ಬೆಂಗಳೂರಿನಲ್ಲಿ ಆಧುನಿಕ ತಂತ್ರಜ್ಞಾನ ಬಳಸಿಕೊಂಡು ಬೆಂಗಳೂರಿನ 57 ವರ್ಷದ ರೋಗಿಯೊಬ್ಬರಿಗೆ ವಿಶಿಷ್ಟವಾದ ಶ್ವಾಸಕೋಶದ ಕಸಿ ಯಶಸ್ವಿಯಾಗಿ ಮಾಡುವ ಮೂಲಕ ದಾಖಲೆ ಬರೆದಿದ್ದೇವೆ ಎಂದು ಹರ್ಯಾಣದ ಮರೆಂಗೋ ಏಷ್ಯಾ ಆಸ್ಪತ್ರೆಗಳ ಶ್ವಾಸಕೋಶ ಕಸಿ ಶಸ್ತ್ರಚಿಕಿತ್ಸಕ ಡಾ.ಕುಮುದ್ ಧಿತಾಲ್ ಹೇಳಿದರು.
ದೇಶದಲ್ಲಿ ಇತ್ತೀಚಿನ ದಿನಗಳಲ್ಲಿ ಅಂಗಾಂಗ ದಾನದ ಬಗ್ಗೆ ಜಾಗೃತಿ ಮೂಡುತ್ತಿದೆ. ಇದರಿಂದಾಗಿ ಬಹುಮೂಲ್ಯವಾದ ಹಲವು ಜೀವಗಳನ್ನು ಉಳಿಸಲು ಸಾಧ್ಯವಾಗುತ್ತಿದೆ. ಮುಂದುವರಿದ ತಂತ್ರಜ್ಞಾನದ ಸದ್ಬಳಕೆ ಸಾಧ್ಯವಾಗುತ್ತಿದೆ.
ನಗರದ ಅಪೋಲೊ ಆಸ್ಪತ್ರೆಗಳ ಶ್ವಾಸಕೋಶ ಶಾಸ್ತ್ರವಿಭಾಗದ ತಜ್ಞ ವೈದ್ಯರ ತಂಡ, ಚೆನ್ನೈನ ಕಾವೇರಿ ಆಸ್ಪತ್ರೆ ಮತ್ತು ಹರ್ಯಾಣದ ಫರಿದಾಬಾದ್‌ನ ಮರೆಂಗೋ ಏಷ್ಯಾ ಆಸ್ಪತ್ರೆಯ ವೈದ್ಯ ಸಹಯೋಗದಲ್ಲಿ ಶಸ್ತ್ರಚಿಕಿತ್ಸೆ ನಡೆಸಿದ್ದೇವೆ. ಅತ್ಯಂತ ಕ್ಲಿಷ್ಟಕರ, ಅಪರೂಪದ ಹಾಗೂ ತುಂಬಾ ನಾಜೂಕಾದ ಶಸ್ತ್ರಚಿಕಿತ್ಸೆ ಇದಾಗಿದ್ದು, ಇತ್ತೀಚಿನ ದಿನಗಳಲ್ಲಿ ವೈದ್ಯಕೀಯ ಕ್ಷೇತ್ರದಲ್ಲಿ ಭಾರತ ಸಹ ಮುಂಚೂಣಿಯಲ್ಲಿದೆ ಎಂಬುದನ್ನು ಸಾಬೀತುಪಡಿಸುವಲ್ಲಿ ಸಫಲವಾಗಿದೆ
ಎಂದರು. ಬೆಂಗಳೂರಿನ 57 ವರ್ಷದ ಮೀನಾಕ್ಷಿ (ಹೆಸರು ಬದಲಾಯಿಸಲಾಗಿದೆ) ಅವರು ಕಳೆದ ಎರಡು ವರ್ಷಗಳಿಂದ ಉಸಿರಾಟದ ಸಮಸ್ಯೆ ಎದುರಿಸುತ್ತಿದ್ದರು.ಉಸಿರುಗಟ್ಟುವಿಕೆ ಸಮಸ್ಯೆ ತೀರಾ ಹೆಚ್ಚಾದ ಕಾರಣ ಮೀನಾಕ್ಷಿ ಜಯನಗರದ ಅಪೋಲೋ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದರು.ಮಹಿಳೆಗೆ ವಿಭಿನ್ನವಾದ ಶ್ವಾಸಕೋಶದ ಕಾಯಿಲೆ ಇಂಟರ್ ಸ್ಟೀಷಿಯಲ್ ಶ್ವಾಸಕೋಶದ ಸಮಸ್ಯೆ ಇರುವುದು ತಪಾಸಣೆ ವೇಳೆ ಪತ್ತೆಯಾಗಿತ್ತು. ಈ ರೀತಿಯ ಆರೋಗ್ಯ ಸಮಸ್ಯೆ ಶ್ವಾಸಕೋಶದ ಫೈಬೋಸಿಸ್ ಅಥವಾ ಗಟ್ಟಿಯಾಗುವಿಕೆ ಸಮಸ್ಯೆಗೆ ಕಾರಣವಾಗುತ್ತದೆ.ಮಹಿಳೆಯ ಆರೋಗ್ಯಸ್ಥಿತಿ ನಿರಂತರ ಉಸಿರಾಟದ ತೊಂದರೆಗೆ ಕಾರಣವಾಗಿತ್ತು.
ಹೀಗಾಗಿ ಆಕೆಗೆ ತನ್ನ ಮನೆಯಲ್ಲಿ ನಿರಂತರ ಆಮ್ಲಜನಕದ ಬೆಂಬಲದ ಅಗತ್ಯ ಎದುರಾಗುವ ಪರಿಸ್ಥಿತಿ ನಿರ್ಮಾಣವಾಗಿತ್ತು. ರೋಗಿಗೆ ಶ್ವಾಸಕೋಶ ಕಸಿ ಹೊರತುಪಡಿಸಿದರೆ ಬೇರೆ ಯಾವುದೇ ಮಾರ್ಗ ಅನುಸರಿಸಿದರೂ ಸಮಸ್ಯೆ ನಿವಾರಿಸಲು ಸಾಧ್ಯವಿಲ್ಲ ಎಂಬ ಅರಿವು ಮೂಡಿಸಲಾಯಿತು. ಈ ರೀತಿ ಶ್ವಾಸಕೋಶದ ಕಸಿ ಮಾಡಿಸಿಕೊಳ್ಳುವುದರಿಂದ ಉತ್ತಮ ಗುಣಮಟ್ಟದ ಜೀವನ ಮತ್ತು ದೀರ್ಘಾವಧಿ ಬದುಕುಳಿಯುವ ಸಂಭಾವ್ಯ ಪರಿಹಾರದ ಬಗ್ಗೆ ಮಾಹಿತಿ ನೀಡಿ ಭರವಸೆ ಮೂಡಿಸಿತ್ತು. ಆದರೂ ಈ ರೀತಿಯ ಚಿಕಿತ್ಸೆ ಪಡೆಲು ಆರಂಭದಲ್ಲಿ ಮಹಿಳೆ ಹಿಂಜರಿದಿದ್ದರು.ರೋಗಿ ಮತ್ತು ಆಕೆಯ ಕುಟುಂಬ ಅಂತಿಮವಾಗಿ ಅಪೋಲೋ ಆಸ್ಪತ್ರೆಯ ವೈದ್ಯಕೀಯ ತಂಡ ಮನವೊಲಿಸುವಲ್ಲಿ ಸಫಲವಾಯಿತು ಎಂದು ತಿಳಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


