ನಾಸಾ ಗಗನಯಾತ್ರಿಗಳಾದ ಬುಚ್ ವಿಲ್ಮೋರ್ ಮತ್ತು ಸುನೀತಾ ವಿಲಿಯಮ್ಸ್ ಮಂಗಳವಾರ ಭೂಮಿಗೆ ಮರಳಿದ್ದಾರೆ. ಕಳೆದ 9 ತಿಂಗಳ ನಂತರ ಭಾರತೀಯ ಕಾಲಮಾನ ಬುಧವಾರ ಬೆಳಗ್ಗೆ 3:27ಕ್ಕೆ ಬಾಹ್ಯಾಕಾಶದಿಂದ ಸುರಕ್ಷಿತವಾಗಿ ವಾಪಸ್ಸಾಗಿದ್ದಾರೆ.
ಒಂದು ವಾರದ ಮಟ್ಟಿಗೆ ಸುನಿತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಬಾಹ್ಯಾಕಾಶಕ್ಕೆ ಪ್ರಯಾಣಿಸಿದ್ದರು. ಆದ್ರೆ, ಅವರಿದ್ದ ಬೋಯಿಂಗ್ ಸ್ಟಾರ್ ಲೈನರ್ ನೌಕೆಯಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆ ಅವರು ವಾಪಸ್ ಬರುವುದು ಅಪಾಯಕಾರಿಯಾಗಿತ್ತು. ಹೀಗಾಗಿ ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಭೂಮಿಗೆ ಮರಳುವುದು ವಿಳಂಬವಾಗಿತ್ತು.
ಜೂನ್ 2024ರಿಂದ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ (ISS) ಸಿಲುಕಿದ್ದ ನಿಕ್ ಹೇಗ್ ಮತ್ತು ಅಲೆಕ್ಸಾಂಡರ್ ಗೋರ್ಬುನೋವ್ ಕೂಡಾ ಸುನೀತಾ ವಿಲಿಯಮ್ಸ್, ಬುಚ್ ವಿಲ್ಮೋರ್ ಅವರೊಂದಿಗೆ ಮರಳಿದ್ದಾರೆ.
ಐಎಸ್ ಎಸ್ ಕ್ರೂ–9 ಸದಸ್ಯರನ್ನು ಹೊತ್ತ ಸ್ಪೇಸ್ ಎಕ್ಸ್ ಡ್ರ್ಯಾಗನ್ ನೌಕೆ ಫ್ಲೋರಿಡಾದ ಸಮುದ್ರದಲ್ಲಿ ಸುರಕ್ಷಿತವಾಗಿ ಇಳಿಯಿತು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4