ದೆಹಲಿಯಲ್ಲಿ ಮಾರ್ಚ್ 1 ರಿಂದ 4 ರವರೆಗೆ ನಡೆಯಲಿರುವ ಜಿ20 ಶೃಂಗಸಭೆಯ ಅಂಗವಾಗಿ ಸುಂದರೀಕರಣಕ್ಕಾಗಿ ಇರಿಸಲಾಗಿದ್ದ ಹೂವಿನ ಕುಂಡಗಳನ್ನು ಗಾಂಧಿನಗರ ಮೂಲದ ಮನಮೋಹನ್ ಕದ್ದ ಆರೋಪದ ಮೇಲೆ ಆತನನ್ನು ಬಂಧಿಸಲಾಗಿದೆ. ಸ್ಥಳದಿಂದ ಪರಾರಿಯಾಗಲು ಬಳಸಿದ್ದ ಐಷಾರಾಮಿ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ದೆಹಲಿ-ಗುರುಗ್ರಾಮ್ ಎಕ್ಸ್ ಪ್ರೆಸ್ ವೇನಲ್ಲಿರುವ ಆಂಬಿಯೆನ್ಸ್ ಮಾಲ್ ಎದುರು ಸೋಮವಾರ ಈ ಘಟನೆ ನಡೆದಿದೆ. ಐಷಾರಾಮಿ ಕಾರಿನಲ್ಲಿ ಇಬ್ಬರು ವ್ಯಕ್ತಿಗಳು ಹೂವಿನ ಕುಂಡಗಳನ್ನು ಕದಿಯುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಈ ಹಿಂದೆ ವೈರಲ್ ಆಗಿತ್ತು.
ವೈರಲ್ ಟ್ವೀಟ್ ಅನ್ನು ಗಮನಿಸಿದ ಜಿಲ್ಲಾಧಿಕಾರಿ ನಿಶಾಂತ್ ಕುಮಾರ್ ಯಾದವ್ ಅವರು ಈ ಬಗ್ಗೆ ತನಿಖೆ ನಡೆಸುವಂತೆ ಗುರುಗ್ರಾಮ್ ಪೊಲೀಸರಿಗೆ ಸೂಚಿಸಿದ್ದಾರೆ.
ಬಂಧಿತ ಗಾಂಧಿನಗರ ಮೂಲದ ಮನಮೋಹನ್ ನನ್ನು ವಿಚಾರಣೆ ನಡೆಸಲಾಗುತ್ತಿದೆ. ಪ್ರಕರಣದ ಇನ್ನೋರ್ವ ಆರೋಪಿಗಾಗಿ ಶೋಧ ಮುಂದುವರಿದಿದ್ದು, ಆರೋಪಿಗಳು ಕದ್ದ ಹೂಕುಂಡಗಳು ಹಾಗೂ ಅಕ್ರಮ ಸಾಗಾಟಕ್ಕೆ ಬಳಸಿದ್ದ ಕಾರನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


