ನವದೆಹಲಿ: ಈ ಬಾರಿ ಮಂಡ್ಯದಲ್ಲಿ ಬಿಜೆಪಿಯಿಂದ ಕಣಕ್ಕಿಳಿಯುಲು ಸುಮಲತಾ ಅಂಬರೀಶ್ ಕನಸು ಕಾಣುತ್ತಿದ್ದು, ಟಿಕೆಟ್ ಗಾಗಿ ಕಸರತ್ತು ನಡೆಸಿದ್ದಾರೆ. ಗುರುವಾರ ಅಷ್ಟೇ ಬಿಜೆಪಿ ವರಿಷ್ಠರಾದ ಜೆಪಿ ನಡ್ಡಾ ಹಾಗೂ ಬಿಎಲ್ ಸಂತೋಷ್ ಅವರನ್ನು ಭೇಟಿ ಮಾಡಿ ಟಿಕೆಟ್ಗಾಗಿ ಮನವಿ ಮಾಡಿದ್ದರು.
ಈಗ ಮತ್ತೊಂದೆಜ್ಜೆ ಮುಂದೆ ಹೋಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಮುಂದಿನ ದಿನಗಳಲ್ಲಿ ಒಟ್ಟಾಗಿ ಕೆಲಸ ಮಾಡುವುದನ್ನು ಮುಂದುವರೆಸೋಣ ಎಂದು ಹೇಳಿದ್ದಾರಂತೆ. ಈ ಹಿನ್ನೆಲೆಯಲ್ಲಿ ಸುಮಲತಾ ಅಂಬರೀಶ್ ಸಂತಸಗೊಂಡಿದ್ದು, ಈ ಬಾರಿ ಮಂಡ್ಯ ಲೋಕಸಭಾ ಬಿಜೆಪಿ ಟಿಕೆಟ್ ಸಿಗುವ ನಿರೀಕ್ಷೆಯಲ್ಲಿದ್ದಾರೆ.
ಮುಂದಿನ ದಿನಗಳಲ್ಲಿ ಒಟ್ಟಾಗಿ ಕೆಲಸ ಮಾಡುವುದನ್ನು ಮುಂದುವರೆಸೋಣ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಸುಮಲತಾ ಅಂಬರೀಶ್ ಗೆ ಹೇಳಿದ್ದಾರೆ. ಅಂದರೆ ಪರೋಕ್ಷವಾಗಿ ಮತ್ತೊಮ್ಮೆ ಗೆದ್ದು ಲೋಕಸಭೆಗೆ ಬನ್ನಿ ಎನ್ನುವ ಅರ್ಥದಲ್ಲಿ ಹೇಳಿದ್ದಾರೆ. ಹೀಗಾಗಿ ಸುಮಲತಾ ಅವರು ಈ ಬಾರಿ ಬಿಜೆಪಿ ಟಿಕೆಟ್ ಸಿಗುವ ವಿಶ್ವಾಸದಲ್ಲಿದ್ದಾರೆ.


