ವಾಷಿಂಗ್ಟನ್: ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ 9 ತಿಂಗಳುಗಳಿಂದ ಸಿಲುಕಿರುವ ನಾಸಾ ಗಗನಯಾತ್ರಿಗಳಾದ ಸುನಿತಾ ವಿಲಿಯಮ್ಸ್ ಮತ್ತು ಬುಜ್ ವಿಲ್ಮೋರ್ ಅಮೆರಿಕದ ಸ್ಥಳೀಯ ಕಾಲಮಾನದ ಪ್ರಕಾರ ಮಂಗಳವಾರ ಸಂಜೆ 5.57ಕ್ಕೆ ಭೂಮಿಗೆ ತಲುಪಲಿದ್ದಾರೆ.
ಫ್ಲೋರಿಡಾದ ಕಡಲ ತೀರದಲ್ಲಿ ಅವರು ಲ್ಯಾಂಡ್ ಆಗುವ ನಿರೀಕ್ಷೆಯಿದೆ. ನಾಸಾ ಮತ್ತು ಸ್ಪೇಸ್ ಎಕ್ಸ್ ಜಂಟಿ ಪ್ರಯತ್ನದ ಮೂಲಕ ವಾಪಸ್ ಕರೆ ತರುವ ಕಾರ್ಯಾಚರಣೆ ಇದಾಗಿದೆ ಎಂದು ನಾಸಾ ತಿಳಿಸಿದೆ.
ಸುನಿತಾ ವಿಲಿಯಮ್ಸ್ ಮತ್ತು ಬುಜ್ ವಿಲ್ಮೋರ್ ಅವರನ್ನು ಭೂಮಿಗೆ ವಾಪಸ್ ಕರೆತರಲು ಸ್ಪೇಸ್ ಎಕ್ಸ್ ನಲ್ಲಿ ಫಾಲ್ಕನ್ 9 ರಾಕೆಟ್ ಅನ್ನು ಮಾ. 15ರಂದು ಉಡಾವಣೆ ಮಾಡಲಾಗಿತ್ತು.
ಮಾ.16ರಂದು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಸ್ಪೇಸ್ ಎಕ್ಸ್ ತಲುಪಿದ್ದು, ಸುನಿತಾ ವಿಲಿಯಮ್ಸ್ ಹಾಗೂ ಬುಜ್ ರನ್ನು ಭೂಮಿಗೆ ವಾಪಾಸ್ ಕರೆತರುವ ಸಿದ್ಧತೆಯನ್ನು ಮಾಡಿಕೊಳ್ಳಲಾಗುತ್ತಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4