ನಟ ಸುದೀಪ್ ವಂಚಿಸಿದ್ದಾರೆ ಎಂದು ಆರೋಪ ಮಾಡಿದ್ದ ನಿರ್ಮಾಪಕರಾದ ಎನ್.ಎಂ. ಕುಮಾರ್ ಹಾಗೂ ಸುರೇಶ್ ವಿರುದ್ಧ ಜೆಎಂಎಫ್ ಸಿ ನ್ಯಾಯಾಲಯದಲ್ಲಿ ಕಿಚ್ಚ ಸುದೀಪ್ ಮೊಕದ್ದಮೆ ದಾಖಲಿಸಿದ್ದಾರೆ.
ಜೆಎಂಎಫ್ಸಿ ಕೋರ್ಟ್ ಗೆ ಇಂದು ಖುದ್ದಾಗಿ ಆಗಮಿಸಿ ಕಿಚ್ಚ ಸುದೀಪ್ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯನ್ನು ಸ್ವೀಕರಿಸಿದ ನ್ಯಾಯಾಲಯವು ವಿಚಾರಣೆಯನ್ನು ಆಗಸ್ಟ್ 17ಕ್ಕೆ ಮುಂದೂಡಿದೆ.
ಅರ್ಜಿ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸುದೀಪ್ ಚಲನಚಿತ್ರ ವಾಣಿಜ್ಯ ಮಂಡಳಿ, ನಿರ್ಮಾಪಕರ ಸಂಘಗಳ ಮೇಲೆ ನನಗೆ ಗೌರವವಿದೆ. ಇನ್ನು ವೈಯಕ್ತಿಕ ಹಿತಾಸಕ್ತಿಗೆ ಅವುಗಳನ್ನು ಬಳಸಲಾರೆ. ಹೀಗಾಗಿ ನಾನು ನೇರವಾಗಿ ನ್ಯಾಯಾಲಯಕ್ಕೆ ಬಂದಿದ್ದೇನೆ. ನನ್ನ ವಿರುದ್ಧ ಯಾರೇ ಏನೇ ಆರೋಪ ಮಾಡಿದ್ದರು ನ್ಯಾಯಾಲಯದಿಂದ ಸರಿ ಉತ್ತರ ಸಿಗುತ್ತದೆ ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


