ಪಂಚರತ್ನಯಾತ್ರೆ ಮತ್ತು ನಮ್ಮ ಪಕ್ಷದ ಬೆಳವಣಿಗೆಯಿಂದ ಬಿಜೆಪಿ ಮತ್ತು ಕಾಂಗ್ರೆಸ್ ಗೆ ಆತಂಕ ಶುರುವಾಗಿದೆ ಎಂದು ಹೆಚ್.ಡಿ ಕುಮಾರಸ್ವಾಮಿ ನುಡಿದರು.
ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಕರಗುಂದ ಗ್ರಾಮದಲ್ಲಿ ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಜೆಡಿಎಸ್ ಅನ್ನು ಕಾಂಗ್ರೆಸ್ ನ ಬಿ ಟೀಂ ಎನ್ನುತ್ತಾರೆ. ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಪದೇಪದೇ ಜೆಡಿಎಸ್ ಅನ್ನು ಬಿಜೆಪಿಯ ಬಿ ಟೀಂ ಎನ್ನುತ್ತಾರೆ.
ಆದರೆ, ನಾವು ನಾಡಿನ ಜನತೆಯ ಬಿ ಟೀಂ ಎಂದು ಹೇಳಿದ್ದೇವೆ. ಬಿಜೆಪಿ ಹಾಗೂ ಕಾಂಗ್ರೆಸ್ ಗೆ ನಮ್ಮ ಪಕ್ಷದ ಬೆಳವಣಿಗೆಯಿಂದ ಆತಂಕವಾಗಿದೆ. ನಾವು ಪಂಚರತ್ನ ಯಾತ್ರೆ ಮೂಲಕ ಜನರನ್ನು ತಲುಪುತ್ತಿದ್ದೇವೆ. ಇದರಿಂದ ಎರಡು ರಾಷ್ಟ್ರೀಯ ಪಕ್ಷಗಳು ಕಂಗಾಲಾಗಿವೆ ಎಂದು ಟೀಕಿಸಿದರು.
ನಮ್ಮ ಭದ್ರಕೋಟೆಯನ್ನು ಛಿದ್ರ ಮಾಡುತ್ತೇವೆ ಅಂತ ಹೊರಟಿದ್ದಾರೆ. ಆದರೆ, ಹೆಚ್ಡಿ ದೇವೇಗೌಡರು ಬೆಳಿಸಿರುವ ಲಕ್ಷಾಂತರ ಕಾರ್ಯಕರ್ತರು ಇದ್ದಾರಲ್ಲ, ಅವರು ನಮ್ಮ ಶಕ್ತಿ. ಅವರು ಇರುವ ವರೆಗೂ ಈ ಪಕ್ಷಕ್ಕೆ ಅವರು ಯಾರಿಂದಲೂ ಏನೂ ಮಾಡಲು ಸಾಧ್ಯವಿಲ್ಲ ಎಂದು ಕುಮಾರಸ್ವಾಮಿ ತಿಳಿಸಿದರು.
ಸಂಸದೆ ಸುಮಲತಾ ಅಂಬರೀಶ್ ಬಿಜೆಪಿ ಸೇರ್ಪಡೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಹೆಚ್.ಡಿ ಕುಮಾರಸ್ವಾಮಿ, ನನಗ ಬಹಳ ದಿನದ ಹಿಂದೆಯೇ ಗೊತ್ತಿತ್ತು ಎಂದು ಹೇಳಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


