ಜೊತೆ ಜೊತೆಯಲಿ ವಿವಾದದಿಂದ 2 ವರ್ಷ ಕಿರುತೆರೆಯಿಂದ ನಿಷೇಧಕ್ಕೆ ಒಳಗಾಗಿದ್ದ ನಟ ಅನಿರುದ್ಧ್ ಇದೀಗ ಕಿರುತೆರೆಗೆ ಮರಳುವ ಮೂಲಕ ಅಭಿಮಾನಿಗಳಿಗೆ ಸಂತಸದ ಸುದ್ದಿ ನೀಡಿದ್ದಾರೆ.
ನಟ ಅನಿರುದ್ಧ್ರಿಗೆ ಯಾವುದೇ ವಾಹಿನಿಗಳು ಕೂಡ ಕೆಲಸ ಕೊಡದಂತೆ ಮನವಿ ಮಾಡಿಕೊಳ್ಳಲಾಗಿತ್ತು. ಆದರೆ, ಚಿತ್ರಣ ಬೇರೆ ರೀತಿಯಲ್ಲೇ ಬದಲಾಗಿದೆ. ನಿರ್ಮಾಪಕರ ಸಂಘ ಮಾಡಿಕೊಂಡಿದ್ದ ಮನವಿಯನ್ನು ಉದಯ ವಾಹಿನಿ ತಳ್ಳಿಹಾಕಿದೆ.
ಪರಿಣಾಮ ಸೂರ್ಯವಂಶ ಧಾರಾವಾಹಿಗೆ ಅನಿರುದ್ಧ ಅವರನ್ನು ಪ್ರಮುಖ ಪಾತ್ರಕ್ಕೆ ಆಯ್ಕೆ ಮಾಡಿಕೊಳ್ಳಲಾಗಿದೆ. ಈ ಕುರಿತು ಅನಿರುದ್ಧ ಅವರೇ ಸ್ಪಷ್ಟ ಪಡಿಸಿದ್ದಾರೆ.
ತಾವು ಉದಯ ವಾಹಿನಿಯಲ್ಲಿ ಪ್ರಸಾರ ಕಾಣಲಿರುವ ಸೂರ್ಯವಂಶ ಧಾರಾವಾಹಿಯಲ್ಲಿ ನಟಿಸುತ್ತಿರುವುದಾಗಿ ತಿಳಿಸಿದ್ದಾರೆ. ಈ ಕುರಿತು ಫೇಸ್ ಬುಕ್ನಲ್ಲಿ ಬರೆದುಕೊಂಡಿರುವ ಅವರು, ಅತ್ಯಂತ ಸಂತೋಷದಿಂದ ತಮ್ಮೆಲ್ಲರ ಜೊತೆ ಒಂದು ಸಿಹಿ ಸುದ್ದಿ ಹಂಚಿಕೊಳ್ಳುತ್ತಾ ಇದ್ದೇನೆ. ನಮ್ಮೆಲ್ಲರ ನೆಚ್ಚಿನ ಉದಯ ವಾಹಿನಿಯಲ್ಲಿ ಅತಿ ಶೀಘ್ರದಲ್ಲಿ ಪ್ರಸಾರವಾಗಲಿರುವ ಧಾರಾವಾಹಿಯಲ್ಲಿ ನಟಿಸುತ್ತಿದ್ದೇನೆ ಎಂದು ಘೋಷಿಸಿದ್ದಾರೆ.
S.ನಾರಾಯಣ್ ಅವರ ರಚನೆ ಹಾಗೂ ನಿರ್ದೇಶನದ ಹೊಸ ಧಾರಾವಾಹಿ ‘ಸೂರ್ಯವಂಶ’ದಲ್ಲಿ ನಾನು ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದೇನೆ. ಇದು ತಮ್ಮೆಲ್ಲರ ಹಾರೈಕೆ, ಆಶೀರ್ವಾದಗಳ ಫಲ. ತಮ್ಮ ಪ್ರೀತಿ, ಪ್ರೋತ್ಸಾಹ ನನ್ನ ಮೇಲೆ ಸದಾ ಇರುತ್ತೆ ಅನ್ನೋ ಭರವಸೆ ನನಗಿದೆ’ ಎಂದು ಬರೆದುಕೊಂಡಿದ್ದಾರೆ.
ಹೀಗಾಗಿ ಧಾರಾವಾಹಿ ಬಗ್ಗೆ ಸಹಜವಾಗಿಯೇ ಕುತೂಹಲ ಮೂಡಿದೆ. ಈ ಕುರಿತು ಕಿರುತೆರೆ ನಿರ್ಮಾಪಕ ಸಂಘ ಏನು ಹೇಳುತ್ತದೆ ಎನ್ನುವುದನ್ನು ಕಾದು ನೋಡಬೇಕು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy