ತುಮಕೂರು: ಕೈಮಗ್ಗ ಮತ್ತು ಜವಳಿ ಇಲಾಖೆಯು ನೇಕಾರರ ಪ್ಯಾಕೇಜ್-ವಿಶೇಷ ಘಟಕ/ಗಿರಿಜನ ಉಪಯೋಜನೆಯಡಿ ಜವಳಿ ಕ್ಷೇತ್ರಕ್ಕೆ ಸಂಬಂಧಿಸಿದ ಸಣ್ಣ ಮತ್ತು ಅತೀ ಸಣ್ಣ ಘಟಕಗಳ ಸ್ಥಾಪನೆಗೆ ಸಹಾಯಧನ ಸೌಲಭ್ಯ ಕಲ್ಪಿಸಲು ಅರ್ಹರಿಂದ ಅರ್ಜಿ ಆಹ್ವಾನಿಸಿದೆ.
ಅರ್ಹ ಪ.ಜಾತಿ/ಪ.ಪಂಗಡ ಉದ್ದಿಮೆದಾರರು/ಫಲಾನುಭವಿಗಳು ಮಾರ್ಗಸೂಚಿಯನ್ವಯ ಪೂರ್ಣ ಪ್ರಮಾಣದ ಪ್ರಸ್ತಾವನೆಯನ್ನು ಉಪನಿರ್ದೇಶಕರ ಕಚೇರಿ, ಕೈಮಗ್ಗ ಮತ್ತು ಜವಳಿ ಇಲಾಖೆ, ‘ನಾಗನಿಲಯ’, 5ನೇ ಮುಖ್ಯ ರಸ್ತೆ, ಸಿದ್ದಗಂಗಾ ಬಡಾವಣೆ, ತುಮಕೂರು ಇವರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂ.ಸಂ. 0816–2275370ಯನ್ನು ಸಂಪರ್ಕಿಸಬೇಕೆಂದು ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx