ಬೀದರ್: ಬೀದರ್ ತಾಲೂಕಿನ ಅಣದೂರ್ ಗ್ರಾಮದಲ್ಲಿ ವ್ಯಕ್ತಿಯೊಬ್ಬ ಕುಡಿಯುವ ನೀರಿನ ಟ್ಯಾಂಕ್‍ಗೆ ಹಾರಿ ಆತ್ಮಹತ್ಯೆಗೆ ಶರಣಾ ಘಟನೆ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ದಾಸರ್ (27) ಎಂದು ಗುರುತಿಸಲಾಗಿದೆ.
ಪತ್ನಿಗೆ ಬೇರೊಬ್ಬನ ಜೊತೆ ಅನೈತಿಕ ಸಂಬಂಧ ಹೊದಿದ್ದು, ಆತನೊಂದಿಗೆ ಪರಾರಿಯಾಗಿದ್ದಕ್ಕೆ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಪೊಲೀಸರು ಶಂಕಿಸಿದ್ದಾರೆ.
ನಲ್ಲಿಯಲ್ಲಿ ಬರುತ್ತಿದ್ದ ನೀರು ವಾಸನೆ ಬರುತ್ತಿದ್ದ ಕಾರಣ, ಟ್ಯಾಂಕ್‍ನ್ನು ಜನ ಪರಿಶೀಲಿಸಿದಾಗ ದಾಸರ್ ನ ಮೃತದೇಹ ಪತ್ತೆಯಾಗಿದೆ. ಬಳಿಕ ಅಗ್ನಿಶಾಮಕ ದಳದ ಸಿಬ್ಬಂದಿ ಮೃತದೇಹ ಹೊರಗೆ ತೆಗೆದಿದ್ದಾರೆ. ಎರಡು ದಿನಗಳ ಹಿಂದೆಯೇ ಟ್ಯಾಂಕ್‍ಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದು ತಡವಾಗಿ ಬೆಳಕಿಗೆ ಬಂದಿದೆ. ಈ ಸಂಬಂಧ ಜನವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟ್ಯಾಂಕ್ ನಲ್ಲಿ ಮೃತದೇಹ ಇರುವುದನ್ನು ನೋಡಿ ಗ್ರಾಮಸ್ಥರು ಶಾಕ್ ಗೆ ಒಳಗಾಗಿದ್ದಾರೆ. ತಕ್ಷಣ ಸ್ಥಳಕ್ಕೆ ಆರೋಗ್ಯ ಇಲಾಖೆಯ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದೆ. ಅದೇ ರೀತಿ ಸಿಬ್ಬಂದಿ ಟ್ಯಾಂಕ್ ಶುದ್ಧೀಕರಣಕ್ಕೆ ಮುಂದಾಗಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


