ಗುಬ್ಬಿ: ತಾಲೂಕಿನ ಹಿಂಡಿಸ್ಗೆರೆ ಮಹಿಳಾ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಸುಜಾತ, ಉಪಾಧ್ಯಕ್ಷರಾಗಿ ಗೀತಾ ಅವಿರೋಧವಾಗಿ ಆಯ್ಕೆಯಾದರು.
ಸುಮಾರು ಎಂಟು ವರ್ಷಗಳ ಬಳಿಕ ಹಿಂಡಿಸ್ ಗೆರೆ ಹಾಲು ಉತ್ಪಾದಕರ ಸಹಕಾರ ಸಂಘದ ಚುನಾವಣೆ ನಡೆದಿದ್ದು, ಅಧ್ಯಕ್ಷ ಸ್ಥಾನಕ್ಕೆ ಸುಜಾತ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಗೀತಾ ಮಾತ್ರ ಅಭ್ಯರ್ಥಿಯಾಗಿ ನಾಮಪತ್ರವನ್ನು ಸಲ್ಲಿಸಿದ್ದರಿಂದ ಚುನಾವಣೆ ಅಧಿಕಾರಿಗಳು ಅವಿರೋಧವಾಗಿ ಆಯ್ಕೆ ಮಾಡಿದರು. ಚುನಾವಣೆ ಅಧಿಕಾರಿಯಾಗಿ ಲಿಯಾಖಾತ್ ಅಲಿಖಾನ್ ಚುನಾವಣೆ ಪ್ರಕ್ರಿಯೆಗಳನ್ನ ನಡೆಸಿಕೊಟ್ಟರು.
ನಂತರ ನೂತನ ಅಧ್ಯಕ್ಷೆ ಸುಜಾತ ಸುದ್ದಿಗಾರರ ಜೊತೆ ಮಾತನಾಡಿ, ನಮ್ಮ ಎಲ್ಲ ನಿರ್ದೇಶಕ ಸಹಕಾರ ಪಡೆದು ಹಿಂಡಿಸ್ ಗೆರೆ ಮಹಿಳಾ ಹಾಲು ಉತ್ಪಾದಕರ ಸಹಕಾರ ಸಂಘದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ. ಸರ್ಕಾರದಿಂದ ಬರುವ ಸೌಲಭ್ಯಗಳನ್ನು ಹಾಲು ಉತ್ಪಾದಕರಿಗೆ ಹಾಗೂ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸಲು ಪ್ರಯತ್ನ ಮಾಡುತ್ತೇನೆ. ಗ್ರಾಮೀಣ ಭಾಗದ ರೈತರು ಹೈನುಗಾರಿಕೆಗೆ ಹೆಚ್ಚು ಆದ್ಯತೆಯನ್ನು ಕೊಟ್ಟು ಪ್ರತಿ ಮನೆಯಲ್ಲೂ ಹಸುಗಳನ್ನು ಕಟ್ಟಿಕೊಂಡು ಡೈರಿಗಳಿಗೆ ಹಾಲು ಹಾಕುವುದರ ಮೂಲಕ ಸ್ವಾವಲಂಬಿ ಬದುಕನ್ನ ಕಟ್ಟಿಕೊಂಡು ಆರ್ಥಿಕವಾಗಿ ಮುಂದೆ ಬರಬೇಕು. ರೈತರು ಗುಣಮಟ್ಟದ ಹಾಲನ್ನು ಹಾಕುವುದರ ಮೂಲಕ ಪ್ರೋತ್ಸಾಹ ಧನವನ್ನು ಪಡೆದು ಹೆಚ್ಚು ಹೆಚ್ಚು ಹಾಲನ್ನು ಹಾಕುವುರ ಮೂಲಕ ಹಿಂಡಿಸ್ ಗೆರೆ ಹಾಲು ಉತ್ಪಾದಕರ ಸಂಘ ತಾಲೂಕಿನಲ್ಲಿ ಮಾದರಿಯಾಗಬೇಕು ಎಂದರು.
ಇದೇ ಸಂದರ್ಭದಲ್ಲಿ ಉಪಾಧ್ಯಕ್ಷೆ ಗೀತಾ ನಿರ್ದೇಶಕರಾದ ಸೌಭಾಗ್ಯ, ಶಭೀನಾ ಬಾನು, ಸಿದ್ದಗಂಗಮ್ಮ, ಜಯಲಕ್ಷ್ಮಮ್ಮ, ಚಂದ್ರಮ್ಮ, ರೇಖಾ, ಜಗದಾಂಬ, ಶಿಲ್ಪ , ಪದ್ಮ , ಅನಸೂಯಮ್ಮ, ರತ್ನಮ್ಮ, ಸಂಘದ ಕಾರ್ಯದರ್ಶಿ ಪ್ರೇಮಾ ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.
ವರದಿ: ಚೇತನ್ ಗೌಡ, ಗುಬ್ಬಿ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


