ತುಮಕೂರು: ನಗರದ ಜಿಲ್ಲಾ ಬಾಲಭವನ ಸಮಿತಿ ವತಿಯಿಂದ 2025–26ನೇ ಸಾಲಿಗೆ ಸಂಬಂಧಿಸಿದಂತೆ 10 ರಿಂದ 16 ವರ್ಷದ ವಯೋಮಾನದ ಮಕ್ಕಳಿಗಾಗಿ ಮೇ 6 ರಿಂದ ಮೇ 20ರ ವರೆಗೆ 15 ದಿನಗಳ “ಬೇಸಿಗೆ ಶಿಬಿರ”ವನ್ನು ಆಯೋಜಿಸಲಾಗಿದೆ.
ಶಿಬಿರವು ಪ್ರತಿ ದಿನ ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ನಡೆಯಲಿದೆ. ಶಿಬಿರದಲ್ಲಿ ಕೇವಲ 60 ಮಕ್ಕಳಿಗೆ ಮಾತ್ರ ಅವಕಾಶವಿರುವುದರಿಂದ, ಆಸಕ್ತ ಪಾಲಕರು ತಮ್ಮ ಮಕ್ಕಳನ್ನು ಮೇ 03 ಸಂಜೆ 5:30 ಗಂಟೆಯೊಳಗೆ ಜಿಲ್ಲೆಯ ಬಾಲಭವನ ಕಚೇರಿ, ಎಂ.ಜಿ ರಸ್ತೆ, ಇಲ್ಲಿ ಕಛೇರಿ ವೇಳೆಯಲ್ಲಿ ನೊಂದಾಯಿಸಿಕೊಳ್ಳಬಹುದು. ಮೊದಲಿಗೆ ನೋಂದಾಯಿಸಿಕೊಂಡವರಿಗೆ ಆದ್ಯತೆ ನೀಡಲಾಗುತ್ತದೆ.
ಸರ್ಕಾರಿ ಶಾಲಾ ಮಕ್ಕಳು, ಗ್ರಾಮೀಣ/ಹೋಬಳಿ ಮಟ್ಟದ ಮತ್ತು ಸೌಲಭ್ಯ ವಂಚಿತ ಮಕ್ಕಳು, ಸರ್ಕಾರಿ ಸುಧಾರಣಾ ಸಂಸ್ಥೆಗಳ ಬಾಲಕ/ಬಾಲಕಿಯರ ಬಾಲ ಮಂದಿರದ ಮಕ್ಕಳು ಹಾಗೂ ವಿಕಲಚೇತನ ಮಕ್ಕಳಿಗೆ ಈ ಶಿಬಿರದಲ್ಲಿ ವಿಶೇಷ ಆದ್ಯತೆ ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಸಂಚಾರಿ ದೂರವಾಣಿ ಸಂಖ್ಯೆ 9901890079ನ್ನು ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಚೇತನ್ ಕುಮಾರ್ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW