ಬೆಂಗಳೂರು: ರಾಜ್ಯದಲ್ಲಿ ಆಜಾನ್ ವಿವಾದ ತೀವ್ರಗೊಂಡಿರುವ ವೇಳೆ, ಸುಪ್ರೀಂ ಕೋರ್ಟ್ ನೀಡಿರುವ ಆದೇಶವನ್ನು ಎಲ್ಲರೂ ಪಾಲನೆ ಮಾಡಬೇಕು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಸುಪ್ರೀಂ ಕೋರ್ಟ್ ಆದೇಶ ಇದೆ. ಆ ಆದೇಶವನ್ನು ಎಲ್ಲರು ಪಾಲನೆ ಮಾಡಬೇಕು. ಈ ವಿಷಯ ಕುರಿತು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ರಾಜ್ಯದಲ್ಲಿ ಏನೇನು ಆಗುತ್ತಿದೆ, ಬೇರೆ ಬೇರೆ ರಾಜ್ಯಗಳಲ್ಲಿ ಏನು ಆಗುತ್ತಿದೆ ಎಂಬುದನ್ನು ಗಮನಿಸುತ್ತಿದ್ದೇವೆ ಎಂದರು.
ಈ ವಿವಾದವನ್ನು ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳಬೇಕು. ಈ ಸಂಬಂಧ ಸಂಜೆಯ ಸಭೆಯಲ್ಲಿ ಚರ್ಚೆ ಮಾಡುತ್ತೇವೆ ಎಂದು ತಿಳಿಸಿದರು.
ಡಿಸಿ, ಸಿಇಒ ಗಳ ಜತೆ ಸಭೆ ಸುಮಾರು ನಾಲ್ಕು ತಾಸು ನಿನ್ನೆ ಡಿಸಿಗಳ ಜತೆಗೆ ಸಭೆ ಮಾಡಿದ್ದೇನೆ. ಇವತ್ತು ಸಿಇಒಗಳ ಜೊತೆಗೆ ಸಭೆ ಮಾಡಿದ್ದೇನೆ. ಯಾವ ರೀತಿ ರಾಜ್ಯದ ಆಡಳಿತ ಚುರುಕು, ಜನಪರ ಆಗಿರಬೇಕು ಅಂತ ಹೇಳಿದ್ದೇನೆ. ಯೋಜನೆಗಳನ್ನು ದಕ್ಷತೆಯಿಂದ ಸಮಯಬದ್ದವಾಗಿ ಜನರಿಗೆ ಮುಟ್ಟಿಸಬೇಕು ಅಂತ ಹೇಳಿದ್ದೇನೆ ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5


