ಲಂಡನ್ : ಬ್ರಿಟನ್ ನೂತನ ಪ್ರಧಾನ ಮಂತ್ರಿಯಾಗಿ ಲಿಜ್ ಟ್ರಸ್ ಆಯ್ಕೆಯಾಗಿದ್ದಾರೆ. ಅವರು ಪ್ರತಿಸ್ಪರ್ಧಿ ಭಾರತದ ಸುಧಾ ಮೂರ್ತಿ ಅವರ ಅಳಿಯ ರಿಷಿ ಸುನಾಕ್ ಅವರನ್ನು ಸೋಲು ಅನುಭವಿಸಿದ್ದಾರೆ. ಬೋರಿಸ್ ಜಾನ್ಸನ್ ಅವರ ಆಪ್ತೆ, ವಿದೇಶಾಂಗ ಸಚಿವೆ ಲಿಜ್ ಟ್ರಸ್ ಆಯ್ಕೆಯಾಗಿದ್ದಾರೆ.
ಆರಂಭಿಕ ಹಂತದಲ್ಲಿ ಮುನ್ನಡೆ ಸಾಧಿಸಿದ್ದ ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಅವರ ಅಳಿಯ ರಿಷಿ ಸುನಾಕ್, ಕನ್ಸರ್ವೇಟಿವ್ ಪಕ್ಷದ ಸದಸ್ಯರು ಮತದಾನ ಮಾಡಿದ ವೇಳೆ ಹಿನ್ನಡೆ ಹೊಂದಿದ್ದಾರೆ ಎಂದು ಹೇಳಲಾಗುತ್ತಿದೆ.
ಚುನಾವಣೆಯಲ್ಲಿ ಲಿಜ್ ಟ್ರಸ್ 82 ಸಾವಿರಕ್ಕೂ ಹೆಚ್ಚು ಮತಗಳನ್ನು ಪಡೆದಿದ್ದರೆ, ರಿಷಿ ಸುನಕ್ 62 ಸಾವಿರಕ್ಕೂ ಹೆಚ್ಚು ಮತಗಳನ್ನು ಪಡೆದಿದ್ದಾರೆ. ಈ ಮೂಲಕ ಲಿಜ್ ಟ್ರಸ್ ಬ್ರಿಟನ್ ನೂತನ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy