ನವದೆಹಲಿ: ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಇದರ ಬೆನ್ನಲ್ಲೇ, ಅವರನ್ನು ಜೈಲಿನಿಂದ ಬಿಡುಗಡೆಗೊಳಿಸಿ ದೆಹಲಿ ನ್ಯಾಯಾಲಯ ಆದೇಶಿಸಿದೆ.
ಕೇಜ್ರಿವಾಲ್ ಪರ ವಕೀಲರು ಕೋರ್ಟ್‌ಗೆ ಇಬ್ಬರ ಜಾಮೀನು ಹಾಗೂ ರೂ.10 ಲಕ್ಷ ಭದ್ರತಾ ಬಾಂಡ್ ನೀಡಿದ ಬಳಿಕ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ರಾಕೇಶ್ ಸ್ಯಾಲ್ ಅವರು ಬಿಡುಗಡೆ ಆದೇಶ ಮಾಡಿದರು.
ನ್ಯಾಯಮೂರ್ತಿಗಳಾದ ಸೂರ್ಯ ಕಾಂತ ಹಾಗೂ ಉಜ್ಜಲ್ ಭುಯನ್ ಅವರಿದ್ದ ಪೀಠ ಕೇಜ್ರಿವಾಲ್ ಅವರಿಗೆ ಜಾಮೀನು ಮಂಜೂರು ಮಾಡಿ ಆದೇಶಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q