ತುಮಕೂರು: ಜಿಲ್ಲೆಯಲ್ಲಿ ಬೇಸಿಗೆ ಮತ್ತು ಪೂರ್ವ ಮುಂಗಾರು ಹಂಗಾಮಿನಲ್ಲಿ ಕುಡಿಯುವ ನೀರು ಸರಬರಾಜು, ಮೇವು ಪೂರೈಕೆ ಮತ್ತು ಪ್ರಕೃತಿ ವಿಕೋಪ ಸೇರಿದಂತೆ ತುರ್ತು ಪರಿಸ್ಥಿತಿಗಳಲ್ಲಿ ಸಾರ್ವಜನಿಕ ರಕ್ಷಣೆಗಾಗಿ ಜಿಲ್ಲಾ ಮಟ್ಟದಲ್ಲಿ ಸಹಾಯವಾಣಿ ಸಂಖ್ಯೆಯನ್ನು ಸ್ಥಾಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ಶುಭ ಕಲ್ಯಾಣ್ ತಿಳಿಸಿದ್ದಾರೆ.
ಸದರಿ ಸಹಾಯವಾಣಿಯು ದಿನದ 24 ಗಂಟೆಯೂ ಕಾರ್ಯ ನಿರ್ವಹಿಸುತ್ತಿದ್ದು, ಸಹಾಯವಾಣಿ ಸಂಖ್ಯೆ 0816-2213400, 155304, 7304975519(ವಾಟ್ಸ್ಪ್ ಸಂಖ್ಯೆ 7304975519)ಕ್ಕೆ ಕರೆ ಮಾಡುವ ಮೂಲಕ ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಅವರು ಮನವಿ ಮಾಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4