ಕಲಬುರಗಿ ಜಿಲ್ಲೆಯಲ್ಲಿ ದಿಢೀರನೆ ಡೆಂಗ್ಯೂ ಜ್ವರ ಹೆಚ್ಚಾಗಿದ್ದು, ಜನರು ಆತಂಕಕ್ಕೊಳಗಾಗಿದ್ದಾರೆ. ಹೀಗಾಗಿ, ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣಗಳನ್ನು ತಡೆಗಟ್ಟಲು ಸೊಳ್ಳೆ ವಿರೋಧಿ ಫಾಗಿಂಗ್ ಅಭಿಯಾನವನ್ನು ಕಲಬುರಗಿ ಜಿಲ್ಲಾಡಳಿತ ಆರಂಭಿಸಿದೆ.
ಮಹಾನಗರ ಪಾಲಿಕೆ ಆಯುಕ್ತ ಭುವನೇಶ್ ಪಾಟೀಲ್ ಮಾತನಾಡಿ, ಕಳೆದ ಎರಡು ವಾರಗಳಿಂದ ನಗರದಲ್ಲಿ ಭಾರಿ ಮಳೆಯಾಗುತ್ತಿದ್ದು, ನೀರು ಅಲ್ಲಲ್ಲಿ ನಿಲ್ಲುತ್ತಿದೆ. ನಾವು ಈಗಾಗಲೇ ಫಾಗಿಂಗ್ ಅಭಿಯಾನವನ್ನು ಪ್ರಾರಂಭಿಸಿದ್ದೇವೆ. ವಿಶೇಷವಾಗಿ ತಗ್ಗು ಮತ್ತು ಕೊಳೆಗೇರಿ ಪ್ರದೇಶಗಳಲ್ಲಿ ಗಮನ ಹರಿಸಲಾಗಿದೆ ಎಂದರು.
‘ನಾವು ಆರೋಗ್ಯ ಇಲಾಖೆಯೊಂದಿಗೆ ಸಂಪರ್ಕದಲ್ಲಿದ್ದೇವೆ ಮತ್ತು ಲಾರ್ವಾ ಸಮೀಕ್ಷೆ ನಡೆಸಲು ನಮ್ಮ ಅಧಿಕಾರಿಗಳಿಗೆ ತರಬೇತಿ ನೀಡಿದ್ದೇವೆ. ಎರಡು ಅಥವಾ ಮೂರು ದಿನಗಳಿಗಿಂತ ಹೆಚ್ಚು ಕಾಲ ನೀರನ್ನು ಸಂಗ್ರಹಿಸದಂತೆ ನಾನು ಎಲ್ಲಾ ನಾಗರಿಕರಿಗೂ ವಿನಂತಿಸುತ್ತೇನೆ’ ಎಂದು ಅವರು ಹೇಳಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


