ನವದೆಹಲಿ: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆದೇಶವನ್ನು ಪುನರ್ ಪರಿಶೀಲಿಸುವಂತೆ ಎ1 ಆರೋಪಿ ಪವಿತ್ರಾ ಗೌಡ(Pavithra Gowda) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ತನ್ನ ಮಗಳು ಮತ್ತು ಪೋಷಕರ ಪೋಷಣೆಗಾಗಿ ಜಾಮೀನು ಕೋರಿ ಪವಿತ್ರಾ ಗೌಡ ಸುಪ್ರೀಂ ಕೋರ್ಟ್ ಗೆ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿ ಜೆ.ಬಿ.ಪರ್ದಿವಾಲಾ ಹಾಗೂ ಆರ್. ಮಹಾದೇವನ್ ಅವರನ್ನೊಳಗೊಂಡ ದ್ವಿಸದಸ್ಯ ಪೀಠ ಅರ್ಜಿಯನ್ನು ವಜಾಗೊಳಿಸಿದೆ.
ಅಲ್ಲದೇ ಅರ್ಜಿ ವಿಚಾರಣೆ ವೇಳೆ ನಾವು ಆದೇಶ ಮತ್ತು ದಾಖಲೆಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿದ್ದೇವೆ. ಮತ್ತೊಮ್ಮೆ ಪರಿಶೀಲನೆ ನಡೆಸಿ ಆದೇಶ ಮಾಡುವ ಅಗತ್ಯವಿಲ್ಲ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


