ಬೆಂಗಳೂರು: ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7ರವರೆಗೆ ನಿಗದಿತ ಕಾಲಮಿತಿಯಲ್ಲಿ ಸಮೀಕ್ಷೆ ನಡೆಯಲಿದ್ದು, ಇದರಲ್ಲಿ ಯಾವುದೇ ಗೊಂದಲ ಇಲ್ಲ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್.ತಂಗಡಗಿ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನ ತಮ್ಮ ಗೃಹ ಕಚೇರಿ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮಲಿ ಸಮೀಕ್ಷೆಗೆ ಸಂಬಂಧಿಸಿದಂತೆ ಯಾವುದೇ ಗೊಂದಲ ಇಲ್ಲ. ಒಂದು ತಿಂಗಳ ಮುಂಚಿತವಾಗಿಯೇ ಸಮೀಕ್ಷೆಯ ದಿನಾಂಕವನ್ನು ಪ್ರಕಟ ಮಾಡಿದ್ದೇವೆ. ಈಗಾಗಲೇ ಇದಕ್ಕೆ ಬೇಕಾದ ಸಿದ್ಧತೆಗಳು ನಡೆದಿವೆ. ಅಕ್ಟೋಬರ್ನಲ್ಲಿ ಸಮೀಕ್ಷೆ ಪೂರ್ಣಗೊಂಡು ಡಿಸೆಂಬರ್ನಲ್ಲಿ ಆಯೋಗ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ. ಸರ್ಕಾರವು ವರದಿ ಜಾರಿ ಮಾಡಲಿದೆ ಎಂದು ಹೇಳಿದರು.
ದೊಡ್ಡ ಕಾರ್ಯಕ್ಕೆ ಸರ್ಕಾರ ಕೈ ಹಾಕಿದ್ದು, ಇದು ನಮಗೆ ಸವಾಲಿನ ಕೆಲಸ ಕೂಡ. ಇದರಲ್ಲಿ ಯಶಸ್ವಿಯೂ ಕೂಡ ಆಗುತ್ತೇವೆ. ಯಾವುದೇ ಸವಾಲಿನ ಕೆಲಸಕ್ಕೆ ಕೈ ಹಾಕಿದರೆ ಸಣ್ಣ- – ಪುಟ್ಟ ಲೋಪಗಳು ಸಹಜ ಎಂದು ತಿಳಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC