nammatumakuru

    Subscribe to Updates

    Get the latest creative news from FooBar about art, design and business.

    What's Hot

    ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ದಾಖಲೆ ಮಟ್ಟದಲ್ಲಿ ಏರಿಕೆ

    April 10, 2026

    ಇಂದು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ: ವಿದ್ಯಾರ್ಥಿಗಳು ಗಮನಿಸಬೇಕಾದ ಅಂಶಗಳು

    April 9, 2026

    ತುಮಕೂರು: ಹಣದ ವಿಚಾರಕ್ಕೆ ತಂದೆಯನ್ನೇ ಕೊಂದ ಮಗನಿಗೆ ಜೀವಾವಧಿ ಶಿಕ್ಷೆ

    April 9, 2026
    Facebook Twitter Instagram
    ಟ್ರೆಂಡಿಂಗ್
    • ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ದಾಖಲೆ ಮಟ್ಟದಲ್ಲಿ ಏರಿಕೆ
    • ಇಂದು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ: ವಿದ್ಯಾರ್ಥಿಗಳು ಗಮನಿಸಬೇಕಾದ ಅಂಶಗಳು
    • ತುಮಕೂರು: ಹಣದ ವಿಚಾರಕ್ಕೆ ತಂದೆಯನ್ನೇ ಕೊಂದ ಮಗನಿಗೆ ಜೀವಾವಧಿ ಶಿಕ್ಷೆ
    • ಶಿರಾದ ಹೊನ್ನೇನಹಳ್ಳಿಯಲ್ಲಿ ಕುಡಿಯುವ ನೀರಿಗಾಗಿ ಗ್ರಾಮಸ್ಥರ ಪ್ರತಿಭಟನೆ; ಕೊಳವೆಬಾವಿ ಕೊರೆಯುವ ವಾಹನ ತಡೆದು ಆಕ್ರೋಶ
    • ಪಾವಗಡ: ರಾಮಕೃಷ್ಣ ಸೇವಾಶ್ರಮದಿಂದ ಮೇವು ವಿತರಣೆ
    • ಕುಣಿಗಲ್: ದಲಿತ ಮುಖಂಡರುಗಳೊಂದಿಗೆ ಕುಂದುಕೊರತೆ ಸಭೆ
    • ಶಿರಾದ ಸಪ್ತಗಿರಿ ಬಡಾವಣೆಯಲ್ಲಿ ಶಿಥಿಲಗೊಂಡ ವಿದ್ಯುತ್ ಕಂಬ: ಕೂಡಲೇ ಬದಲಿಸಲು ಸಾರ್ವಜನಿಕರ ಒತ್ತಾಯ
    • ತಿಪಟೂರಿನ ಎಚ್.ಬೈರಾಪುರದಲ್ಲಿ ಕರಿಯಮ್ಮ, ಪ್ಲೇಗಿನಮ್ಮ ದೇವಿ ಜಾತ್ರೆ: ವಿಜೃಂಭಣೆಯ ರಥೋತ್ಸವಕ್ಕೆ ತೆರೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ: ಎಲ್ಲ ಸಮುದಾಯಗಳನ್ನು ಒಗ್ಗೂಡಿಸಿಕೊಂಡು ಕಾರ್ಯಕ್ರಮ ಆಯೋಜಿಸಲು ಸಲಹೆ
    ತುಮಕೂರು April 7, 2025

    ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ: ಎಲ್ಲ ಸಮುದಾಯಗಳನ್ನು ಒಗ್ಗೂಡಿಸಿಕೊಂಡು ಕಾರ್ಯಕ್ರಮ ಆಯೋಜಿಸಲು ಸಲಹೆ

    By adminApril 7, 2025No Comments2 Mins Read
    ambedkar jayanti

    ತುಮಕೂರು: ನಗರದಲ್ಲಿ ಏಪ್ರಿಲ್ 14ರಂದು ನಡೆಯಲಿರುವ ಜಿಲ್ಲಾ ಮಟ್ಟದ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಕಾರ್ಯಕ್ರಮವನ್ನು ಎಲ್ಲಾ ಸಮುದಾಯಗಳನ್ನು ಒಗ್ಗೂಡಿಸಿಕೊಂಡು ಆಯೋಜಿಸಬೇಕು ಎಂದು ವಿವಿಧ ದಲಿತ ಮುಖಂಡರು ಸಲಹೆ ನೀಡಿದರು.

    ಜಿಲ್ಲಾಧಿಕಾರಿ ಕಚೇರಿ ನ್ಯಾಯಿಕ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಈ ಸಲಹೆ ನೀಡಲಾಯಿತು. ದಲಿತ ಮುಖಂಡರು ಮಾತನಾಡಿ, ಈ ಬಾರಿ ಅಂಬೇಡ್ಕರ್ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಬೇಕು. ಕಾರ್ಯಕ್ರಮ ಯಶಸ್ವಿಗೆ ಅಧಿಕಾರಿ ಹಾಗೂ ಮುಖಂಡರನ್ನೊಳಗೊಂಡ ವಿವಿಧ ಸಮಿತಿಗಳನ್ನು ರಚಿಸಬೇಕು. ನಗರದಾದ್ಯಂತ ಬಂಟಿಂಗ್ಸ್ ಗಳನ್ನು ಅಳವಡಿಸಬೇಕು. ವೇದಿಕೆಯಲ್ಲಿ ಅಂಬೇಡ್ಕರ್ ಹಾಗೂ ಬಾಬು ಜಗಜೀವನರಾಂ ಜಯಂತಿಯನ್ನು ಆಚರಿಸುವುದರಿಂದ ವಿವಿಧ ಕ್ಷೇತ್ರದ ಸಾಧಕರಿಗೆ ಅಂಬೇಡ್ಕರ್ ಹಾಗೂ ಬಾಬು ಜಗಜೀವನರಾಂ ಅವರ ಹೆಸರಿನಲ್ಲಿ ತಲಾ 25 ಪ್ರಶಸ್ತಿಗಳನ್ನು ನೀಡಿ ಗೌರವಿಸಬೇಕು. ಉನ್ನತ ವ್ಯಾಸಂಗ ಮಾಡುತ್ತಿರುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ನೀಡಬೇಕು. ಕಾರ್ಯಕ್ರಮದಲ್ಲಿ ಎಲ್ಲಾ ಸಮುದಾಯಗಳು, ಸರ್ಕಾರಿ ಅಧಿಕಾರಿ/ಸಿಬ್ಬಂದಿ, ಸ್ತ್ರೀಶಕ್ತಿ ಸಂಘದ ಸದಸ್ಯರು, ಶಾಲಾ ಮಕ್ಕಳು, ರೈತರು ಭಾಗವಹಿಸುವಂತೆ ಕ್ರಮ ಕೈಗೊಳ್ಳಬೇಕು.


    Provided by
    Provided by

    ಜಯಂತಿ ದಿನದಂದು ವಿದ್ಯಾರ್ಥಿಗಳಿಗೆ ಮಹನೀಯರ ವಿಚಾರಧಾರೆಗಳನ್ನು ತಿಳಿಸುವ ಸಲುವಾಗಿ ಪರಿಣಿತರಿಂದ ಉಪನ್ಯಾಸ ಏರ್ಪಡಿಸಬೇಕು. ವಿವಿಧ ಇಲಾಖೆಗಳ ಸೌಲಭ್ಯಗಳು ವಿತರಣೆಯಾಗಬೇಕು. ಕಾರ್ಯಕ್ರಮದಲ್ಲಿ ಪಾಲ್ಗೊಂಡವರಿಗೆ ಮಹನೀಯರ ಜೀವನ ಸಾಧನೆ ಕುರಿತ ಪುಸ್ತಕಗಳನ್ನು ವಿತರಿಸಬೇಕು ಎಂದು ಸಭೆಗೆ ವಿವಿಧ ಸಲಹೆಗಳನ್ನು ನೀಡಿದರು.
    ನಂತರ ಮಾತನಾಡಿದ ಜಿಲ್ಲಾಧಿಕಾರಿ, ಕಾರ್ಯಕ್ರಮದ ಮಾರ್ಗನಕ್ಷೆ, ರೂಪುರೇಷೆಗಳ ಬಗ್ಗೆ ಮಾಹಿತಿ ನೀಡುತ್ತಾ, ಏಪ್ರಿಲ್ 14ರ ಡಾ.ಬಿ.ಆರ್.ಅಂಬೇಡ್ಕರ್ ಅವರ 134ನೇ ದಿನಾಚರಣೆ ಸಂದರ್ಭದಲ್ಲಿ ಅವರ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಲಾಗುವುದು. ಸುಮಾರು 30–40 ವರ್ಷಗಳ ಅಂಬೇಡ್ಕರ್ ಪ್ರತಿಮೆ ಪ್ರತಿಷ್ಠಾಪನೆ ಬೇಡಿಕೆ ಏಪ್ರಿಲ್ 14ರಂದು ಈಡೇರುತ್ತಿದೆ. ಪ್ರತಿಮೆಯು 1000 ಕೆ.ಜಿ. ತೂಕ, 12 ಅಡಿ ಎತ್ತರ ಹೊಂದಿದ್ದು, ಪ್ರತಿಮೆಯನ್ನು ಮಹಾನಗರಪಾಲಿಕೆ ಆವರಣದಲ್ಲಿ ಅನಾವರಣಗೊಳಿಸಲಾಗುವುದು. ಪ್ರತಿಮೆ ಅನಾವರಣಗೊಳಿಸಲು ಪ್ರಮುಖ ಕಾರಣಕರ್ತರಾದ ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ ಅವರಿಗೆ ಅಭಿನಂದನೆ ಸಲ್ಲಿಸಿದರು.

    ಅಂಬೇಡ್ಕರ್ ಜಯಂತಿ ಪ್ರಯುಕ್ತ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಿಂದ ಪಾಲಿಕೆ ಆವರಣದವರೆಗೂ ಮೆರವಣಿಗೆ ಏರ್ಪಡಿಸಲಾಗಿದೆ. ಮೆರವಣಿಗೆಯಲ್ಲಿ ಸ್ಥಳೀಯ ಜಾನಪದ ಕಲಾತಂಡ, ವಿದ್ಯಾರ್ಥಿಗಳು, ವಿವಿಧ ಸಂಘ ಸಂಸ್ಥೆಗಳು, ಅಧಿಕಾರಿಗಳು ಭಾಗವಹಿಸಲಿದ್ದಾರೆ. ಮೆರವಣಿಗೆಗೆ ಮಧ್ಯಾಹ್ನ 12:30 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಚಾಲನೆ ನೀಡಲಾಗುವುದು. ಮೆರವಣಿಗೆಯಲ್ಲಿ ಸ್ಥಬ್ಧಚಿತ್ರಗಳು ಭಾಗವಹಿಸಲಿದ್ದು, ಸ್ಥಬ್ಧಚಿತ್ರಗಳ ಮೇಲೆ ಅಂಬೇಡ್ಕರ್ ಹಾಗೂ ಬಾಬು ಜಗಜೀವನರಾಂ ಅವರ ವಿಚಾರಧಾರೆಗಳ ಸಾಲುಗಳ ಫಲಕವನ್ನು ಅಳವಡಿಸಲಾಗುವುದು. ಸಂಜೆ 4.30 ಗಂಟೆಗೆ ಅಂಬೇಡ್ಕರ್ ಕಂಚಿನ ಪ್ರತಿಮೆ ಅನಾವರಣ, ನಂತರ ವೇದಿಕೆ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.

    ದಿನಾಚರಣೆ ಅಂಗವಾಗಿ ದೇಶದ ಮೂಲೆ-ಮೂಲೆಯಿಂದ ಸಂಗ್ರಹಿಸಲಾದ ಅಂಬೇಡ್ಕರ್ ಅವರ ಸುಮಾರು 150 ಛಾಯಾಚಿತ್ರಗಳ ಪ್ರದರ್ಶನಕ್ಕೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಸಮುದಾಯದವರ ನಿರೀಕ್ಷೆಗಿಂತ ಹೆಚ್ಚಿನ ರೀತಿಯಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗುವುದು ಎಂದು ತಿಳಿಸಿದರು.

    ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಮಾತನಾಡಿ, ಕಾರ್ಯಕ್ರಮಕ್ಕೆ ಬಂದು ಹೋಗಲು ಅನುವಾಗುವಂತೆ ಜಿಲ್ಲೆಯ 330 ಗ್ರಾಮ ಪಂಚಾಯತಿಗಳಿಂದ ಬಸ್ ವ್ಯವಸ್ಥೆ ಮಾಡಲಾಗಿದೆ. ಮೆರವಣಿಗೆಗೆ ದಸರಾ ಮಾದರಿಯಲ್ಲಿ ಆನೆಯನ್ನು ಕರೆತರಲಾಗುವುದು. ವೇದಿಕೆ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಸಾಧನೆಗಳ ಕುರಿತ ಉಪನ್ಯಾಸ, ನೃತ್ಯರೂಪಕ, ಕ್ರಾಂತಿ ಗೀತೆ, ಲೇಸರ್ ಶೋ, ಬಾಣ-ಬಿರುಸು ಪ್ರದರ್ಶನ, ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದು ತಿಳಿಸಿದರು.

    ಕಾರ್ಯಕ್ರಮವನ್ನು ಇತರರಿಗೆ ಮಾದರಿಯಾಗುವಂತೆ ಹಾಗೂ ರಾಜ್ಯದ ಇತಿಹಾಸದಲ್ಲಿ ನೆನಪಿನಲ್ಲಿ ಉಳಿಯುವಂತೆ ರೂಪಿಸಲಾಗುವುದು ಎಂದು ತಿಳಿಸಿದರು.

    ಈ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಕೃಷ್ಣಪ್ಪ, ದಲಿತ ಮುಖಂಡರು, ಮತ್ತಿತರ ಅಧಿಕಾರಿಗಳು, ಭಾಗವಹಿಸಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

     

    admin
    • Website

    Related Posts

    ತುಮಕೂರು: ಹಣದ ವಿಚಾರಕ್ಕೆ ತಂದೆಯನ್ನೇ ಕೊಂದ ಮಗನಿಗೆ ಜೀವಾವಧಿ ಶಿಕ್ಷೆ

    April 9, 2026

    ಕುಣಿಗಲ್: ದಲಿತ ಮುಖಂಡರುಗಳೊಂದಿಗೆ ಕುಂದುಕೊರತೆ ಸಭೆ

    April 9, 2026

    ತುಮಕೂರು ಜನತಾ ದರ್ಶನದಲ್ಲೇ ಅವ್ಯವಸ್ಥೆಯ ದರ್ಶನ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಚಿವ ಪರಮೇಶ್ವರ್ ಗರಂ, ದೂರುಗಳ ರಾಶಿ

    April 9, 2026

    Comments are closed.

    Our Picks

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ದಾಖಲೆ ಮಟ್ಟದಲ್ಲಿ ಏರಿಕೆ

    April 10, 2026

    ಬೆಂಗಳೂರು: ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿರುವ 2025–26ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, ಫಲಿತಾಂಶದಲ್ಲಿ…

    ಇಂದು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ: ವಿದ್ಯಾರ್ಥಿಗಳು ಗಮನಿಸಬೇಕಾದ ಅಂಶಗಳು

    April 9, 2026

    ತುಮಕೂರು: ಹಣದ ವಿಚಾರಕ್ಕೆ ತಂದೆಯನ್ನೇ ಕೊಂದ ಮಗನಿಗೆ ಜೀವಾವಧಿ ಶಿಕ್ಷೆ

    April 9, 2026

    ಶಿರಾದ ಹೊನ್ನೇನಹಳ್ಳಿಯಲ್ಲಿ ಕುಡಿಯುವ ನೀರಿಗಾಗಿ ಗ್ರಾಮಸ್ಥರ ಪ್ರತಿಭಟನೆ; ಕೊಳವೆಬಾವಿ ಕೊರೆಯುವ ವಾಹನ ತಡೆದು ಆಕ್ರೋಶ

    April 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.