ಬೆಂಗಳೂರು: ಸಿದ್ದರಾಮಯ್ಯನವರ ರಾಜೀನಾಮೆ ತೆಗೆದುಕೊಳ್ಳಲು ಒಂದು ಭೂಮಿಕೆ ಸಿದ್ಧಪಡಿಸಲು ಕಾಂಗ್ರೆಸ್ಸಿನ ಹಿರಿಯ ನಾಯಕ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಅವರು ಕರ್ನಾಟಕಕ್ಕೆ ಬಂದಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ.
ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುರ್ಜೇವಾಲಾ ಅವರು ಕರ್ನಾಟಕದಲ್ಲಿ ಬೀಡುಬಿಟ್ಟಿದ್ದಾರೆ. ರಾಜ್ಯದ ಭ್ರಷ್ಟ ಸರಕಾರ ನೆಲಕಚ್ಚಿದ ಬಗ್ಗೆ ಅವರು ತಲೆ ಕೆಡಿಸಿಕೊಂಡಿಲ್ಲ ಎಂದು ಆರೋಪಿಸಿದರು.
ಸುರ್ಜೇವಾಲಾ ಅವರು ಶಾಸಕರ ಅಭಿಪ್ರಾಯ ಪಡೆದುಕೊಂಡಿದ್ದಾರೆ. ಮುಖ್ಯಮಂತ್ರಿ ಗಾದಿಗೆ ಪೈಪೋಟಿ ಹೆಚ್ಚಾಗಿದ್ದು, ಕುದುರೆ ವ್ಯಾಪಾರ ಜೋರಾಗಲಿದೆ ಎಂದು ವಿಶ್ಲೇಷಿಸಿದರು.
ರಾಮನಗರ ಕ್ಷೇತ್ರದ ಶಾಸಕ ಇಕ್ಬಾಲ್ ಅವರು ಡಿಕೆಶಿಯವರಿಗೆ 100 ಜನ ಶಾಸಕರ ಬೆಂಬಲ ಇದೆ; ಅವರು ಮುಖ್ಯಮಂತ್ರಿ ಆಗಬೇಕು ಎಂದಿದ್ದಾರೆ. ಕಾಂಗ್ರೆಸ್ಸಿನ ಹಿರಿಯ ಶಾಸಕರಾದ ಬಿ.ಆರ್.ಪಾಟೀಲ್, ರಾಜು ಕಾಗೆಯವರು ಸೇರಿ ಬೇರೆ ಬೇರೆ ಶಾಸಕರು ಮುಖ್ಯಮಂತ್ರಿಗಳ ವಿರುದ್ಧ ಹೇಳಿಕೆ ಕೊಡುತ್ತಿದ್ದಾರೆ. ಮುಖ್ಯಮಂತ್ರಿಗಳು ಅವರ ಪಕ್ಷದ ಶಾಸಕರ ವಿಶ್ವಾಸವನ್ನೂ ಕಳಕೊಂಡಿದ್ದಾರೆ ಎಂದರು. ಕುದುರೆ ವ್ಯಾಪಾರದ ಬಗ್ಗೆ ಮಾನ್ಯ ರಾಜ್ಯಪಾಲರೂ ಗಮನಿಸಬೇಕು ಎಂದು ವಿನಂತಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC