ಆಜಾನ್ ಗೆ ಪ್ರತಿಯಾಗಿ ಹನುಮಾನ್ ಚಾಲೀಸ, ಸುಪ್ರಭಾತ ಅಭಿಯಾನ ನಡೆಸುತ್ತಿರುವ ಸಂಘಟನೆಗಳ ವಿರುದ್ಧ ಕಾಂಗ್ರೆಸ್ ವಿಧಾನ ಪರಿಷತ್ ನಾಯಕ ಬಿ ಕೆ ಹರಿಪ್ರಸಾದ್ ಆಕ್ರೋಶ ವ್ಯಕ್ತಪಡಿಸಿದ್ದು, ಈ ಅಭಿಯಾನ ಪ್ರಾರಂಭ ಮಾಡುತ್ತಿರುವವರು ಅವರನ್ನು ಭಯೋತ್ಪಾದಕರು ಎಂದು ಕರೆಯಬೇಕು ಎಂದು ಹೇಳಿಕೆ ನೀಡಿದ್ದಾರೆ.
ಅಭಿಯಾನ ನಡೆಸುತ್ತಿರುವವರನ್ನು ಯುಎಪಿಎ ಕಾಯ್ದೆಯಡಿಯಲ್ಲಿ ಬಂಧಿಸಬೇಕು. ಇವರೆಲ್ಲರೂ ಸಂಘ ಪರಿವಾರದವರ ವಿವಿಧ ಆಕ್ಟೋಪಸ್ ಇದ್ದಂತೆ ಎಂದು ಸಂಘಟನೆಗಳ ವಿರುದ್ಧ ಕಿಡಿಕಾರಿದ್ದಾರೆ.
ಸರ್ಕಾರ ತನ್ನ ವೈಫಲ್ಯಗಳನ್ನು ಮುಚ್ಚಿಹಾಕಲು ಸಮಾಜ ವಿರೋಧಿ ಶಕ್ತಿಗಳನ್ನು ಬಳಸಿಕೊಳ್ಳುತ್ತಿದೆ. ಇವರೆಲ್ಲರೂ ಸಂಘ ಪರಿವಾರದವರ ವಿವಿಧ ಆಕ್ಟೋಪಸ್ ಇದ್ದಂತೆ. ಸಮಾಜದಲ್ಲಿ ಶಾಂತಿಯನ್ನು ಕದಡಲು ಪ್ರಯತ್ನ ಮಾಡುತ್ತಿರುವ ಇವರನ್ನೆಲ್ಲ ಯುಎಪಿಎ ಅಡಿಯಲ್ಲಿ ಅರೆಸ್ಟ್ ಮಾಡಬೇಕು ಎಂದು ಒತ್ತಾಯಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5


