದು ವಿದ್ಯಾರ್ಥಿಗಳು ಎಚ್ಚರಿಕೆ ನೀಡಿದ್ದಾರೆ. ವಿಡಿಯೋವನ್ನು ಗಮನಿಸಿದ ಆಗ್ರಾ ಪೊಲೀಸರು ಆರೋಪಿ ವಿದ್ಯಾರ್ಥಿಗಳಿಗಾಗಿ ಹುಡುಕಾಟ ಆರಂಭಿಸಿದ್ದಾರೆ.
ಆಗ್ರಾದ ಖಂಡೌಲಿ ತಹಸಿಲ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಶಾಲೆಯಲ್ಲಿ ಶಿಕ್ಷಕರಾಗಿ ಪಾಠ ಭೋಧಿಸಿದ ಬಳಿಕ, ಶಾಲೆಯನ್ನು ಮುಗಿಸಿ ಅವರು ಕೋಚಿಂಗ್ ಸೆಂಟರ್ ನಲ್ಲಿ ತರಗತಿ ನಡೆಸುತ್ತಾರೆ. ಇದಕ್ಕಾಗಿ ಖಂದೌಲಿಯಲ್ಲಿಯೇ ಸ್ವಂತ ಕೋಚಿಂಗ್ ಸೆಂಟರ್ ತೆರೆದಿದ್ದಾರೆ.
ಬೈಕ್ ನಲ್ಲಿ ಬಂದ ಇಬ್ಬರು ಹಳೆ ವಿದ್ಯಾರ್ಥಿಗಳು, ಶಿಕ್ಷಕರನ್ನು ಹೊರಗೆ ಕರೆದು ಬಂದೂಕು ತೆಗೆದು ಶಿಕ್ಷಕರ ಕಾಲಿಗೆ ಗುಂಡು ಹಾರಿಸಿದ. ಗುಂಡಿನ ಶಬ್ದ ಕೇಳಿ ಅಕ್ಕಪಕ್ಕದವರು ಸ್ಥಳಕ್ಕೆ ಆಗಮಿಸಿ ಪೊಲೀಸರಿಗೆ ಮಾಹಿತಿ ನೀಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಅವರ ಸ್ಥಿತಿ ಸ್ಥಿರವಾಗಿದೆ. ಆರೋಪಿ ವಿದ್ಯಾರ್ಥಿಗಳ ವಿರುದ್ಧ ಪೊಲೀಸರು ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.


