ಚಿಕ್ಕಬಳಾಪುರ: ಸಂಸದ ಡಾ.ಕೆ.ಸುಧಾಕರ್ ಅವರನ್ನು ಕೇಂದ್ರ ಹಣಕಾಸು ಸಂಸದೀಯ ಸ್ಥಾಯಿ ಸಮಿತಿಯ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.
ಡಾ.ಕೆ.ಸುಧಾಕರ್ ಅವರು ಮೊದಲ ಬಾರಿಗೆ ಸಂಸದರಾಗಿ ಕಾರ್ಯನಿರ್ವಹಿಸುತ್ತಿದ್ದು, ಈ ಅವಧಿಯಲ್ಲೇ ಅವರನ್ನು ಸ್ಥಾಯಿ ಸಮಿತಿಗೆ ನೇಮಿಸಿ ಮಹತ್ವದ ಹೊಣೆ ವಹಿಸಲಾಗಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಡಾ.ಸುಧಾಕರ್, ಸಂಸತ್ತಿನ ಹಣಕಾಸು ಸ್ಥಾಯಿ ಸಮಿತಿಯ ಸದಸ್ಯನಾಗಿ ಆಯ್ಕೆಯಾಗಿರುವುದು ಅತ್ಯಂತ ಹೆಮ್ಮೆ ಮತ್ತು ಸಂತಸದ ವಿಷಯ. ಈ ಅವಕಾಶ ನೀಡಿದ ಪ್ರಧಾನಿ ನರೇಂದ್ರ ಮೋದಿ, ಲೋಕಸಭಾಧ್ಯಕ್ಷರಾದ ಓಂ ಬಿರ್ಲಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಪಕ್ಷದ ಹಿರಿಯ ನಾಯಕರಾದ ಅಮಿತ್ ಶಾ ಹಾಗೂ ಬಿ.ಎಲ್.ಸಂತೋಷ್ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಅವರು ಹೇಳಿದ್ದಾರೆ.
2025ರ ವೇಳೆಗೆ ಭಾರತವನ್ನು 5 ಟ್ರಿಲಿಯನ್ ಡಾಲರ್ ಆರ್ಥಿಕತೆಯನ್ನಾಗಿಸುವ ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಕಾಂಕ್ಷೆಯ ಗುರಿಯನ್ನು ಸಾಧಿಸುವ ನಿಟ್ಟಿನಲ್ಲಿ, ಸಂಸತ್ತಿನ ಹಣಕಾಸು ಸ್ಥಾಯಿ ಸಮಿತಿಯ ಸದಸ್ಯನಾಗಿ ನನ್ನದೇ ಆದ ಅಳಿಲು ಸೇವೆ ಸಲ್ಲಿಸಲು ಉತ್ಸುಕನಾಗಿದ್ದೇನೆೞೞ ಎಂದು ಅವರು ಸಂತಸ ವ್ಯಕ್ತಪಡಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296