ತಿಪಟೂರು: ರೈತ ದಿನಾಚರಣೆಯ ಪ್ರಯುಕ್ತ ವಿಜಯಕರ್ನಾಟಕ ತುಮಕೂರು ಪತ್ರಿಕಾ ಬಳಗದಿಂದ ಸೂಪರ್ ಸ್ಟಾರ್ ರೈತ ಕಾರ್ಯಕ್ರಮವನ್ನು ಗುರುವಾರ ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮವನ್ನು ಶ್ರೀ ವೀರೇಶಾನಂದ ಸರಸ್ವತಿ ಸ್ವಾಮೀಜಿ ಬತ್ತ ಕುಟ್ಟುವ ಮೂಲಕ ಉದ್ಘಾಟನೆ ಮಾಡಿದರು.
ಸೂಪರ್ ಸ್ಟಾರ್ ರೈತ ಕಾರ್ಯಕ್ರಮಕ್ಕೆಮುಖ್ಯ ಅತಿಥಿಗಳಾಗಿ ತಿಪಟೂರು ತಾಲೂಕಿನ ಸಮಾಜ ಸೇವಕರು, ಕೆಪಿಸಿಸಿ ಅಸಂಘಟಿತ ಕಾರ್ಮಿಕ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಟಿ.ಶಾಂತಕುಮಾರ್ ಭಾಗವಹಿಸಿದ್ದು, ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, ಸಾಧಕ ರೈತರನ್ನು ಗುರುತಿಸಿ ವಿಜಯಕರ್ನಾಟಕ ಸೂಪರ್ ಸ್ಟಾರ್ ರೈತ ಕಾರ್ಯಕ್ರಮದಲ್ಲಿ ಸನ್ಮಾನಿಸುವ ಮೂಲಕ ಸಮಾಜಮುಖಿ ಕೆಲಸಕ್ಕೆ ಮುನ್ನುಡಿ ಇಟ್ಟಿದೆ ಮತ್ತು ರೈತರು ಕೃಷಿ ಉಪಕರಣಗಳನ್ನು ಪರಿಣಾಮಕಾರಿಗಳಾಗಿ ಉಪಯೋಗಿಸಿಕೊಂಡು ರೈತರು ಹೆಚ್ಚು ಇಳುವರಿ ತೆಗೆಯುವ ಕ್ರಮವನ್ನು ರೈತರು ಅಳವಡಿಸಿಕೊಳ್ಳಬೇಕು ಎಂದರು.
ಈ ಕಾರ್ಯಕ್ರಮದಲ್ಲಿ ತುಮಕೂರು ಜಿಲ್ಲಾಧಿಕಾರಿಗಳಾದ ವೈ.ಎಸ್.ಪಾಟೀಲ್ ಜಿಲ್ಲಾ ಪಂಚಾಯಿತಿ ಸಿಇಒ ಡಾ.ವಿದ್ಯಾಕುಮಾರಿ ಕೃಷಿ ನಿರ್ದೇಶಕ ಅಶೋಕ್ ಕಾಂಗ್ರೆಸ್ ಮುಖಂಡ ಕೆ.ಟಿ.ಶಾಂತಕುಮಾರ್ ಡಿ ಎಸ್ ಎಸ್ ಜಿಲ್ಲಾ ಸಂಚಾಲಕರು ನಿಟ್ಟೂರು ರಂಗಸ್ವಾಮಿ, ರೈತ ಸಂಘದ ಜಿಲ್ಲಾಧ್ಯಕ್ಷ ಆನಂದ್ ಸೇರಿದಂತೆ ಪ್ರಮುಖ ಮುಖಂಡರು ಹಾಜರಿದ್ದರು
ವರದಿ: ಮಂಜು ಗುರುಗದಹಳ್ಳಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy