ಬೆಂಗಳೂರು: ಸ್ಯಾಂಡಲ್ವುಡ್ ನಟ ಮತ್ತು ನಿರ್ದೇಶಕ ದುನಿಯಾ ವಿಜಯ್ ಮಾಡಿದ ಮಾನವೀಯ ಕಾರ್ಯ ಇದೀಗ ಅವರಿಗೆ ಸಂಕಷ್ಟವನ್ನುಂಟು ಮಾಡಿದೆ.
ಜೈಲಿನಲ್ಲಿದ್ದ 10 ಮಂದಿ ಕೈದಿಗಳ ಮೇಲೆ ಕರುಣೆ ತೋರಿ ವಿಜಯ್ ಬಿಡುಗಡೆ ಮಾಡಿಸಿದ್ದರು. ಈ ಪೈಕಿ ಸುರೇಶ್ ಎಂಬಾತ ನವೆಂಬರ್ 11ರಂದು ಬಾಗಲೂರಿನಲ್ಲಿ ಇಬ್ಬರ ಸಾವಿಗೆ ಕಾರಣವಾಗಿದ್ದಾನೆ. ಜೋಡಿ ಹತ್ಯೆ ಮಾಡಿದ್ದರಿಂದ ಆತನನ್ನು ಪೊಲೀಸರು ಬಂಧಿಸಿದ್ದರು.
ಆರೋಪಿ ಬಗ್ಗೆ ಮಾಹಿತಿ ಕಲೆ ಹಾಕಿದ ಪೊಲೀಸರಿಗೆ ನಟ, ನಿರ್ದೇಶಕ ದುನಿಯಾ ವಿಜಯ್ ಅವರೇ ಕೆಲವು ತಿಂಗಳ ಹಿಂದೆ ಆರೋಪಿಗೆ ಸುರೇಶ್ ಜಾಮೀನಿಗೆ ಶೂರಿಟಿ ಕೊಟ್ಟಿದ್ದರು ಎಂಬುದು ಗೊತ್ತಾಗಿದೆ.
ಪ್ರಕರಣ ತನಿಖೆ ಮುಂದುವರಿದ ಭಾಗವಾಗ ಜೈಲಿನಿಂದ ಬಿಡುಗಡೆಯಾಗಲು ಸಹಕರಿಸಿದ್ದ ಕಾರಣದಿಂದ ದುನಿಯಾ ವಿಜಯ್ ಅವರನ್ನು ವಿಚಾರಣೆಗೆ ಕರೆಯಲು ಮುಂದಾಗಿದ್ದಾರೆ. ಯಾವ ಕ್ಷಣದಲ್ಲಾದರೂ ನೋಟಿಸ್ ಜಾರಿ ಮಾಡಲಿದ್ದಾರೆ ಎನ್ನಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q