nammatumakuru

    Subscribe to Updates

    Get the latest creative news from FooBar about art, design and business.

    What's Hot

    ನೇಪಾಳ ಪ್ರವಾಹ: ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಮುಂದು, ಮಾಹಿತಿ ಸಂಗ್ರಹ ಆರಂಭ

    August 27, 2026

    ಕಬ್ಬಿನ ಗದ್ದೆಯಲ್ಲಿ ಪ್ರತ್ಯಕ್ಷವಾದ 4 ಚಿರತೆ ಮರಿಗಳು, ಗ್ರಾಮಸ್ಥರಲ್ಲಿ ಆತಂಕ

    August 27, 2026

    ತುಮಕೂರು: ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ

    August 27, 2026
    Facebook Twitter Instagram
    ಟ್ರೆಂಡಿಂಗ್
    • ನೇಪಾಳ ಪ್ರವಾಹ: ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಮುಂದು, ಮಾಹಿತಿ ಸಂಗ್ರಹ ಆರಂಭ
    • ಕಬ್ಬಿನ ಗದ್ದೆಯಲ್ಲಿ ಪ್ರತ್ಯಕ್ಷವಾದ 4 ಚಿರತೆ ಮರಿಗಳು, ಗ್ರಾಮಸ್ಥರಲ್ಲಿ ಆತಂಕ
    • ತುಮಕೂರು: ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ
    • ಈದ್ ಮಿಲಾದ್: ಮೆರವಣಿಗೆಯಲ್ಲಿ ಭಾಗಿಯಾಗಿ ಶುಭಕೋರಿದ ಹಾಸನ ಸಂಸದ ಶ್ರೇಯಸ್ ಪಟೇಲ್
    • ತುಮಕೂರು: ವಿವಿಧ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
    • ಹಾಸನ: ಮುಸುಕಿನ ಜೋಳಕ್ಕೆ ‘ಬಿಳಿಸುಳಿ’ ರೋಗ ಬಾಧೆ: 7 ತಾಲೂಕು ಬರಪೀಡಿತ ಎಂದು ಘೋಷಿಸಿ: ಸಿಎಂಗೆ ಸಚಿವ ಶಿವಲಿಂಗೇಗೌಡ ಮನವಿ
    • ಹೆಡಗಾಪೂರದಲ್ಲಿ ಜಾಬ್ ಕಾರ್ಡ್ ಮೇಳಕ್ಕೆ ಚಾಲನೆ: ಕೂಲಿಕಾರ್ಮಿಕರಿಗೆ ಹಳ್ಳಿಯಲ್ಲೇ ಸಿಗಲಿದೆ ಹೆಚ್ಚಿನ ಉದ್ಯೋಗಾವಕಾಶ
    • ಈ ಬಾರಿ ಮೈಸೂರು ದಸರಾದಲ್ಲಿ ಕಂಬಳ ನಡೆಯುತ್ತದೆ: ಸಚಿವ ಡಾ. ಯತೀಂದ್ರ ಸ್ಪಷ್ಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಭವಿಷ್ಯದ ಭಾರತ ನಿರ್ಮಾಣಕ್ಕೆ ವಿದ್ಯಾರ್ಥಿಗಳು ಸಂಕಲ್ಪ ತೊಡಬೇಕು : ಮಾಜಿ ಶಾಸಕ ಪಿ.ಆರ್.ಸುಧಾಕರ್ ಲಾಲ್ ಕರೆ
    ಕೊರಟಗೆರೆ December 13, 2025

    ಭವಿಷ್ಯದ ಭಾರತ ನಿರ್ಮಾಣಕ್ಕೆ ವಿದ್ಯಾರ್ಥಿಗಳು ಸಂಕಲ್ಪ ತೊಡಬೇಕು : ಮಾಜಿ ಶಾಸಕ ಪಿ.ಆರ್.ಸುಧಾಕರ್ ಲಾಲ್ ಕರೆ

    By adminDecember 13, 2025No Comments2 Mins Read
    koratagere

    ಕೊರಟಗೆರೆ : ಭಾರತಾವು ಒಂದು ಬಲಿಷ್ಟ ರಾಷ್ಟ್ರ ಪ್ರಗತಿಪರ ರಾಷ್ಟ್ರ ಭವಿಷ್ಯದ ಭಾರತ ಕನಸನ್ನು ಹೊತ್ತಿರುವ ಪ್ರಧಾನ ಮಂತ್ರಿಗಳ ಸಂಕಲ್ಪವನ್ನು ವಿದ್ಯಾರ್ಥಿಗಳು ನನಸು ಮಾಡಬೇಕು, ಎನ್‌ ಡಿಎ ಮೈತ್ರಿಕೂಟದಿಂದ ವಿತರಿಸುತ್ತಿರುವ ನೋಟ್‌ ಬುಕ್‌ ನ್ನು ಸದ್ಭಳಕೆ ಮಾಡಿಕೊಂಡು ಪರೀಕ್ಷೆಯಲ್ಲಿ ಉತ್ತಮ ಅಂಕದೊಂದಿಗೆ ಶಿಕ್ಷಣದಲ್ಲಿ ಪ್ರಗತಿ ಸಾಧಿಸಬೇಕಿದೆ ಎಂದು ಮಾಜಿ ಶಾಸಕ ಪಿ.ಆರ್.ಸುಧಾಕರ್ ಲಾಲ್ ತಿಳಿಸಿದರು.

    ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ 75ನೇ ವರ್ಷದ ಜನ್ಮದಿನದ ಪ್ರಯುಕ್ತ ಕೇಂದ್ರ ಜಲಶಕ್ತಿ ಮತ್ತು ರಾಜ್ಯ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣನವರ ಸಹಕಾರದಿಂದ ಎನ್‌ ಡಿಎ ಪಕ್ಷವು ಸರ್ಕಾರಿ ಮಾಧ್ಯಮಿಕ ಮತ್ತು ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ನೋಟ್‌ ಬುಕ್ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

    ವಿ.ಸೋಮಣ್ಣನವರು ತುಮಕೂರು ಜಿಲ್ಲೆಯ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿ ಕೇಂದ್ರ ಸಚಿವರಾಗಿ ಜಿಲ್ಲೆಯ ಅಭಿವೃದ್ಧಿಗೆ ವಿಶೇಷ ಆಸಕ್ತಿ ವಹಿಸಿದ್ದಾರೆ. ವಿಶ್ವ ನಾಯಕ ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟು ಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ ಬುಕ್ ವಿತರಣೆ ಮಾಡುವ ಮೂಲಕ ಅರ್ಥಪೂರ್ಣವಾಗಿ ಆಚರಣೆ ಮಾಡಲಾಗುತ್ತಿದೆ ಎಂದು ಹೇಳಿದರು.

    ನಿವೃತ್ತ ಐಎಎಸ್ ಅಧಿಕಾರಿ ಮತ್ತು ಬಿಜೆಪಿ ಮುಖಂಡ ಬಿ.ಎಚ್.ಅನಿಲ್‌ ಕುಮಾರ್ ಮಾತನಾಡಿ, ಉದ್ಯೋಗ ಹರಸಿ ಹೊರ ದೇಶಗಳಿಗೆ ಹೋಗುವ ಬದಲು ನಮ್ಮ ದೇಶದಲ್ಲಿನ ಸಾಕಷ್ಟು ಅವಕಾಶಗಳನ್ನು ಬಳಕೆ ಮಾಡಿಕೊಂಡು ದೇಶದ ಉತ್ತಮ ಪ್ರಜೆಗಳಾಗಿ ಹೊರಹೊಮ್ಮಬೇಕಿದೆ. ಪ್ರಧಾನ ಮಂತ್ರಿಗಳ ವಿಕಸಿತಾ ಭಾರತ ಕನಸನ್ನು ಯುವಕರು ನನಸು ಮಾಡಬೇಕು ಎಂದು ಹೇಳಿದರು.

    ಜೆಡಿಎಸ್ ತಾ.ಅಧ್ಯಕ್ಷ ಕಾಮರಾಜು ಮಾತನಾಡಿ, ಈ ರಾಷ್ಟçವನ್ನು ಅತ್ಯಂತ ಉನ್ನತ ಆಲೋಚನೆಗಳಿಂದ ಸುಭದ್ರ ಭಾರತವನ್ನು ನಿರ್ಮಾಣ ಮಾಡಲಿಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಪಣ ತೊಟ್ಟಿದ್ದಾರೆ ಎಂದರು.

    ಈ ಕಾರ್ಯಕ್ರಮದಲ್ಲಿ ಭಾಜಪ ಅಧ್ಯಕ್ಷ ರುದ್ರೇಶ್, ಜೆಡಿಎಸ್ ಕಾರ್ಯಾಧ್ಯಕ್ಷ ತುಂಬಾಡಿ ಲಕ್ಷ್ಮೀಶ, ಜೆಡಿಎಸ್ ಉಪಾಧ್ಯಕ್ಷ ಕೋಡ್ಲಹಳ್ಳಿ ವೆಂಕಟೇಶ್,ಲಕ್ಷ್ಮಣ್, ಬಿಜೆಪಿ ಮಾಜಿ ಅಧ್ಯಕ್ಷ ಪವನ್‌ ಕುಮಾರ್, ಪ.ಪಂ ಸದಸ್ಯ ಪ್ರದೀಪ್‌ಕುಮಾರ್, ಲಕ್ಷ್ಮಿನಾರಾಯಣ್,  ಮುಖಂಡರಾದ ರಮೇಶ್, ದಾಡಿ ವೆಂಕಟೇಶ್, ರಘು, ನರೇಂದ್ರಬಾಬು, ಮಹೇಂದ್ರ, ರಂಗನಾಥ್, ಸಿದ್ದರಾಜು, ಚೇತನ್, ದಯಾನಂದ್, ಗುರುದತ್ತ, ರಂಜಿತ್ ಸೇರಿದಂತೆ ಇತರರು ಇದ್ದರು.

    ಸಾವಿರಾರು ವಿದ್ಯಾರ್ಥಿಗಳಿಗೆ ನೋಟ್‌ ಬುಕ್ ವಿತರಣೆ:

    ವಿಶ್ವ ನಾಯಕ ಪ್ರಧಾನಿ ನರೇಂದ್ರ ಮೋದಿಯವರ 75ನೇ ಜನ್ಮದಿನದ ಪ್ರಯುಕ್ತ ಕೇಂದ್ರ ಸಚಿವ ವಿ.ಸೋಮಣ್ಣನವರ ಸಹಕಾರದಿಂದ ಕೊರಟಗೆರೆ ವಿಧಾನಸಭಾ ಕ್ಷೇತ್ರದ ಕೊರಟಗೆರೆ ಪಟ್ಟಣ, ಅಕ್ಕಿರಾಂಪುರ, ಗೌರಗಾಗನಹಳ್ಳಿ, ಸೋಂಪುರ, ಹೊಳವನಹಳ್ಳಿ, ವಡ್ಡಗೆರೆ, ದಾಸರಹಳ್ಳಿ ಸರ್ಕಾರಿ ಮಾಧ್ಯಮಿಕ ಮತ್ತು ಪ್ರೌಢಶಾಲೆಯ ಸಾವಿರಾರು ವಿದ್ಯಾರ್ಥಿಗಳಿಗೆ ನೋಟ್‌ಬುಕ್ ವಿತರಿಸಿದ್ದು, ವಿದ್ಯಾರ್ಥಿಗಳು ಪ್ರಧಾನಿ ಮೋದಿಯವರ ಹುಟ್ಟುಹಬ್ಬಕ್ಕೆ ಶುಭ ಹಾರೈಸಿದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಕೊರಟಗೆರೆ: ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

    August 25, 2026

    ಕೊರಟಗೆರೆ: ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ; ಚುನಾವಣಾ ನೋಂದಣಾಧಿಕಾರಿ ಸೋಮಪ್ಪ ಕಡಕೋಳ ಸೂಚನೆ

    August 25, 2026

    ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಗೊರವನಹಳ್ಳಿ ಮಹಾಲಕ್ಷ್ಮಿ ಅಮ್ಮನ ದರ್ಶನಕ್ಕೆ ಆಗಮಿಸಿದ ಭಕ್ತಸಾಗರ

    August 22, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ನೇಪಾಳ ಪ್ರವಾಹ: ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಮುಂದು, ಮಾಹಿತಿ ಸಂಗ್ರಹ ಆರಂಭ

    August 27, 2026

    ಬೆಂಗಳೂರು: ನೇಪಾಳ ಮತ್ತು ಟಿಬೆಟ್ ಗಡಿ ಭಾಗದಲ್ಲಿ ಸಂಭವಿಸಿರುವ ಭೀಕರ ಪ್ರವಾಹ ಹಾಗೂ ಭೂಕುಸಿತದ ಹಿನ್ನೆಲೆಯಲ್ಲಿ, ಅಲ್ಲಿ ಸಂಕಷ್ಟಕ್ಕೆ ಸಿಲುಕಿರುವ…

    ಕಬ್ಬಿನ ಗದ್ದೆಯಲ್ಲಿ ಪ್ರತ್ಯಕ್ಷವಾದ 4 ಚಿರತೆ ಮರಿಗಳು, ಗ್ರಾಮಸ್ಥರಲ್ಲಿ ಆತಂಕ

    August 27, 2026

    ತುಮಕೂರು: ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ

    August 27, 2026

    ಈದ್ ಮಿಲಾದ್: ಮೆರವಣಿಗೆಯಲ್ಲಿ ಭಾಗಿಯಾಗಿ ಶುಭಕೋರಿದ ಹಾಸನ ಸಂಸದ ಶ್ರೇಯಸ್ ಪಟೇಲ್

    August 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.