ಹುಮನಾಬಾದ್: ಕಬ್ಬಿನ ದರ ನಿಗದಿಪಡಿಸಬೇಕು ಎಂದು ಆಗ್ರಹಿಸಿ ಹುಮನಾಬಾದ್ ನಗರದಲ್ಲಿ ರೈತರಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.
ನಗರದ ಪ್ರವಾಸಿ ಮಂದಿರದಿಂದ ಆರಂಭವಾದ ಪ್ರತಿಭಟನೆಯು ಅಂಬೇಡ್ಕರ್ ವೃತ್ತ, ಹಳೆ ತಹಶೀಲ್ದಾರ್ ಕಚೇರಿ ಹಾಗೂ ಶಿವಾಜಿ ವೃತ್ತದ ಮೂಲಕ ರಾಷ್ಟ್ರೀಯ ಹೆದ್ದಾರಿ ಕಡೆಗೆ ಸಾಗಿತ್ತು. ಟ್ರ್ಯಾಕ್ಟರ್ ಗಳಲ್ಲಿ ಹಸಿರು ಶಾಲು ಬೀಸುತ್ತಾ ತಂಡೋಪತಂಡವಾಗಿ ರೈತರು ಆಗಮಿಸಿದರು. ಎತ್ತಿನ ಬಂಡಿ, ಟ್ರ್ಯಾಕ್ಟರ್ ಗಳಿಗೆ ಕಬ್ಬು ಕಟ್ಟಿ ವಿನೂತನವಾಗಿ ಹೋರಾಟ ನಡೆಸಿದರು.
ಪ್ರತಿಭಟನೆ ಮೆರವಣಿಗೆಯು ರಾಷ್ಟ್ರೀಯ ಹೆದ್ದಾರಿ ಕಡೆಗೆ ಸಾಗುತ್ತಿರುವಾಗ ಮಾರ್ಗಮಧ್ಯದಲ್ಲಿ ಪ್ರತಿಭಟನಾ ನಿರತ ರೈತರನ್ನು ಪೊಲೀಸರು ತಡೆದರು.
ರೈತರ ಪ್ರತಿಭಟನೆಗೆ ದಲಿತ ಸಂಘಟನೆ, ಕಾರ್ಮಿಕ ಸಂಘಟನೆ ಹಾಗೂ ವಕೀಲ ಸಂಘಟನೆಯವರು ಸೇರಿ ಹಲವಾರು ಸಂಘಟನೆಗಳು ಬೆಂಬಲ ಸೂಚಿಸಿದವು. ಪ್ರತಿಭಟನೆಯಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಲಾಯಿತು
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


