ಭ್ರಷ್ಟಾಚಾರ, ದುರಾಡಳಿತ ಮತ್ತು ಮಧ್ಯವರ್ತಿಗಳ ಹಾವಳಿ ಕುರಿತ ದೂರುಗಳನ್ನು ಆಧರಿಸಿ ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ 12 ಪ್ರಾದೇಶಿಕ ಸಾರಿಗೆ ಅಧಿಕಾರಿಗಳ (ಆರ್ ಟಿಒ) ಕಚೇರಿಗಳ ಮೇಲೆ ಬುಧವಾರ ಏಕಕಾಲಕ್ಕೆ ದಾಳಿ ಮಾಡಿದ ಲೋಕಾಯುಕ್ತ ಪೊಲೀಸರು, ಶೋಧ ನಡೆಸಿದ್ದಾರೆ.
ಬೆಂಗಳೂರು ನಗರದ ಒಂಬತ್ತು ಆರ್ ಟಿಒ ಕಚೇರಿಗಳಲ್ಲೂ ಶೋಧ ನಡೆದಿದೆ. ನೆಲಮಂಗಲ, ದೇವನಹಳ್ಳಿ ಮತ್ತು ಅನೇಕಲ್ ಆರ್ ಟಿಒ ಕಚೇರಿಗಳ ಮೇಲೂ ದಾಳಿಮಾಡಿ, ಶೋಧ ನಡೆಸಲಾಗಿದೆ.


