ತುಮಕೂರು : ತೋಟಗಾರಿಕೆ ಇಲಾಖೆಯು ತೋಟಗಾರಿಕೆ ರೈತರು ಹಾಗೂ ಉದ್ದಿಮೆದಾರರಿಗೆ ನೆರವು ನೀಡಲು ಅರ್ಜಿ ಆಹ್ವಾನಿಸಿದೆ.
ಅಡಿಕೆ ಸುಲಿಯುವ ಯಂತ್ರ, ದೋಟಿ, ಬ್ರಷ್ ಕಟರ್, ಟಿಲ್ಲರ್, ಪವರ್ ವೀಡರ್, ಸ್ಪ್ರೇಯರ್, ರೋಟೋವೇಟರ್, ಡಿಗ್ಗರ್ ಹಾಗೂ ಇತರೆ ಯಂತ್ರಗಳನ್ನು (ಗರಿಷ್ಟ 1.25 ಲಕ್ಷ ರೂ. ಅಥವಾ 5 ಯಂತ್ರೋಪಕರಣಗಳಿಗೆ ಮಾತ್ರ) ಖರೀದಿಸಲು ಸಹಾಯಧನ ನೀಡಲಾಗುವುದು.
ಆಸಕ್ತ ರೈತರು ಹಾಗೂ ಉದ್ದಿಮೆದಾರರು ಭರ್ತಿ ಮಾಡಿದ ಅರ್ಜಿಯೊಂದಿಗೆ ಪಹಣಿ, ಬೆಳೆ ದೃಢೀಕರಣ, ಚೆಕ್ ಬಂದಿ, ಆಧಾರ್, ಬ್ಯಾಂಕ್ ಪಾಸ್ ಪುಸ್ತಕ, ಜಾತಿ ಪ್ರಮಾಣಪತ್ರ (ಪ.ಜಾತಿ ಮತ್ತು ಪ.ಪಂಗಡ ರೈತರಿಗೆ), ಜಂಟಿ ಖಾತೆ ಇದ್ದಲ್ಲಿ ಒಪ್ಪಿಗೆ ಪ್ರಮಾಣ ಪತ್ರ, ಖಾತೆದಾರರು ಮರಣ ಹೊಂದಿದ್ದಲ್ಲಿ ಮರಣ ಪ್ರಮಾಣ ಪತ್ರ ಸೇರಿದಂತೆ ಮತ್ತಿತರೆ ದಾಖಲಾತಿಗಳನ್ನು ಲಗತ್ತಿಸಿ ಹತ್ತಿರದ ಗ್ರಾಮ ಪಂಚಾಯಿತಿ ಕಚೇರಿ ಅಥವಾ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಗೆ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ತುಮಕೂರು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ– 9686503500, ಗುಬ್ಬಿ–9535781963, ಶಿರಾ–9844042356, ಕುಣಿಗಲ್–9606570210, ತಿಪಟೂರು–9845014293, ಚಿಕ್ಕನಾಯಕನಹಳ್ಳಿ–9686056705, ಮಧುಗಿರಿ–9916378199, ತುರುವೇಕೆರೆ–9448416334, ಕೊರಟಗೆರೆ–9448001644 ಹಾಗೂ ಪಾವಗಡ–9448448970ಯನ್ನು ಸಂಪರ್ಕಿಸಬಹುದೆಂದು ತೋಟಗಾರಿಕೆ ಉಪನಿರ್ದೇಶಕ ಶಾರದಮ್ಮ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx