ಮೈಸೂರು: ದಕ್ಷಿಣ ಭಾರತದ ಖ್ಯಾತ ನಟ, ಸೂಪರ್‌ಸ್ಟಾರ್ ರಜನಿಕಾಂತ್ ಅವರು ಮೈಸೂರಿನ ಪ್ರಸಿದ್ಧ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ, ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಸಿನಿಮಾ ಚಿತ್ರೀಕರಣದ ನಿಮಿತ್ತ ಮೈಸೂರಿನಲ್ಲಿ ತಂಗಿರುವ ನಟ ರಜನಿಕಾಂತ್, ಇಂದು ಚಾಮುಂಡಿ ಬೆಟ್ಟಕ್ಕೆ ತೆರಳಿ ದೇವಿಗೆ ಪೂಜೆ ಸಲ್ಲಿಸಿ ಕೃತಾರ್ಥರಾದರು. ಈ ವೇಳೆ ದೇವಸ್ಥಾನದ ಆಡಳಿತ ಮಂಡಳಿಯು ಸೂಪರ್ ಸ್ಟಾರ್ ಅವರಿಗೆ ಹೂವಿನ ಹಾರ ಹಾಕಿ ಗೌರವಪೂರ್ವಕವಾಗಿ ಸ್ವಾಗತಿಸಿ ಸನ್ಮಾನಿಸಿತು.
ಮೆಚ್ಚಿನ ನಟ ರಜನಿಕಾಂತ್ ಮೈಸೂರಿಗೆ ಆಗಮಿಸಿ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿರುವ ವಿಷಯ ತಿಳಿದು ಸ್ಥಳದಲ್ಲಿ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರು. ರಜನಿಕಾಂತ್ ಅವರ ಹೊಸ ಸಿನಿಮಾದ ಚಿತ್ರೀಕರಣಕ್ಕೆ ಸಂಬಂಧಿಸಿದ ಹೆಚ್ಚಿನ ವಿವರಗಳು ಹಾಗೂ ಅಧಿಕೃತ ಮಾಹಿತಿ ಇನ್ನಷ್ಟೇ ಹೊರಬರಬೇಕಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
