ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಲ್ಲಿ ಸುಮಲತಾ ಅಂಬರೀಶ್ ಬೆಂಬಲ ವಿಚಾರ ಕುರಿತು ಪ್ರತಿಕ್ರಿಯಿಸಿದ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಸುಮಲತಾ ಅಂಬರೀಶ್ ಏನು ಶಾಶ್ವತ ಶತ್ರುನಾ..? ಅಗತ್ಯವಿದ್ದರೆ ಸಂಸದೆ ಸುಮಲತಾರನ್ನ ಭೇಟಿ ಮಾಡುತ್ತೇವೆ ಎಂದಿದ್ದಾರೆ.
ಮೈಸೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಸುಮಲತಾ ಅಂಬರೀಶ್ ನಮಗೆ ಶಾಶ್ವತ ಶತ್ರುವಲ್ಲ. ರಾಮಾಂಜನೇಯ ಯುದ್ದವೇ ಈ ಮಣ್ಣಿನಲ್ಲಿ ನಡೆದು ಹೋಗಿದೆ. ನಾವೆಲ್ಲಾ ಹುಲು ಮಾನವರು ಅದರ ಮುಂದೆ ಯಾವ ಲೆಕ್ಕ ಹೇಳಿ. ರಾಜಕೀಯದಲ್ಲಿ ಹೋರಾಟ ಜಗಳಿದ್ದೇ ಇರುತ್ತದೆ. ನಮಗೇನು ಸುಮಲತಾ ದೂರ ಅಲ್ಲ. ಅಂಬರೀಶ್ ಇದ್ದ ಕಾಲದಲ್ಲಿ ಪರಸ್ಪರ ಜೊತೆಗಿದ್ದವು. ಅಗತ್ಯವಿದ್ದರೆ ಸಂಸದೆ ಸುಮಲತಾರನ್ನ ಭೇಟಿ ಮಾಡುತ್ತೇವೆ ಎಂದರು.
ಡಿಎಂಕೆ ಮೇಕೆದಾಟು ಯೋಜನೆ ಮಾಡಲು ಬಿಡಲ್ಲ ಎಂದಿದ್ದಾರೆ. ನೀರಾವರಿ ಯೋಜನೆಗಳ ಬಗ್ಗೆ ಕಾಂಗ್ರೆಸ್ ನವರು ಮಾತನಾಡುತ್ತಾರೆ. ನೀರಾವರಿಗೆ ಹೆಚ್. ಡಿ ದೇವೇಗೌಡರು ಸಾಕಷ್ಟು ಕೊಡುಗೆ ನೀಡಿದ್ದಾರೆ. ದೇವೇಗೌಡರ ಬಗ್ಗೆ ಮಾತನಾಡುವ ನೈತಿಕತೆ ಕಾಂಗ್ರೆಸ್ ಗೆ ಇಲ್ಲ ಎಂದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


