ಹೆಚ್.ಡಿ.ಕೋಟೆ: ಗ್ರಾಮ ಆಡಳಿತ ಅಧಿಕಾರಿಗಳ ನೌಕರರು ಕೈಗೊಂಡಿರುವ ಮುಷ್ಕರಕ್ಕೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಹೆಚ್.ಡಿ.ಕೋಟೆ ತಾಲೂಕಿನ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಎಂ. ಹಾಗೂ ರಾಜ್ಯ ಪರಿಷತ್ ಸದಸ್ಯರಾದ ಮಂಜುನಾಥ, ನಿರ್ದೇಶಕರಾದ ಮನೋಜ್ ಭಾಗವಹಿಸಿ ಬೆಂಬಲ ಸೂಚಿಸಿದರು.
ನೌಕರರ ಬೇಡಿಕೆಗಳನ್ನು ಆಲಿಸಿ ಶೀಘ್ರದಲ್ಲಿ ರಾಜ್ಯಾಧ್ಯಕ್ಷರ ಗಮನಕ್ಕೆ ತಂದು ಇದೇ ತಿಂಗಳು 20ರಂದು ನಡೆಯುವ ಸಮಾವೇಶದಲ್ಲಿ ಪ್ರಸ್ತಾಪಿಸಲಾಗುವುದು ಹಾಗೂ ಬೇಡಿಕೆ ಈಡೇರುವವರೆಗೂ ನಿಮ್ಮ ಜೊತೆ ನಾವಿರುತ್ತೇವೆ ಎನ್ನುವ ಮಾತುಗಳನ್ನು ಆಡಿದರು.
ಈ ಸಂದರ್ಭದಲ್ಲಿ ಗ್ರಾಮ ಆಡಳಿತ ಅಧಿಕಾರಿ ಸಂಘದ ಅಧ್ಯಕ್ಷರಾದ ಯೋಗೇಶ್ ಹಾಗೂ ಹಲವು ಪದಾಧಿಕಾರಿಗಳು ಮತ್ತು ಗ್ರಾಮ ಆಡಳಿತ ಅಧಿಕಾರಿಗಳು ಹಾಜರಿದ್ದರು.
ವರದಿ: ಮಲಾರ ಮಹದೇವಸ್ವಾಮಿ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4