ತುಮಕೂರು: ಸುಗಮ್ಯ ಭಾರತ ಯಾತ್ರಾ ಸಮೀಕ್ಷೆಗೆ ಸಂಬಂಧಿಸಿದಂತೆ ಸರ್ಕಾರಿ ಕಚೇರಿ, ನಗರ ಸ್ಥಳಿಯ ಸಂಸ್ಥೆಗಳು ಹಾಗೂ ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ವಿಶೇಷ ಚೇತನರಿಗೆ ಅಡೆ–ತಡೆ ರಹಿತ ಸೌಲಭ್ಯಗಳ ಆಡಿಟ್ ಮಾಡುವ ಸಲುವಾಗಿ ಅಭಿವೃದ್ಧಿಪಡಿಸಲಾಗಿರುವ ಮೊಬೈಲ್ ಆಪ್ ಅನ್ನು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಗುರುವಾರ ಸಂಜೆ ಬಿಡುಗಡೆ ಮಾಡಿದರು.
ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಿಕ ಸಭಾಂಗಣದಲ್ಲಿ ಮೊಬೈಲ್ ಆಪ್ ಅನ್ನು ಬಿಡುಗಡೆ ಮಾಡಿ ಮಾತನಾಡಿದ ಅವರು, ಸರ್ಕಾರಿ ಕಚೇರಿ ಸೇರಿದಂತೆ ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ವಿಶೇಷ ಚೇತನರಿಗೆ ಕಡ್ಡಾಯವಾಗಿ ಅಡೆ-ತಡೆ ರಹಿತ ವಾತಾವರಣ ನಿರ್ಮಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಸರ್ಕಾರಿ ಕಚೇರಿ ಕಟ್ಟಡಗಳ ಹಾಗೂ ಸಾರ್ವಜನಿಕ ಸ್ಥಳಗಳ ಆಡಿಟಿಂಗ್ ಮಾಡಲು ತರಬೇತಿ ಪಡೆದಿರುವ ವಿ.ಆರ್.ಡಬ್ಲ್ಯೂ, ಅಧಿಕಾರಿಗಳು ಅಗತ್ಯ ಸಹಕಾರ ನೀಡುವ ಮೂಲಕ ಸುಗಮ್ಯ ಭಾರತ ಯಾತ್ರಾ ಸಮೀಕ್ಷಾ ಕಾರ್ಯಕ್ರಮ ಯಶಸ್ವಿಯಾಗುವಂತೆ ಶುಭ ಕೋರಿದರು.
ಈ ಸಂದರ್ಭದಲ್ಲಿ ವಿಕಲಚೇತನ ಕಲ್ಯಾಣಾಧಿಕಾರಿ ಬಿ.ಎಸ್.ಚಿದಾನಂದಮೂರ್ತಿ ಸೇರಿದಂತೆ ಇಲಾಖಾ ಸಿಬ್ಬಂದಿಗಳು ಹಾಜರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW