ತುಮಕೂರು: ಮಧುಗಿರಿ ಶಾಸಕ ಕೆಎನ್ ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಿರುವುದರ ವಿರುದ್ಧ ಬೆಂಬಲಿಗರು ವ್ಯಾಪಕ ಪ್ರತಿಭಟನೆಗೆ ಮುಂದಾಗಿದ್ದಾರೆ.
ರಾಜಣ್ಣ ಅಭಿಮಾನಿಗಳು ದೆಹಲಿಗೆ ಹೋಗಿ ಜಂತರ್ ಮಂತರ್ ನಲ್ಲಿ ಅರೆಬೆತ್ತಲೆ ಮತ್ತು ಉಪವಾಸ ಸತ್ಯಾಗ್ರಹ ಮಾಡಲು ನಿರ್ಧಾರ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಸುಮಾರು 8ರಿಂದ 10 ಸಾವಿರ ಅಭಿಮಾನಿಗಳು ದೆಹಲಿಗೆ ತೆರಳಿ ಪ್ರತಿಭಟನೆ ನಡೆಸುವ ಮೂಲಕ ಕಾಂಗ್ರೆಸ್ ಹೈಕಮಾಂಡ್ ನ ಗಮನ ಸೆಳೆಯಲು ಮುಂದಾಗಿದ್ದಾರೆ.
ಕೆ.ಎನ್.ರಾಜಣ್ಣ ಅವರನ್ನ ಸಂಪುಟದಿಂದ ವಜಾಗೊಳಿಸಿರುವುದು ಅನ್ಯಾಯ ಎಂದಿರುವ ಅಭಿಮಾನಿಗಳು, ಡಿ.ಕೆ.ಶಿವಕುಮಾರ್ ಅವರು ಆರ್ ಎಸ್ ಎಸ್ ನ್ನು ಹೊಗಳಿದರೂ, ಬಿ.ಎಲ್.ಸಂತೋಷ್ ಅವರ ಪರ ವಹಿಸಿ ಮಾತನಾಡಿದರೂ ಕ್ರಮಕೈಗೊಳ್ಳಲಾಗಿಲ್ಲ. ಆದರೆ ರಾಜಣ್ಣ ಅವರಿಗೆ ಕನಿಷ್ಠ ನೋಟಿಸ್ ಕೂಡ ನೀಡದೇ ಏಕಾಏಕಿ ವಜಾಗೊಳಿಸಿರುವುದು ಅಸಮಾನತೆಯ ಕ್ರಮವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC